ಆ್ಯಪ್ನಗರ

ಜಿಎಸ್‌ಟಿ ಸಭೆ ಮುಂದೂಡಿಕೆ

ಎಲೆಕ್ಟ್ರಿಕ್‌ ವಾಹನಗಳ ಮೇಲಿನ ತೆರಿಗೆ ದರವನ್ನು ಕಡಿತಗೊಳಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕಿದ್ದ, ಗುರುವಾರ ನಡೆಸಲು ಉದ್ದೇಶಿಸಿದ್ದ ಜಿಎಸ್‌ಟಿ ಕೌನ್ಸಿಲ್‌ನ ಸಭೆಯನ್ನು ಮುಂದೂಡಲಾಗಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಸಂಸತ್‌ ಕಲಾಪಗಳಲ್ಲಿ ಬ್ಯುಸಿಯಾಗಿದ್ದರಿಂದ ಸಭೆಯನ್ನು ಮುಂದೂಡಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Vijaya Karnataka Web 26 Jul 2019, 5:00 am
ಹೊಸದಿಲ್ಲಿ : ಎಲೆಕ್ಟ್ರಿಕ್‌ ವಾಹನಗಳ ಮೇಲಿನ ತೆರಿಗೆ ದರವನ್ನು ಕಡಿತಗೊಳಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕಿದ್ದ, ಗುರುವಾರ ನಡೆಸಲು ಉದ್ದೇಶಿಸಿದ್ದ ಜಿಎಸ್‌ಟಿ ಕೌನ್ಸಿಲ್‌ನ ಸಭೆಯನ್ನು ಮುಂದೂಡಲಾಗಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಸಂಸತ್‌ ಕಲಾಪಗಳಲ್ಲಿ ಬ್ಯುಸಿಯಾಗಿದ್ದರಿಂದ ಸಭೆಯನ್ನು ಮುಂದೂಡಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Vijaya Karnataka Web gst meeting postponed
ಜಿಎಸ್‌ಟಿ ಸಭೆ ಮುಂದೂಡಿಕೆ


ವಿಡಿಯೋ ಕಾನ್ಫರೆನ್ಸಿಂಗ್‌ ಮೂಲಕ ನಡೆಯಬೇಕಿದ್ದ 36 ನೇ ಜಿಎಸ್‌ಟಿ ಕೌನ್ಸಿಲ್‌ ಸಭೆಯ ಕಾರ್ಯಸೂಚಿಯಲ್ಲಿ, ಕೇವಲ ಇ-ವಾಹನಗಳ ಮೇಲಿನ ಜಿಎಸ್‌ಟಿ ದರವನ್ನು ಶೇಕಡಾ 12 ರಿಂದ ಶೇ 5 ಕ್ಕೆ ಇಳಿಸುವ ಕೇಂದ್ರದ ಪ್ರಸ್ತಾಪವನ್ನು ಪರಿಗಣಿಸಬೇಕಾಗಿತ್ತು.

''ಜಿಎಎಸ್‌ಟಿ ಕೌನ್ಸಿಲ್‌ ಸಭೆಯನ್ನು ಮುಂದೂಡಲಾಗಿದೆ ಮತ್ತು ಹೊಸ ದಿನಾಂಕವನ್ನು ನಂತರ ನಿರ್ಧರಿಸಲಾಗುವುದು'' ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ