ಆ್ಯಪ್ನಗರ

ಪೆಟ್ರೋಲ್‌, ಡೀಸೆಲ್‌ ದರದಲ್ಲಿ ಯಾವುದೇ ವ್ಯತ್ಯಾಸವಿಲ್ಲ: ಇಂದಿನ ಬೆಲೆ ವಿವರ ಇಲ್ಲಿದೆ..

ಪ್ರತಿದಿನವೂ ಪರಿಷ್ಕೃತಗೊಳ್ಳುವ ಪೆಟ್ರೋಲ್‌ ಮತ್ತು ಡೀಸೆಲ್‌ ದರ ಸುಮಾರು 2 ತಿಂಗಳಿನಿಂದ ವ್ಯತ್ಯಾಸ ಕಂಡು ಬಂದಿಲ್ಲ. ಆದರೆ ರಾಜ್ಯ ಬಜೆಟ್‌ಗಳಲ್ಲಿ ತೆರಿಗೆ ಏರಿಕೆ ಪರಿಣಾಮಗಳಿಂದ ಕರ್ನಾಟಕ ಸೇರಿ ಕೆಲ ರಾಜ್ಯಗಳಲ್ಲಿ ಏಪ್ರಿಲ್‌ 1 ರಿಂದ ಬೆಲೆ ಏರಿಕೆಯಾಗಿದೆ.

Vijaya Karnataka Web 8 May 2020, 9:15 am
ಬೆಂಗಳೂರು: ದೇಶಾದ್ಯಂತ ಲಾಕ್‌ಡೌನ್ ವಿಸ್ತರಣೆಯಾಗಿದ್ದರೂ‌ ಸಡಿಲಿಕೆ ಆಗಿದ್ದು, ವಾಹನಗಳ ಓಡಾಟ ಹೆಚ್ಚಾಗಿದೆ. ಆದರೆ ಪೆಟ್ರೋಲ್‌, ಡೀಸೆಲ್‌ ದರದಲ್ಲಿ ಯಾವುದೇ ವ್ಯತ್ಯಾಸ ಆಗಿಲ್ಲ. ಕೇಂದ್ರ ಸರಕಾರ ಪೆಟ್ರೋಲ್‌, ಡೀಸೆಲ್‌ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಿಸಿದ್ರೂ ಗ್ರಾಹಕರ ಮೇಲೆ ಹೊರೆಯಾಗಿಲ್ಲ.
Vijaya Karnataka Web petrol bunk vk


ಗುರುವಾರ ಬೆಂಗಳೂರು ಸೇರಿ ಉಳಿದೆಡೆ ಪೆಟ್ರೋಲ್ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಬೆಂಗಳೂರಿನಲ್ಲಿ ಒಂದು ಲೀಟರ್ ಪೆಟ್ರೋಲ್‌ ದರ 73.55 ರೂ. ಇದ್ದರೆ, ದಿಲ್ಲಿಯಲ್ಲಿ ಪ್ರಸ್ತುತ 71.26 ರೂ. ಆಗಿದೆ. ಇನ್ನು, ಚೆನ್ನೈನಲ್ಲಿ ಲೀಟರ್‌ ಪೆಟ್ರೋಲ್‌ ದರ 72.28 ರೂ. ಕೋಲ್ಕತದಲ್ಲಿ 73.30 ರೂ. ಹಾಗೂ ವಾಣಿಜ್ಯ ನಗರಿ ಮುಂಬಯಿನಲ್ಲಿ 76.31 ರೂ. ಇದೆ.

ಇನ್ನೊಂದೆಡೆ, ಬೆಂಗಳೂರು ಸೇರಿದಂತೆ ರಾಷ್ಟ್ರದ ಪ್ರಮುಖ, ಮಹಾ ನಗರಗಳಲ್ಲಿ ಡೀಸೆಲ್‌ ದರ ಯಥಾಸ್ಥಿತಿ ಕಾಯ್ದುಕೊಂಡಿದೆ. ಬೆಂಗಳೂರಿನಲ್ಲಿ ಒಂದು ಲೀಟರ್‌ ಡೀಸೆಲ್‌ 65.96 ರೂ. ಇದ್ದು, ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ 69.39 ಆಗಿದೆ. ಚೆನ್ನೈನಲ್ಲಿ 65.71 ರೂ., ಕೋಲ್ಕತದಲ್ಲಿ 65.62 ರೂ., ಹಾಗೂ ಮುಂಬಯಿನಲ್ಲಿ 66.21 ರೂ. ದರ ಇದೆ.

ಇನ್ನೊಂದೆಡೆ, ಕಚ್ಚಾ ತೈಲ ಬೆಲೆ ಇಳಿಕೆಯಾಗಿದ್ದು, ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಒಂದು ಬ್ಯಾರೆಲ್‌ ಕಚ್ಚಾ ತೈಲ ದರ ಸದ್ಯ 1,843 ರೂ. ಇದೆ.

ಸೂಚನೆ: ದೈನಂದಿನ ಪೆಟ್ರೋಲ್‌ ಮತ್ತು ಡೀಸೆಲ್‌ ದರ ಪರಿಷ್ಕರಣೆಯು ವಿತರಣಾ ಕಂಪನಿಗಳು ಮತ್ತು ಆಯಾ ಪ್ರದೇಶಕ್ಕೆ ಅನುಗುಣವಾಗಿ ಸ್ವಲ್ಪ ವ್ಯತ್ಯಾಸಗಳು ಇರುತ್ತವೆ ಎಂಬುದನ್ನು ಗ್ರಾಹಕರು ಗಮನಿಸತಕ್ಕದ್ದು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ