ಆ್ಯಪ್ನಗರ

ಮಲ್ಯ ಬಂಧನಕ್ಕಾಗಿ ಕರ್ನಾಟಕ ಹೈಕೋರ್ಟ್‌ಗೆ ಎಸ್‌ಬಿಐ ಮೊರೆ

ಕಿಂಗ್‌ಫಿಷರ್ ಏರ್‌ಲೈನ್ಸ್ ನ ಸುಸ್ತಿಸಾಲಕ್ಕೆ ಸಂಬಂಧಿಸಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಇತರ ಬ್ಯಾಂಕ್‌ಗಳು ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡಿರುವ ಹೈಕೋರ್ಟ್, ಉದ್ಯಮಿ ವಿಜಯ್ ಮಲ್ಯ ಮತ್ತು ಡಿಯಾಜಿಯೊ ಕಂಪನಿಗೆ ನೋಟಿಸ್ ಜಾರಿಗೊಳಿಸಿದೆ.

ವಿಕ ಸುದ್ದಿಲೋಕ 5 Mar 2016, 4:00 am
ಬೆಂಗಳೂರು: ಕಿಂಗ್‌ಫಿಷರ್ ಏರ್‌ಲೈನ್ಸ್ ನ ಸುಸ್ತಿಸಾಲಕ್ಕೆ ಸಂಬಂಧಿಸಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಇತರ ಬ್ಯಾಂಕ್‌ಗಳು ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡಿರುವ ಹೈಕೋರ್ಟ್, ಉದ್ಯಮಿ ವಿಜಯ್ ಮಲ್ಯ ಮತ್ತು ಡಿಯಾಜಿಯೊ ಕಂಪನಿಗೆ ನೋಟಿಸ್ ಜಾರಿಗೊಳಿಸಿದೆ.
Vijaya Karnataka Web sbi moves karnataka hc seeking vijay mallyas arrest
ಮಲ್ಯ ಬಂಧನಕ್ಕಾಗಿ ಕರ್ನಾಟಕ ಹೈಕೋರ್ಟ್‌ಗೆ ಎಸ್‌ಬಿಐ ಮೊರೆ


ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರಿದ್ದ ಏಕಸದಸ್ಯಪೀಠ ಶುಕ್ರವಾರ ಅರ್ಜಿ ವಿಚಾರಣೆ ನಡೆಸಿದ ಬಳಿಕ , ಪ್ರಸ್ತುತ ಪ್ರಕರಣ ಸಾಲ ವಸೂಲಾತಿ ನ್ಯಾಯಾಧೀಕರಣದ ಮುಂದೆ ಇದೆ, ಅದು ಆದೇಶಗಳನ್ನು ಹೊರಡಿಸಲು ಯಾವುದೇ ಅಡ್ಡಿ ಇಲ್ಲ ಎಂದು ಸ್ಪಷ್ಟಪಡಿಸಿತು.ಭಾರಿ ಪ್ರಮಾಣದಲ್ಲಿ ಸಾಲ ಮಾಡಿದ್ದ ಕಿಂಗ್‌ಫಿಷರ್ ಏರ್‌ಲೈನ್ಸ್ ಸಂಸ್ಥೆ ನಷ್ಟಕ್ಕೆ ತುತ್ತಾದ ನಂತರ ಸಾಲ ಮರುಪಾವತಿ ಕೋರಿ ಬ್ಯಾಂಕುಗಳು ಸಾಲ ವಸೂಲಾತಿ ನ್ಯಾಯಾಧೀಕರಣದ ಮೊರೆ ಹೋಗಿವೆ.

ಈ ಮಧ್ಯೆ,ಬ್ಯಾಂಕುಗಳು ವಿಜಯ್ ಮಲ್ಯ ಬಂಧನ ಕೋರಿದ್ದ ಅರ್ಜಿಯ ವಿಚಾರಣೆಯನ್ನು ಪೂರ್ಣಗೊಳಿಸಿರುವ ಸಾಲ ವಸೂಲಾತಿ ನ್ಯಾಯಾಧೀಕರಣ ಮಾ.10ಕ್ಕೆ ತನ್ನ ಆದೇಶವನ್ನು ಕಾಯ್ದಿರಿಸಿದೆ.

ಅರ್ಜಿದಾರರು ಮಲ್ಯ ಆಸ್ತಿ, ಹಣ ಮುಟ್ಟುಗೋಲು ಕೋರಿದ್ದಾರೆ ಅಲ್ಲದೆ,ಅವರ ಪಾಸ್ ಪೋರ್ಟ್ ವಶಕ್ಕೂ ಕೋರಿಕೆ ಮುಂದಿಟ್ಟಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ