ಆ್ಯಪ್ನಗರ

ಶಾಸಕರಿಗೆ 15-20 ಕೋಟಿಯ ಆಮಿಷ ಒಡ್ಡಿದ್ದ ಬಿಜೆಪಿ: ಸಿಎಂ

ಗುಜರಾತ್ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಅಹಮದ್ ಪಟೇಲ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದಿಸಿದ್ದಾರೆ.

ವಿಕ ಸುದ್ದಿಲೋಕ 9 Aug 2017, 4:36 pm
ಬೆಂಗಳೂರು: ಗುಜರಾತ್ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಅಹಮದ್ ಪಟೇಲ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದಿಸಿದ್ದಾರೆ.
Vijaya Karnataka Web cm siddaramaiah criticise bjp
ಶಾಸಕರಿಗೆ 15-20 ಕೋಟಿಯ ಆಮಿಷ ಒಡ್ಡಿದ್ದ ಬಿಜೆಪಿ: ಸಿಎಂ


ಅಹಮದ್ ಪಟೇಲ್ ಅವರನ್ನು ಸೋಲಿಸಲು ಬಿಜೆಪಿಯವರು ಹರ ಸಾಹಸ ಮಾಡಿದರು. ಕುದುರೆ ವ್ಯಾಪಾರವನ್ನೂ ಅರಂಭಿಸಿದ್ದರು. 15-20 ಕೋಟಿಯ ಆಮಿಷ ಒಡ್ಡಿ ಶಾಸಕರನ್ನು ಖರೀದಿಸುವ ಪ್ರಯತ್ನಕ್ಕೂ ಕೈ ಹಾಕಿದ್ದರು ಎಂದು ಸಿಎಂ ಹೇಳಿದರು.

ನಮ್ಮ ಶಾಸಕರು ಬಿಜೆಪಿಯ ಯಾವುದೇ ಆಮಿಷಕ್ಕೆ ಒಳಗಾಗದೆ ಅಹಮದ್ ಪಟೇಲ್ ಅವರಿಗೆ ಮತ ಹಾಕಿದ್ದಾರೆ. ಅವರಿಗೂ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದರು.

ಗುಜರಾತ್‌ನಿಂದ ರಾಜ್ಯಸಭೆಗೆ ಸ್ಪರ್ಧಿಸಿದ್ದ ಕಾಂಗ್ರೆಸ್‌ನ ಅಹ್ಮದ್‌ ಪಟೇಲ್‌ ಅವರನ್ನು ಗೆಲ್ಲಿಸುವ ನಿಟ್ಟಿನಲ್ಲಿ ಶಾಸಕರು ಬಿಜೆಪಿಯ ಬಲೆಗೆ ಬೀಳದಂತೆ ನೋಡಿಕೊಳ್ಳುವುದಕ್ಕಾಗಿ ಅವರನ್ನು ಕರ್ನಾಟಕಕ್ಕೆ ಕರೆ ತರಲಾಗಿತ್ತು. ಅವರ ಆತಿಥ್ಯವನ್ನು ಡಿ.ಕೆ. ಶಿವಕುಮಾರ್‌ ವಹಿಸಿಕೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ