ಆ್ಯಪ್ನಗರ

ರಾಜ್ಯಕ್ಕೆ ಕೇಂದ್ರದಿಂದ ಜಿಎಸ್‌ಟಿ ಪರಿಹಾರ: ವಾಣಿಜ್ಯ ಚೈತನ್ಯಕ್ಕೆ ಸಹಕಾರ!

ಸರಣಿ ಲಾಕ್‌ಡೌನ್‌ ಪರಿಣಾಮವಾಗಿ ಆರ್ಥಿಕ ಹೊರೆ ಎದುರಿಸುತ್ತಿದ್ದ ಕರ್ನಾಟಕಕ್ಕೆ, ಜಿಎಸ್‌ಟಿ ಪರಿಹಾರ ಮೊತ್ತ ನೀಡುವ ಮೂಲಕ ಕೇಂದ್ರ ಸರ್ಕಾರ ನೆರವುಗೆ ಬಂದಿದೆ. ಕೇಂದ್ರ ಸರ್ಕಾರದಿಂದ 3 ತಿಂಗಳ ಬಾಕಿ ಮೊತ್ತ 4,313 ಕೋಟಿ ರೂ. ಬಿಡುಗಡೆಯಾಗಿದೆ.

Vijaya Karnataka Web 7 Jun 2020, 8:39 am
ಬೆಂಗಳೂರು: ಅನ್‌ಲಾಕ್ ಪರಿಸ್ಥಿತಿಗೆ ಹೊಂದಿಕೊಳ್ಳುತ್ತಿರುವ ರಾಜ್ಯಕ್ಕೆ ಸರಿಯಾದ ಸಮಯಕ್ಕೆ ಕೇಂದ್ರ ಸರ್ಕಾರದಿಂದ ಜಿಎಸ್‌ಟಿ ಪರಿಹಾರ ದೊರೆತಿದೆ.
Vijaya Karnataka Web gst 2.
ಸಂಗ್ರಹ ಚಿತ್ರ


ರಾಜ್ಯಕ್ಕೆ ಕಳೆದ ಡಿಸೆಂಬರ್ 2019-ಫೆಬ್ರವರಿ 2020ರ ಮೂರು ತಿಂಗಳ ಅವಧಿಯ ಆದಾಯ ನಷ್ಟವನ್ನು ಕೇಂದ್ರ ಸರ್ಕಾರ ನೀಡಿದೆ. ಈ ಮೂಲಕ ರಾಜ್ಯಕ್ಕೆ ಸರಕು ಮತ್ತು ಸೇವಾ ತೆರಿಗೆ ಕಾಯ್ದೆ ಅನ್ವಯ ಆದಾಯ ನಷ್ಟ ಪರಿವಾರವಾಗಿ ಕೇಂದ್ರ ಸರ್ಕಾರದಿಂದ 3 ತಿಂಗಳ ಬಾಕಿ ಮೊತ್ತ 4,313 ಕೋಟಿ ರೂ. ಬಿಡುಗಡೆಯಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಕೇಂದ್ರ ಹಣಕಾಸು ಸಚಿವಾಲಯ, ಕರ್ನಾಟಕಕ್ಕೆ ಮೂರು ತಿಂಗಳ ಅವಧಿಯ ಆದಾಯ ನಷ್ಟದ ಪರಿಹಾರದ ಮೊತ್ತವಾಗಿ 4,313 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದೆ.

ಕೇಂದ್ರದಿಂದ 1536.82 ಕೋಟಿ ಜಿಎಸ್‌ಟಿ ಬಾಕಿ ಬಿಡುಗಡೆ, ರಾಜ್ಯ ತುಸು ನಿರಾಳ

ಸರಣಿ ಲಾಕ್‌ಡೌನ್‌ನಿಂದಾಗಿ ಆರ್ಥಿಕ ನಷ್ಟ ಅನುಭವಿಸುತ್ತಿದ್ದ ರಾಜ್ಯಕ್ಕೆ ಕೇಂದ್ರದ ಈ ನೆರವು ಅನುಕೂಲ ಕಲ್ಪಿಸಲಿದೆ ಎಂದು ಹೇಳಲಾಗಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮನವಿಯ ಮೇರೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜಿಎಸ್‌ಟಿ ಪರಿಹಾರ ಮೊತ್ತ ಬಿಡುಗಡೆ ಮಾಡಿದ್ದಾರೆ.

ಇನ್ನು ಜಿಎಸ್‌ಟಿ ಹೊರತುಪಡಿಸಿ 15ನೇ ಹಣಕಾಸು ಆಯೋಗದ ಶಿಫಾರಸ್ಸಿನ ಅನ್ವಯ ರಾಜ್ಯಕ್ಕೆ 5,495 ಕೋಟಿ ರೂ. ವಿಶೇಷ ಅನುದಾನ ಬರಬೇಕಾಗಿದ್ದು ,ರಾಜ್ಯ ಸರ್ಕಾರ ಈ ಹಣವನ್ನೂ ಬಿಡುಗಡೆ ಮಾಡುವಂತೆ ಕೇಂದ್ರ ಹಣಕಾಸು ಸಚಿವಾಲಯಕ್ಕೆ ಮನವಿ ಮಾಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ