ಆ್ಯಪ್ನಗರ

ವಸತಿ ಶಾಲೆಗಳ 6 ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

2020-21ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಕೋಲಾರ ಜಿಲ್ಲೆಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೋಲಾರ ಮತ್ತು ಮುಳಬಾಗಿಲು...

Vijaya Karnataka Web 8 Jul 2020, 5:43 pm

2020-21ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಕೋಲಾರ ಜಿಲ್ಲೆಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೋಲಾರ ಮತ್ತು ಮುಳಬಾಗಿಲು ಹಾಗೂ ಮೌಲಾನ ಆಜಾದ್ ಮಾದರಿ ಆಂಗ್ಲ ಮಾದ್ಯಮ ಶಾಲೆ, ಕೋಲಾರ, ಮಾಲೂರು, ಶ್ರೀನಿವಾಸಪುರ, ಬಂಗಾರಪೇಟೆ ಮತ್ತು ಕೆ.ಜಿ.ಎಫ್ ಇಲ್ಲಿಗೆ ಅರ್ಹ ವಿದ್ಯಾರ್ಥಿಗಳಿಂದ 6 ನೇ ತರಗತಿಗೆ ದಾಖಲಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
Vijaya Karnataka Web kreis admissions 2020
kreis admissions 2020


ಅರ್ಜಿ ಸಲ್ಲಿಸಬೇಕಾದ ವಿದ್ಯಾರ್ಥಿಗಳು ರಾಜ್ಯದ ನಿವಾಸಿಯಾಗಿರಬೇಕು. ಕುಟುಂಬದ ವಾರ್ಷಿಕ ವರಮಾನವು 2.50 ಲಕ್ಷರೂಗಳಿಗೆ ಮೀರಬಾರದು. ಶಾಲೆಗಳಲ್ಲಿ ಮತೀಯ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಶೇ.75 ರಷ್ಟು (ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಸಿಖ್, ಬೌದ್ದ ಮತ್ತು ಪಾರ್ಸಿ) ಹಾಗೂ ಶೇ.25 ರಷ್ಟು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮೀಸಲಾತಿ ಇರುತ್ತದೆ. ಪ್ರತಿ ತರಗತಿಯಲ್ಲಿ ಹೆಣ್ಣು ಮಕ್ಕಳಿಗೆ ಶೇ.50% ಮೀಸಲಿರಿಸಲಾಗಿದೆ. ಪಠ್ಯಪುಸ್ತಕ, ಸಮವಸ್ತ್ರ, ವಸತಿ ಮತ್ತು ಲೇಖನ ಸಾಮಗ್ರಿಗಳನ್ನು ಉಚಿತವಾಗಿ ನೀಡಲಾಗುವುದು.

2020-21ನೇ ಸಾಲಿನಲ್ಲಿ 6ನೇ ತರಗತಿಗೆ ದಾಖಲಾತಿಯನ್ನು ಪಡೆಯುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಯಾವುದೇ ಪ್ರವೇಶ ಪರೀಕ್ಷೆ ಇರುವುದಿಲ್ಲ. ಆಸಕ್ತಿಯುಳ್ಳ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08152-220257, ಕೋಲಾರ: 9686799165, ಮುಳಬಾಗಿಲು: 9743308503 ಗೆ ಸಂಪರ್ಕಿಸಬಹುದು.
960 FDA ಹುದ್ದೆ ನೇಮಕಾತಿಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ಪ್ರಕಟ

ನಿಗದಿತ ಅರ್ಜಿ ನಮೂನೆಗಳನ್ನು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೋಲಾರ ಮತ್ತು ಮುಳಬಾಗಿಲು, ಜಿಲ್ಲಾ/ತಾಲ್ಲೂಕು ಮಾಹಿತಿ ಕೇಂದ್ರ ಹಾಗೂ ಜಿಲ್ಲಾ ಅಧಿಕಾರಿಗಳ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಹನುಮೇಗೌಡ ಕಾಂಪ್ಲೆಕ್ಸ್, ನರೇಂದ್ರ ಹಾಸ್ಪಿಟಲ್ ಹಿಂಭಾಗ, ಎಂ.ಬಿ ರಸ್ತೆ, ಕೋಲಾರ ರವರ ಕಛೇರಿಯಲ್ಲಿ ಪಡೆದು ಭರ್ತಿ ಮಾಡಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
ಆನ್‌ಲೈನ್‌ ಬೋಧನೆಗೆ ಸಮಿತಿ ಗ್ರೀನ್‌ ಸಿಗ್ನಲ್‌; ಮಾರ್ಗಸೂಚಿಯ ವಿವರ ಇಲ್ಲಿದೆ..

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌