ಆ್ಯಪ್ನಗರ

ಯಾವುದೇ ವಾಣಿಜ್ಯ ಬ್ಯಾಂಕ್‌ ಮುಚ್ಚುವುದಿಲ್ಲ: ಆರ್‌ಬಿಐ ಸ್ಪಷ್ಟನೆ

ಸಾರ್ವಜನಿಕ ವಲಯದ ಬ್ಯಾಂಕ್‌ಗಳನ್ನು ಬಲಗೊಳಿಸಲು, ಮರು ಬಂಡವಾಳ ಪೂರೈಕೆಗೆ ಕೇಂದ್ರ ಸರಕಾರ ಮುಂದಾಗಿದೆ. ಏತನ್ಮಧ್ಯೆ, ದುರುದ್ದೇಶ ಪೂರಿತ ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿಹರಿದಾಡುತ್ತಿವೆ ಎಂದು ಹಣಕಾಸು ಕಾರ್ಯದರ್ಶಿ ರಾಜೀವ್‌ ಕುಮಾರ್‌ ಹೇಳಿದ್ದಾರೆ.

Vijaya Karnataka Web 25 Sep 2019, 9:17 pm
ಮುಂಬಯಿ: ಬ್ಯಾಂಕ್‌ಗಳ ವಿಲೀನದ ಬೆನ್ನಲ್ಲೇ ವಾಣಿಜ್ಯ ಬ್ಯಾಂಕ್‌ಗಳ ಪೈಕಿ ಕೆಲವನ್ನು ಮುಚ್ಚಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರುತ್ತಿರುವ ವರದಿಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಸ್ಪಷ್ಟವಾಗಿ ತಳ್ಳಿಹಾಕಿದೆ.
Vijaya Karnataka Web ಆರ್‌ಬಿಐ
ಆರ್‌ಬಿಐ


ಈ ಕುರಿತು ಟ್ವೀಟ್ ಮಾಡಿರುವ ಆರ್‌ಬಿಐ, ಈ ವರದಿಗಳು ಸತ್ಯಕ್ಕೆ ದೂರವಾಗಿವೆ ಎಂದು ಹೇಳಿದೆ.

ಕೆಲವು ಬ್ಯಾಂಕ್‌ಗಳನ್ನು ಮುಚ್ಚಲು ಆರ್‌ಬಿಐ ಮುಂದಾಗಿದೆ ಎಂಬದರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಊಹಾಪೋಹಾಗಳನ್ನು ಹಣಕಾಸು ಸಚಿವಾಲಯ ಕೂಡ ತಳ್ಳಿಹಾಕಿದೆ.

ಈ ಕುರಿತು ಟ್ವೀಟ್ ಸಂದೇಶ ನೀಡಿರುವ ಹಣಕಾಸು ಕಾರ್ಯದರ್ಶಿ ರಾಜೀವ್‌ಕುಮಾರ್, ಸಾರ್ವಜನಿಕ ವಲಯದ ಯಾವುದೇ ಬ್ಯಾಂಕ್‌ಗಳನ್ನು ಮುಚ್ಚುವ ಪ್ರಶ್ನೆಯೇ ಉದ್ಭವಿಸಿಲ್ಲ ಎಂದು ಹೇಳಿದ್ದಾರೆ.

ಗ್ರಾಹಕರಿಗೆ ಉತ್ತಮ ಸೇವೆ ಒದಗಿಸಲು ಹಲವು ಸುಧಾರಣಾ ಕ್ರಮಗಳು ಮತ್ತು ಬಂಡವಾಳ ಹರಿಸುವ ಮೂಲಕ ಸಾರ್ವಜನಿಕ ವಲಯದ ಬ್ಯಾಂಕ್‌ಗಳನ್ನು ಮತ್ತಷ್ಟು ಬಲಪಡಿಸಲು ಸರ್ಕಾರ ಕ್ರಮ ಕೈಗೊಂಡಿದೆ ಎಂದು ರಾಜೀವ್‌ ಕುಮಾರ್‌ ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ