Please enable javascript.ಪ್ರಾಥಮಿಕ ಕೃಷಿ ಪತ್ತಿನ,ಕೃಷಿ ಪತ್ತಿನ ಸಹಕಾರಿ ಸಂಘಗಳ ಸಿಬ್ಬಂದಿ ಪ್ರತಿಭಟನೆ - staff protest by co-operative societies of agriculture - Vijay Karnataka

ಕೃಷಿ ಪತ್ತಿನ ಸಹಕಾರಿ ಸಂಘಗಳ ಸಿಬ್ಬಂದಿ ಪ್ರತಿಭಟನೆ

Vijaya Karnataka 31 Jan 2019, 5:00 am
Subscribe

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ನೌಕರರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

staff protest by co operative societies of agriculture
ಕೃಷಿ ಪತ್ತಿನ ಸಹಕಾರಿ ಸಂಘಗಳ ಸಿಬ್ಬಂದಿ ಪ್ರತಿಭಟನೆ
ರಾಮನಗರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ನೌಕರರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ತಾಲೂಕು ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಜಾಥಾ ನಡೆಸಿದ ಪ್ರತಿಭಟನಕಾರರು ತಾಲೂಕು ಮತ್ತು ಜಿಲ್ಲಾಡಳಿತಕ್ಕೆ ಪ್ರತ್ಯೇಕವಾಗಿ ಮನವಿ ಸಲ್ಲಿಸಿದರು.

ಮಾನವ ಸರಪಳಿ: ನಗರದ ಮಿನಿವಿಧಾನಸೌಧದ ಬಳಿ ಜಮಾವಣೆಗೊಂಡ ನಾಲ್ಕು ತಾಲೂಕಿನ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ಮೈಸೂರು-ಬೆಂಗಳೂರು ಹೆದ್ದಾರಿ ಮೂಲಕ ಐಜೂರು ವೃತ್ತಕ್ಕೆ ಆಗಮಿಸಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತ ಪಡಿಸಿದರು. ಆನಂತರ ಮೆರವಣಿಗೆ ನಡೆಸಿ ಜಿಲ್ಲಾ ಕಚೇರಿಗಳ ಸಂಕೀರ್ಣ ಎದುರು ಧರಣಿ ನಡೆಸಿದರು.

ಸೇವಾ ಭದ್ರತೆಗೆ ಆಗ್ರಹ: ಸಹಕಾರಿ ಸಂಘಗಳ ನೌಕರರನ್ನು ಸರಕಾರಿ ನೌಕರರಾಗಿ ಪರಿಗಣಿಸಬೇಕು. ಸರಕಾರದ ಸೌಲಭ್ಯ ನೀಡಬೇಕು. ಸೇವಾಭದ್ರತೆ, ಪಿಂಚಣೆ, ವೇತನ ಶ್ರೇಣಿ ಸೇರಿದಂತೆ ಇತರೆ ಬೇಡಿಕೆಗಳ ಈಡೇರಿಕೆಗಾಗಿ ಈಗಾಗಲೇ ಹಲವು ಬಾರಿ ಜಿಲ್ಲಾಡಳಿತದ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದ್ದರೂ ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮೀಣರ ಸ್ನೇಹಿತ: ಗ್ರಾಮೀಣ ಭಾಗದಲ್ಲಿ ರೈತರ ಮನೆಬಾಗಿಲಿಗೆ ಪಡಿತರ, ರಸಗೊಬ್ಬರ ವಿತರಣೆ ಮತ್ತು ಬ್ಯಾಂಕಿಂಗ್‌ ವ್ಯವಹಾರ ಸೇವೆಗಳನ್ನು ನೀಡುತ್ತಿದ್ದೇವೆ. ಜತೆಗೆ ಸರಕಾರದ ಸೌಲಭ್ಯಗಳಾದ ಸಾಲಮನ್ನಾ ಯೋಜನೆಗಳನ್ನು ಕಾರ್ಯಗತ ಗೊಳಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದಾರೆ. ಆದರೆ, ವಿಧಾನಸೌಧದಲ್ಲಿನ ನೌಕರರಿಗೆ ಸಿಗುವ ಸೌಲಭ್ಯ ಗ್ರಾಮಾಂತರ ಪ್ರದೇಶದಲ್ಲಿನ ಸಹಕಾರ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೂ ಸಿಗಬೇಕು ಎಂಬುದು ನಮ್ಮ ಪ್ರಮುಖ ಬೇಡಿಕೆ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಹೋರಾಟ ವಿಸ್ತರಣೆ ಎಚ್ಚರಿಕೆ: ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರಕಾರ ರೈತರ, ಕಾರ್ಮಿಕರ, ಬಡವರ ಪರವಾದ ಸರಕಾರ ಎಂದು ಬಾಯಿ ಮಾತಿಗೆ ಹೇಳಿದರೆ ಸಾಲದು, ಅವರಿಗೆ ಸಿಗಬೇಕಾದ ಸರಕಾರಿ ಸವಲತ್ತು ಸರಿಯಾದ ಸಮಯಕ್ಕೆ ದೊರೆಯಿವಣತೆ ಕ್ರಮ ವಹಿಸಬೇಕು. 3 ತಿಂಗಳ ಕಾಲವಧಿಯಲ್ಲಿ ಸಹಕಾರಿ ಕ್ಷೇತ್ರದ ಬೇಡಿಕೆಗಳನ್ನು ಪೂರೈಸಬೇಕು. ಇಲ್ಲವಾದಲ್ಲಿ ಜಿಲ್ಲೆಯ ಸಹಕಾರಿ ಕ್ಷೇತ್ರದ ನಿರ್ದೇಶಕರು ಸಹ ಹೋರಾಟಕ್ಕೆ ಧುಮುಕಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.

ತಹಸೀಲ್ದಾರ್‌ ಕಚೇರಿಯ ಸಹಾಯಕ ಅಧಿಕಾರಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಅವರಿಗೆ ಪ್ರತಿಭಟನಾಕಾರರು ಪ್ರತ್ಯೇಕವಾಗಿ ಮನವಿ ಸಲ್ಲಿಸಿದರು.

ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಸಿಂ.ಲಿಂ.ನಾಗರಾಜ್‌, ಬಿಡಿಸಿಸಿ ಬ್ಯಾಂಕ್‌ ನಿರ್ದೇಶಕ ಅಶ್ವಥ್‌, ಕಕಜವೇ ರಾಜ್ಯಾಧ್ಯಕ್ಷ ರಮೇಶ್‌ಗೌಡ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಹನುಮಯ್ಯ, ಪ್ರಕಾಶ್‌, ಹನುಮಂತ, ನಂದೀಶ್‌, ಪ್ರಕಾಶ್‌, ಚಂದ್ರು, ಶಿವರಾಮಯ್ಯ, ರೇಣುಕಪ್ಪ, ಅಶ್ವತ್ಥ್‌ ಸೇರಿದಂತೆ ಇತರರಿದ್ದರು.
ಕಾಮೆಂಟ್‌ ಮಾಡಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ