Please enable javascript.ಕರ್ತವ್ಯ ಲೋಪ ಆರೋಪ - ಕರ್ತವ್ಯ ಲೋಪ ಆರೋಪ - Vijay Karnataka

ಕರ್ತವ್ಯ ಲೋಪ ಆರೋಪ

ವಿಕ ಸುದ್ದಿಲೋಕ 27 Aug 2014, 5:00 am
Subscribe

ರಾಣೇಬೆನ್ನೂರ:ತಾಲೂಕಿನ ವಿವಿಧ ಭಾಗಗಳಲ್ಲಿನ ಗ್ರಾಮಲೆಕ್ಕಾಧಿಕಾರಿಗಳು ಸರಕಾರದ ಕೆಲಸವನ್ನು ಸಮರ್ಪಕವಾಗಿ ನಿರ್ವಹಿಸುತ್ತಿಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಮಂಗಳವಾರ ತಹಸೀಲ್ದಾರ ಕೆ.ಶಿವಲಿಂಗ ಅವರಿಗೆ ಮನವಿ ಸಲ್ಲಿಸಿದರು.

ಕರ್ತವ್ಯ ಲೋಪ ಆರೋಪ
ರಾಣೇಬೆನ್ನೂರ:ತಾಲೂಕಿನ ವಿವಿಧ ಭಾಗಗಳಲ್ಲಿನ ಗ್ರಾಮಲೆಕ್ಕಾಧಿಕಾರಿಗಳು ಸರಕಾರದ ಕೆಲಸವನ್ನು ಸಮರ್ಪಕವಾಗಿ ನಿರ್ವಹಿಸುತ್ತಿಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಮಂಗಳವಾರ ತಹಸೀಲ್ದಾರ ಕೆ.ಶಿವಲಿಂಗ ಅವರಿಗೆ ಮನವಿ ಸಲ್ಲಿಸಿದರು.

ಈ ಸಮಯದಲ್ಲಿ ರೈತ ಸಂಘದ ತಾಲೂಕು ಘಟಕದ ಅಧ್ಯಕ್ಷ ಹನುಮಂತಪ್ಪ ಕಬ್ಬಾರ ಮಾತನಾಡಿ, ತಾಲೂಕಿನಲ್ಲಿ 35 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಗ್ರಾಮಲೆಕ್ಕಾಧಿಕಾರಿಗಳಿದ್ದಾರೆ. ಆದರೆ ಆ ಪೈಕಿ ಬಹುತೇಕರು ತಾವು ಕೆಲಸ ಮಾಡುವ ಸ್ಥಳದಲ್ಲಿ ವಾಸ್ತವ್ಯ ಮಾಡದೆ ನಗರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹೀಗಾಗಿ ಸಾರ್ವಜನಿಕರು ಸರಕಾರದ ಸೌಲಭ್ಯಗಳನ್ನು ಪಡೆಯುವ ಸಲುವಾಗಿ ಹಾಗೂ ವಿದ್ಯಾರ್ಥಿಗಳು ಶೈಕ್ಷಣಿಕ ಕೆಲಸ ಕಾರ್ಯಗಳಿಗಾಗಿ ಅಗತ್ಯ ದಾಖಲೆಗಳನ್ನು ಪಡೆಯಲು ನಿತ್ಯ ನಗರಕ್ಕೆ ಅಲೆದಾಡಬೇಕಾಗಿದೆ. ಇದರಿಂದ ಸಾರ್ವಜನಿಕರಿಗೆ ಸಮಸ್ಯೆಯಾಗಿದ್ದು. ಕೂಡಲೇ ಅವರು ಸಂಬಂಧಿಸಿದ ಗ್ರಾಪಂ ಕಚೇರಿಯಲ್ಲಿಯೇ ಕೆಲಸ ನಿರ್ವಹಿಸುವಂತೆ ಮೇಲಾಧಿಕಾರಿಗಳು ಸೂಚನೆ ನೀಡಬೇಕು. ಇಲ್ಲವಾದರೆ ಮಿನಿವಿಧಾನ ಸೌಧದ ಎದುರು ಪ್ರತಿಭಟನೆ ನಡೆಸಲಾಗುವುದು ಎಂದರು.

ರುದ್ರೇಶ ಹಡಗಲಿ, ಚಂದ್ರಪ್ಪ ಕಾಳಪ್ಪನವರ, ಭೀಮಪ್ಪ ಅರಳಿಕಟ್ಟಿ, ಕೆಂಚಪ್ಪ ತಳವಾರ, ರಮೇಶ ಗಂಗಮ್ಮನವರ, ಕಿರಣ ಹುಗ್ಗಿ, ವಿ.ಎಂ.ರಾಜು, ಚಂದ್ರಶೇಖರ ಬೆಣಗೇರಿ ಮತ್ತು ಇತರರು ಉಪಸ್ಥಿತರಿದ್ದರು.
ಕಾಮೆಂಟ್‌ ಮಾಡಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ