ಆ್ಯಪ್ನಗರ

ಆರೋಗ್ಯ ಇಲಾಖೆಗೆ ನೀಡಿರುವ ಅನುದಾನ ಆಸ್ಪತ್ರೆಗಳಿಗೆ ಸುಣ್ಣ ಬಳಿಯಲೂ ಸಾಲದು- ಎಚ್‌ಡಿಕೆ ವ್ಯಂಗ್ಯ

ಬಜೆಟ್‌ನಲ್ಲಿ ಆರೋಗ್ಯ ಇಲಾಖೆಗೆ ನೀಡಿರುವ ಅನುದಾನದಲ್ಲಿ ಆಸ್ಪತ್ರೆಗೆ ಸುಣ್ಣ ಬಳಿಯುವುದಕ್ಕೂ ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹೇಳಿದರು. ಬಿಎಸ್‌ವೈ ಬಜೆಟ್‌ ಕುರಿತಾಗಿ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದು ಹೀಗೆ.

Vijaya Karnataka Web 5 Mar 2020, 4:50 pm
ಬೆಂಗಳೂರು: ಬಜೆಟ್‌ನಲ್ಲಿ ಆರೋಗ್ಯ ಇಲಾಖೆಗೆ ನೀಡಿರುವ ಅನುದಾನದಲ್ಲಿ ಆಸ್ಪತ್ರೆಗಳಿಗೆ ಸುಣ್ಣ– ಬಣ್ಣ ಬಳಿಯುವುದಕ್ಕೂ ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿಯವರು ವ್ಯಂಗ್ಯವಾಗಿ ಟೀಕಿಸಿದ್ದಾರೆ.
Vijaya Karnataka Web jds leader hd kumaraswamy reaction on karnataka budget 2020
ಆರೋಗ್ಯ ಇಲಾಖೆಗೆ ನೀಡಿರುವ ಅನುದಾನ ಆಸ್ಪತ್ರೆಗಳಿಗೆ ಸುಣ್ಣ ಬಳಿಯಲೂ ಸಾಲದು- ಎಚ್‌ಡಿಕೆ ವ್ಯಂಗ್ಯ


ಬಜೆಟ್‌ ಕುರಿತಾಗಿ ಪ್ರತಿಕ್ರಿಯೆ ನೀಡಿದ ಅವರು, ‘ಹಲವು ಸವಾಲುಗಳ ನಡುವೆಯೂ ರಾಜ್ಯದ ತೆರಿಗೆ ಸಂಗ್ರಹ ಪರಿಸ್ಥಿತಿ ಉತ್ತಮವಾಗಿದೆ. ಕಳೆದ ಬಾರಿ ನಾವು ಬಜೆಟ್‌ ಮಂಡನೆ ವೇಳೆ ನಾವು ನಿರೀಕ್ಷೆ ಮಾಡಿದಷ್ಟು ಶೇ 14ರಷ್ಟು ತೆರಿಗೆ ಹೆಚ್ಚಿಗೆ ಸಂಗ್ರಹವಾಗಿದೆ’ ಎಂದು ಹೇಳಿದರು.

ಕರ್ನಾಟಕ ಪ್ರವಾಸ: ಹಲವು ಜಗತ್ತುಗಳ ರಾಜ್ಯಕ್ಕೆ ಸಿಕ್ಕಿದ್ದೇನು?

ನಮ್ಮ ಸರ್ಕಾರದ ಅವಧಿಯಲ್ಲಿ ಜಾರಿಯಲ್ಲಿದ್ದ ಯೋಜನೆಗಳನ್ನೇ ಮುಂದುವರಿಸಲಾಗಿದೆ. ಅಲ್ಲದೆ ಈ ಬಾರಿ ಮಂಡಿಸಲಾದ ಘೋಷಣೆಗಳಲ್ಲಿ ಸ್ಪಷ್ಟತೆ ಇಲ್ಲ. ಬಿಜೆಪಿಯವರಿಂದ ಹೊಸ ಯೋಜನೆಗಳನ್ನು ಜಾರಿಗೆ ತರಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಬಿಎಸ್‌ವೈ ಬಜೆಟ್‌ನಲ್ಲಿ ವನ್ಯ ಜೀವಿ, ಪ್ರಾಣಿ, ಪಕ್ಷಿ, ಜಲಚರಗಳಿಗೂ ಇದೆ ಪಾಲು..!

ಕೇಂದ್ರದಿಂದ ರಾಜ್ಯಕ್ಕೆ ಸಿಗಬೇಕಾದ ತೆರಿಗೆ ಪಾಲು ಸಿಗುತ್ತೊ ಇಲ್ಲವೊ ಎಂಬ ಅನುಮಾನ ರಾಜ್ಯ ಸರ್ಕಾರಕ್ಕೆ ಇದೆ. ಸರ್ಕಾರದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿಲ್ಲ ಎಂಬುದನ್ನು ಯಡಿಯೂರಪ್ಪನವರೇ ಹೇಳಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದರು.

ಈ ಬಜೆಟ್ ಬಗ್ಗೆ ಏನು ನಿರೀಕ್ಷೆ ಇಟ್ಟುಕೊಂಡಿರಲಿಲ್ಲ, ಯಾರಿಗೂ ಕೂಡ ಖುಷಿ ಇಲ್ಲದ ಬಜೆಟ್ ಇದು. ಸಚಿವರಿಗೆ ಈ ಬಜೆಟ್ ಬಗ್ಗೆ ವಿಶ್ವಾಸವಿಲ್ಲ ಅಷ್ಟೇ ಅಲ್ಲ, ಜನತೆಗೆ ಉಪಯೋಗವಾಗುವಂತಹ ಬಜೆಟ್ ಇದಲ್ಲ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ