ಆ್ಯಪ್ನಗರ

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಗದಗ ಮತ್ತು ಮುಂಡರಗಿ ತಾಲೂಕುಗಳ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ...

Vijaya Karnataka 2 Sep 2020, 8:13 pm
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಗದಗ ಮತ್ತು ಮುಂಡರಗಿ ತಾಲೂಕುಗಳ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 2020-21ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
Vijaya Karnataka Web ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ


ಆಸಕ್ತ ವಿದ್ಯಾರ್ಥಿಗಳು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 20, 2020 ಕೊನೆಯ ದಿನವಾಗಿದೆ. ಒಟ್ಟು 180 ವಿದ್ಯಾರ್ಥಿಗಳ ದಾಖಲಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅದರಲ್ಲಿ ಶೇ.75%ರಷ್ಟು ಅಲ್ಪಸಂಖ್ಯಾತರ ಹಾಗೂ ಶೇ.25%ರಷ್ಟು ಇತರ ವರ್ಗದವರಿಗೆ ಮೀಸಲಿಡಲಾಗಿದೆ.

ಅಂಗವಿಕಲ ಹಾಗೂ ಅನಾಥ ಮಕ್ಕಳು, ವಿಧವೆಯರ, ಪೌರ ಕಾರ್ಮಿಕರ ಮಕ್ಕಳು ಸೇರಿದಂತೆ ವಿಶೇಷ ಗುಂಪಿಗೆ ಸೇರಿದವರಿಗೆ ಶೇ.3%ರಷ್ಟು ಪ್ರವೇಶಾತಿ ಸೀಟುಗಳನ್ನು ಕಾಯ್ದಿರಿಸಲಾಗಿದೆ. 6ನೇ ತರಗತಿ ಪ್ರವೇಶಕ್ಕೆ ಬಯಸುವ ವಿದ್ಯಾರ್ಥಿಗಳು 5ನೇ ತರಗತಿ ಉತ್ತೀರ್ಣ ಆಗಿರಬೇಕು. ಕುಟುಂಬದ ವಾರ್ಷಿಕ ಆದಾಯ 2-50 ಲಕ್ಷ ರೂ. ಮೀರಿರಬಾರದು. ಅರ್ಜಿಗಳನ್ನು http://deptofmingadag.com ಆನ್‌ಲೈನ್ ಮೂಲಕ ಸೆಪ್ಟೆಂಬರ್ 20 ರೊಳಗಾಗಿ ಸಲ್ಲಿಸಬೇಕು ಎಂದು ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆದರ್ಶ ವಿದ್ಯಾಲಯಗಳಲ್ಲಿ 6ನೇ ತರಗತಿ ಪ್ರವೇಶಾತಿ ವೇಳಾಪಟ್ಟಿ ಪ್ರಕಟ

ಹೆಚ್ಚಿನ ಮಾಹಿತಿಗಾಗಿ ದೂ.ಸಂ.08372-297494 ಸಂಪರ್ಕಿಸಬಹುದು.

2020-21ನೇ ಶೈಕ್ಷಣಿಕ ಸಾಲಿಗೆ ಸ್ನಾತಕ ಪದವಿ ಕೋರ್ಸ್‌ಗಳ ಪ್ರವೇಶಾತಿಗೆ ದಿನಾಂಕ ವಿಸ್ತರಣೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌