ಆ್ಯಪ್ನಗರ

ಸಚಿವ ಸಂಪುಟ ವಿಸ್ತರಣೆ: ಆಕಾಂಕ್ಷಿಗಳ ದಂಡು ದಿಲ್ಲಿಗೆ ದೌಡು

ಮುಖ್ಯಮಂತ್ರಿ ಸಿದ್ದ ರಾಮಯ್ಯ ದೆಹಲಿಯತ್ತ ಪ್ರಯಾಣ ಬೆಳೆಸುತ್ತಿದ್ದಂತೆಯೇ ಸಚಿವ ಜಯಚಂದ್ರ, ಪ್ರಿಯಾಂಕ ಖರ್ಗೆ, ಗೋಪಾಲಕೃಷ್ಣ ಅವರೂ ದೆಹಲಿಗೆ ದೌಡಾಯಿಸಿದ್ದಾರೆ.

ವಿಕ ಸುದ್ದಿಲೋಕ 16 Jun 2016, 3:39 pm
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಯಾವಾಗ ಎಂದು ನಿರ್ಧರಿಸಲು ಮುಖ್ಯಮಂತ್ರಿ ಸಿದ್ದ ರಾಮಯ್ಯ ದಿಲ್ಲಿಯತ್ತ ಪ್ರಯಾಣ ಬೆಳೆಸುತ್ತಿದ್ದಂತೆಯೇ ಸಚಿವ ಟಿಬಿ ಜಯಚಂದ್ರ, ಪ್ರಿಯಾಂಕ ಖರ್ಗೆ, ಬಳ್ಳಾರಿ ಶಾಸಕ ಗೋಪಾಲಕೃಷ್ಣ ಅವರೂ ದಿಲ್ಲಿಗೆ ದೌಡಾಯಿಸಿದ್ದಾರೆ.
Vijaya Karnataka Web cabinet reshuffle leaders travel to delhi
ಸಚಿವ ಸಂಪುಟ ವಿಸ್ತರಣೆ: ಆಕಾಂಕ್ಷಿಗಳ ದಂಡು ದಿಲ್ಲಿಗೆ ದೌಡು


ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ 2.45ಕ್ಕೆ ಇಂಡಿಗೋ ವಿಮಾನದಲ್ಲಿ ಇವರೆಲ್ಲ ದಿಲ್ಲಿಗೆ ಪ್ರಯಾಣ ಬೆಳೆಸಿದ್ದಾರೆ. ಮಾದ್ಯಮಗಳೊಂದಿಗೆ ಮಾತನಾಡಿದ ಸಚಿವ ಜಯಚಂದ್ರ, ಸಂಪುಟ ವಿಸ್ತರಣೆ ನಮ್ಮ ಪಕ್ಷದ ಆಂತರಿಕ ವಿಚಾರ. ಇನ್ನೆರಡು ವರ್ಷದಲ್ಲಿ ಚುನಾವಣೆ ಸಮೀಪಿಸುತ್ತಿದ್ದು, ಜನರಿಗೆ ಕೊಟ್ಟಿರುವ ಭರವಸೆಗಳನ್ನು ಈಡೇರಿಸಲು ಹಾಗೂ ಅಭಿವೃದ್ದಿ ಕಾರ್ಯಗಳಿಗೆ ಇನ್ನಷ್ಟು ವೇಗ ಕೊಡಲು ಸಿಎಂ ನಿರ್ಧಾರ ಮಾಡಿದ್ದಾರೆ ಎಂದು ಹೇಳಿದರು.
ಜಿಲ್ಲಾವಾರು, ಜಾತಿವಾರು, ವರ್ಗಗಳಿಗೆ ಸಚಿವ ಸ್ಥಾನ ನೀಡಬೇಕೆಂಬ ಇಚ್ಚೆ ಮುಖ್ಯಮಂತ್ರಿಗಳಿಗಿದೆ. ಮಂತ್ರಿಗಳ ಮೇಲೆ ಗುರುತರವಾದ ಆರೋಪಗಳು ಇಲ್ಲ. ಯಾವುದೇ ಮಂತ್ರಿಗಳು ಜೈಲಿಗೆ ಹೋಗಿಲ್ಲ. ಎಲ್ಲರೂ ಸಮರ್ಥವಾಗಿ ಸಚಿವ ಸ್ಥಾನ ನಿರ್ವಹಿಸಿದ್ದಾರೆ ಎಂದರು.

ಕೇಂದ್ರದಲ್ಲಿ ಕಾಂಗ್ರೆಸ್‌ನ ಪ್ರಭಾವಿ ನಾಯಕ ಮಲ್ಲಿಕಾರ್ಜುನ ಪುತ್ರ ಹಾಗೂ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ ಶಾಸಕ ಪ್ರಿಯಾಂಕ ಖರ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸದೆ ಸಿಎಂ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೋ ನೋಡೋಣ ಅಂತಷ್ಟೆ ಹೇಳಿ ಹೊರಟರು. ಜತೆಗೆ ಬಳ್ಳಾರಿ ಶಾಸಕ ಗೋಪಾಲಕೃಷ್ಣ ಕೂಡ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ