ಆ್ಯಪ್ನಗರ

ಬೆಂಗಳೂರಿನಲ್ಲಿ 70 ರೂ. ನತ್ತ ಡೀಸೆಲ್‌ ಬೆಲೆ: ಯಥಾಸ್ಥಿತಿ ಕಾಯ್ದುಕೊಂಡ ಪೆಟ್ರೋಲ್‌ ದರ

ರಾಷ್ಟ್ರದ ಪ್ರಮುಖ ನಗರಗಳಲ್ಲಿ ಕಳೆದ 7 - 8 ದಿನಗಳಿಂದ ಪೆಟ್ರೋಲ್‌ ದರ ಯಥಾಸ್ಥಿತಿ ಕಾಯ್ದುಕೊಂಡಿದ್ದರೆ, ಡೀಸೆಲ್‌ ದರ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಇಂದು ಡೀಸೆಲ್‌ ದರದಲ್ಲಿ 5 - 6 ಪೈಸೆ ಹೆಚ್ಚಳವಾಗಿದೆ.

Vijaya Karnataka Web 25 Dec 2019, 7:40 am
ಬೆಂಗಳೂರು: ಕಳೆದ 7 - 8 ದಿನಗಳಿಂದ ಬೆಂಗಳೂರು ಸೇರಿ ದೇಶದ ಎಲ್ಲ ಮಹಾ ನಗರಗಳಲ್ಲಿ ಪೆಟ್ರೋಲ್‌ ದರದಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ. ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಲೀಟರ್‌ ಪೆಟ್ರೋಲ್‌ ದರ 78 ರೂ. ಸಮೀಪಿಸಿತ್ತಾದರೂ, 77.18 ರೂ.ಗೆ ಇಳಿಕೆಯಾದ ದರ ಯಥಾಸ್ಥಿತಿ ಕಾಯ್ದುಕೊಂಡಿದೆ.
Vijaya Karnataka Web petrol bunk toi


ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಲೀಟರ್‌ ಪೆಟ್ರೋಲ್‌ ದರ 74.63 ರೂ. ಇದೆ. ಚೆನ್ನೈನಲ್ಲಿ 77.58 ರೂ. ಇದೆ. ಕೋಲ್ಕತಾದಲ್ಲಿ 77.29 ರೂ. ಇದೆ. ವಾಣಿಜ್ಯ ನಗರಿ ಮುಂಬಯಿನಲ್ಲಿ 80.29 ರೂ. ಇದೆ.

ಆದರೆ ಡೀಸೆಲ್‌ ದರ ದೇಶದ ಮಹಾ ನಗರಗಳಲ್ಲಿ 5 ಪೈಸೆ ಏರಿಕೆಯಾಗಿದೆ. ಬೆಂಗಳೂರಲ್ಲಿ ಒಂದು ಲೀಟರ್‌ ಡೀಸೆಲ್‌ ದರದಲ್ಲಿ 69.27 ರೂ. ಇದೆ. ರಾಜಧಾನಿ ದಿಲ್ಲಿಯಲ್ಲಿ 66.99 ರೂ. ಇದೆ. ಚೆನ್ನೈನಲ್ಲಿ 70.82 ರೂ. ಇದೆ. ಕೋಲ್ಕತಾದಲ್ಲಿ 69.40 ರೂ. ಇದೆ. ವಾಣಿಜ್ಯ ನಗರಿ ಮುಂಬಯಿಯಲ್ಲಿ 70.28 ರೂ. ಇದೆ.

ಇನ್ನೊಂದೆಡೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಏರಿಕೆಯಾಗಿದ್ದು, ಬ್ಯಾರೆಲ್‌ ಒಂದಕ್ಕೆ 4,362 ರೂ. ಇದೆ.

ಸೂಚನೆ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪೆಟ್ರೋಲ್ ವಿತರಣಾ ಕಂಪೆನಿಗಳು ಮತ್ತು ಸ್ಥಳದಿಂದ ಸ್ಥಳಕ್ಕೆ ಸ್ವಲ್ಪ ವ್ಯತ್ಯಾಸ ಇರುತ್ತದೆ ಎಂಬುದನ್ನು ಗಮನಿಸತಕ್ಕದ್ದು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ