ಆ್ಯಪ್ನಗರ

2020-21ರ ಸಾಲಿನ 'ಪ್ರಧಾನಮಂತ್ರಿ ಫಸಲ್‌ ಬಿಮಾ' ನೋಂದಣಿಗೆ ಅಧಿಸೂಚನೆ

2020-21ನೇ ಸಾಲಿನ ಹಿಂಗಾರು ಮತ್ತು ಬೇಸಿಗೆ ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್‌ ಬಿಮಾ (ವಿಮಾ) ಯೋಜನೆಯನ್ನು ಅನುಷ್ಠಾನಗೊಳಿಸಲು ಅಧಿಸೂಚಿಸಲಾಗಿದೆ ಎಂದು ಕೃಷಿ ಇಲಾಖೆ ತಿಳಿಸಿದೆ.

Vijaya Karnataka Web 23 Oct 2020, 8:59 pm
ಬೆಂಗಳೂರು: 2020-21ನೇ ಸಾಲಿನ ಹಿಂಗಾರು ಮತ್ತು ಬೇಸಿಗೆ ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್‌ ಬಿಮಾ (ವಿಮಾ) ಯೋಜನೆಯನ್ನು ಅನುಷ್ಠಾನಗೊಳಿಸಲು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ತಾಲೂಕುವಾರು ಮುಖ್ಯ ಬೆಳೆಗಳನ್ನು ಗ್ರಾಪಂ ಮಟ್ಟಕ್ಕೆ ಹಾಗೂ ಉಳಿದ ಬೆಳೆಗಳನ್ನು ಹೋಬಳಿ ಮಟ್ಟದಲ್ಲಿ ಅಧಿಸೂಚಿಸಲಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Vijaya Karnataka Web crop


ಬೆಳೆ ಸಾಲ ಪಡೆಯದ ರೈತರು ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ಪಹಣಿ/ಖಾತೆ ಪುಸ್ತಕ, ಪಾಸ್‌ ಪುಸ್ತಕ ಮತ್ತು ಕಂದಾಯ ರಸೀದಿಯನ್ನು ನೀಡಬೇಕು. ಫ್ಯೂಚರ್‌ ಜನರಲಿ ಜನರಲ್‌ ಇನ್ಸೂರೆನ್ಸ್‌ ಕಂಪನಿ ಅವರನ್ನು ನೋಡಲ್‌ ಏಜೆನ್ಸಿಯನ್ನಾಗಿ ಜಿಲ್ಲೆಗೆ ಆಯ್ಕೆ ಮಾಡಲಾಗಿದೆ. ಮಾಹಿತಿಗೆ ಕೃಷಿ ಇಲಾಖೆ ಜಂಟಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗೊಬ್ಬರ ಸಬ್ಸಿಡಿ ನೇರ ರೈತರ ಖಾತೆಗೆ: ಶೀಘ್ರವೇ ಯೋಜನೆ ಸ್ವರೂಪ ಪ್ರಕಟ

ಏನಿದು ಪ್ರಧಾನಮಂತ್ರಿ ಫಸಲ್‌ ಬಿಮಾ ಯೋಜನೆ:
ಬೆಳೆ ನಷ್ಟ ಅಥವಾ ಬೆಳೆ ವಿಫಲವಾದಾಗ ನಷ್ಟ ಹೊಂದಿದ ರೈತರ ಕೈ ಹಿಡಿಯಲು ಸರಕಾರವು ಪ್ರಧಾನಮಂತ್ರಿ ಫಸಲ್‌ ಬಿಮಾ ಯೋಜನೆ ಪರಿಚಯಿಸಿದೆ. ಈ ಯೋಜನೆಯಡಿ ಮುಂಗಾರು ಹಂಗಾಮಿನಲ್ಲಿ ನಿರ್ಧಿಷ್ಟ ಪ್ರಕೃತಿ ವಿಕೋಪಗಳಾದ ಆಲಿಕಲ್ಲು ಮಳೆ, ಭೂ ಕುಸಿತ ಮತ್ತು ಬೆಳೆ ಮುಳುಗಡೆ ಗಳಿಂದ ಉಂಟಾಗುವ ನಷ್ಟದ ನಿರ್ಧರಣೆಯನ್ನು ವೈಯಕ್ತಿಕವಾಗಿ ನಿರ್ಧರಿಸಿ ಬೆಳೆ ವಿಮಾ ನಷ್ಟ ಪರಿಹಾರವನ್ನು ನೀಡಲಾಗುವುದು.

ವಿಮೆ ಮಾಡಿಸಿರುವ ರೈತರು ಈ ಬಗ್ಗೆ ಸಂಬಂಧಪಟ್ಟ ಹಣಕಾಸು ಸಂಸ್ಥೆ ಅಥವಾ ವಿಮಾ ಸಂಸ್ಥೆಯ ಕಚೇರಿಗಳಿಗೆ 48 ಗಂಟೆಯೊಳಗೆ ಮಾಹಿತಿ ನೀಡಬೇಕು. ಯಾವುದೇ ಸಂದರ್ಭದಲ್ಲಿ ವಿಮೆ ಮಾಡಿಸಿದ ಬೆಳೆಯ ವಿವರಗಳನ್ನು, ಹಾನಿಯ ವ್ಯಾಪ್ತಿ ಹಾಗೂ ಹಾನಿಗೆ ಕಾರಣವನ್ನು 48 ಗಂಟೆಗಳೊಳಗಾಗಿ ತಿಳಿಸಿದಲ್ಲಿ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು.

ರೈತ ಬೆಳೆ ಸಮೀಕ್ಷೆ ಆ್ಯಪ್ ಯಶಸ್ವಿ! ಪ್ರಾಯೋಗಿಕ ಹಂತದಲ್ಲೇ ಶೇ.88ರಷ್ಟು ಪ್ರಗತಿ

ಮುಂಗಾರು ಹಂಗಾಮಿನಲ್ಲಿ ಅಧಿಸೂಚಿತ ಘಟಕದಲ್ಲಿ ಶೇ.75ಕ್ಕಿಂತ ಹೆಚ್ಚಿನ ಕ್ಷೇತ್ರದಲ್ಲಿ ಬಿತ್ತನೆ ವಿಫಲಗೊಂಡಲ್ಲಿ ವಿಮಾ ಮೊತ್ತದ ಗರಿಷ್ಟ ಶೇ. 25 ರಷ್ಟು ಬೆಳೆ ವಿಮಾ ನಷ್ಟ ಪರಿಹಾರ ನೀಡಲು, ಬಿತ್ತನೆಯಿಂದ ಕಟಾವು ಹಂತದವರೆಗಿನ ಮಧ್ಯದ ಅವಧಿಯಲ್ಲಿ ಶೇ. 50 ಕ್ಕಿಂತ ಹೆಚ್ಚು ಬೆಳೆ ನಷ್ಟ ಸಂಭವಿಸಿದರೆ ಮುಂಚಿತವಾಗಿ ಅಂದಾಜು ಮಾಡಲಾದ ಬೆಳೆ ವಿಮಾ ನಷ್ಟ ಪರಿಹಾರದಲ್ಲಿ ಶೇ.25 ರಷ್ಟು ಹಣವನ್ನು ಪರಿಹಾರವಾಗಿ ನೀಡಲಾಗುವುದು. ಅಲ್ಲದೆ ಕಟಾವಿನ ನಂತರ ಬೆಳೆಯನ್ನು ಜಮೀನಿನಲ್ಲಿ ಒಣಗಲು ಬಿಟ್ಟಂತಹ ಸಂದರ್ಭದಲ್ಲಿ ಎರಡು ವಾರದೊಳಗೆ (ಹದಿನಾಲ್ಕು ದಿನಗಳು) ಚಂಡಮಾರುತ, ಚಂಡಮಾರುತ ಸಹಿತ ಮಳೆ ಮತ್ತು ಅಕಾಲಿಕ ಮಳೆಯಿಂದಾಗಿ ಬೆಳೆ ನಾಶವಾದರೆ ವೈಯಕ್ತಿಕವಾಗಿ ವಿಮಾ ಸಂಸ್ಥೆಯು ನಷ್ಟ ನಿರ್ಧಾರ ಮಾಡಿ ಬೆಳೆ ನಷ್ಟ ಪರಿಹಾರವನ್ನು ಇತ್ಯರ್ಥಪಡಿಸುತ್ತದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ