ಆ್ಯಪ್ನಗರ

ನೋಯ್ಡಾ ಏರ್‌ಪೋರ್ಟ್‌ ನಿರ್ಮಾಣಕ್ಕೆ ಅಸ್ತು

ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯವು ಗ್ರೇಟರ್‌ ನೋಯ್ಡಾದ ಹೊರವಲಯದಲ್ಲಿ ನಿರ್ಮಾಣವಾಗಲಿರುವ ನೂತನ ವಿಮಾನ ನಿಲ್ದಾಣ ಯೋಜನೆಗೆ ತಾತ್ವಿಕ ಅನುಮೋದನೆ ನೀಡಿದೆ.

TNN & Agencies 24 Apr 2018, 5:00 am
ಹೊಸದಿಲ್ಲಿ : ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯವು ಗ್ರೇಟರ್‌ ನೋಯ್ಡಾದ ಹೊರವಲಯದಲ್ಲಿ ನಿರ್ಮಾಣವಾಗಲಿರುವ ನೂತನ ವಿಮಾನ ನಿಲ್ದಾಣ ಯೋಜನೆಗೆ ತಾತ್ವಿಕ ಅನುಮೋದನೆ ನೀಡಿದೆ.
Vijaya Karnataka Web govt clears 1 bn noida airport project in jewar
ನೋಯ್ಡಾ ಏರ್‌ಪೋರ್ಟ್‌ ನಿರ್ಮಾಣಕ್ಕೆ ಅಸ್ತು


100 ಕೋಟಿ ಡಾಲರ್‌ ವೆಚ್ಚದಲ್ಲಿ ಜೆವಾರ್‌ ಎಂಬಲ್ಲಿ ವಿಮಾನ ನಿಲ್ದಾಣ ಅಸ್ತಿತ್ವಕ್ಕೆ ಬರಲಿದೆ. ರಾಷ್ಟ್ರ ರಾಜಧಾನಿಯ ಸಮೀಪ ಅಸ್ತಿತ್ವಕ್ಕೆ ಬರುತ್ತಿರುವ ಎರಡನೇ ವಿಮಾನ ನಿಲ್ದಾಣ ಇದಾಗಿದೆ.

ಮುಂದಿನ ಮೂರು ವರ್ಷಗಳಲ್ಲಿ ಈ ವಿಮಾನ ನಿಲ್ದಾಣ ಅಸ್ತಿತ್ವಕ್ಕೆ ಬರಲಿದೆ ಎಂದು ಇಲಾಖಾ ಕಾರ್ಯದರ್ಶಿ ರಾಜೀವ್‌ ನಾರಾಯಣ್‌ ಚುಬೆ ತಿಳಿಸಿದ್ದಾರೆ. ಆಗಸ್ಟ್‌ನಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಬಿಡ್‌ ಪ್ರಕ್ರಿಯೆ ನಡೆಯಲಿದೆ. ಒಟ್ಟು 4,000 ಎಕರೆ ಪ್ರದೇಶದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗಲಿದ್ದು, ಮೊದಲ ಹಂತದಲ್ಲಿ 2,500 ಎಕರೆ ಪ್ರದೇಶ ಬಳಕೆಯಾಗಲಿದೆ. ಭೂಸ್ವಾಧೀನಕ್ಕಾಗಿ 4,000 ಕೋಟಿ ರೂ. ವೆಚ್ಚವಾಗಲಿದೆ. ನಿಲ್ದಾಣ ನಿರ್ಮಾಣಕ್ಕೆ 3,500 ಕೋಟಿ ರೂ. ಖರ್ಚಾಗಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ