ಆ್ಯಪ್ನಗರ

ಬೆಂಗಳೂರು ಮಹಾರಾಣಿ ಕಾಲೇಜು ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಅರ್ಜಿ ಆಹ್ವಾನ

MACW Admission 2019-20: ಮಹಾರಾಣಿ ಕ್ಲಸ್ಟರ್ ಯುನಿವರ್ಸಿಟಿ, ಬೆಂಗಳೂರು 2019-20 ನೇ ಸಾಲಿನ ಸ್ನಾತಕೋತ್ತರ ಪದವಿ ಕೋರ್ಸ್‌ಗಳ ಪ್ರವೇಶಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

Vijaya Karnataka Web 5 Sep 2019, 1:35 pm
ಬೆಂಗಳೂರು ಮಹಾರಾಣಿ ಕ್ಲಸ್ಟರ್ ಯುನಿವರ್ಸಿಟಿಯು 2019-20 ನೇ ಸಾಲಿಗೆ ಸ್ನಾತಕೋತ್ತರ ಪದವಿಗೆ ಪ್ರವೇಶಾತಿ ಪಡೆಯಲು ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
Vijaya Karnataka Web MACW Admission 2019-20 check details here


ಪದವಿ ವ್ಯಾಸಂಗ ಮುಗಿಸಿರುವ ಅಭ್ಯರ್ಥಿಗಳು ಬೆಂಗಳೂರು ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದಲ್ಲಿ ಪಿಜಿ ಕೋರ್ಸ್‌ ಪಡೆಯಲು ವಿವಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಅರ್ಜಿ ಡೌನ್‌ಲೋಡ್ ಮಾಡಿಕೊಂಡು, ಭರ್ತಿ ಮಾಡಿ ಅರ್ಜಿ ಸಲ್ಲಿಸಬೇಕಾಗಿದೆ.

ಭಾಷೆ ಮತ್ತು ಸಾಹಿತ್ಯ ಸಬ್ಜೆಕ್ಟ್‌ಗಳಲ್ಲಿ ಇಂಗ್ಲಿಷ್ ಕೋರ್ಸ್‌ ಲಭ್ಯವಿದೆ. ಮಾನವಿಕ ವಿಷಯಗಳು ಮತ್ತು ಲಿಬರಲ್ ಆರ್ಟ್ಸ್ ವಿಷಯಗಳಲ್ಲಿ ಇತಿಹಾಸ, ರಾಜ್ಯಶಾಸ್ತ್ರ, ಅರ್ಥಶಾಸ್ತ್ರ, ಸಮಾಜಶಾಸ್ತ್ರ ಕೋರ್ಸ್‌ಗಳು ಲಭ್ಯವಿವೆ. ವಿಜ್ಞಾನ ವಿಷಯಗಳಲ್ಲಿ ಜೀವರಸಾಯನ ಶಾಸ್ತ್ರ, ಗಣಿತ, ಭೌತಶಾಸ್ತ್ರ, ಮನೋವಿಜ್ಞಾನ ಕೋರ್ಸ್‌ಗಳಿಗೆ ಪ್ರವೇಶ ಪಡೆಯಬಹುದು.

ಗೃಹ ವಿಜ್ಞಾನ ವಿಷಯಗಳಲ್ಲಿ ಸಂಪನ್ಮೂಲ ನಿರ್ವಹಣೆ, ಪೌಷ್ಟಿಕಾಂಶದ ಜೈವಿಕ ರಸಾಯನಶಾಸ್ತ್ರ, ಜವಳಿ ಮತ್ತು ಉಡುಪು, ವಿಸ್ತರಣೆ ಶಿಕ್ಷಣ ಮತ್ತು ಸಂವಹನ, ಆರಂಭಿಕ ಬಾಲ್ಯ ಶಿಕ್ಷಣ ಮತ್ತು ಆಡಳಿತ, ಒಳಾಂಗಣ ವಿನ್ಯಾಸ ಮತ್ತು ಅಲಂಕಾರ ಕೋರ್ಸ್‌ಗಳಿಗೆ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಹತೆ

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪದವಿಯಲ್ಲಿ ಮೂರು ವಿಷಯಗಳಲ್ಲಿ ಒಂದು ವಿಷಯವಾಗಿ ಯಾವ ಕೋರ್ಸ್‌ಗೆ ಪ್ರವೇಶ ಪಡೆಯಲು ಬಯಸುತ್ತಾರೋ ಆ ವಿಷಯವನ್ನು ವ್ಯಾಸಂಗ ಮಾಡಿರಬೇಕು.

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಬೆಂಗಳೂರು ಮಹಾರಾಣಿ ಕಾಲೇಜಿನ ಆವರಣದಲ್ಲಿರುವ ಸಿಂಡಿಕೇಟ್‌ ಬ್ಯಾಂಕ್‌ನಲ್ಲಿ ಡಿಡಿ ಕಟ್ಟುವ ಮುಖಾಂತರ ಅರ್ಜಿ ಪಡೆಯಬಹುದು. ಅಥವಾ ಆನ್‌ಲೈನ್‌ನಲ್ಲಿ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಆನ್‌ಲೈನ್‌ನಲ್ಲಿ ಅರ್ಜಿ ಪಡೆದವರು ಅರ್ಜಿ ಸಲ್ಲಿಸಲು ಬ್ಯಾಂಕ್‌ನಲ್ಲಿ ಡಿಡಿ ಮೂಲಕ ಹಣ ಪಾವತಿಸಿ, ರಶೀದಿಯನ್ನು ಅರ್ಜಿಯೊಂದಿಗೆ ಲಗತ್ತಿಸಬೇಕಾಗುತ್ತದೆ.

ಪ್ರವೇಶಾತಿ ಅರ್ಜಿಗಾಗಿ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 9, 2019 (ಸಂಜೆ. 5 ಗಂಟೆಯೊಳಗೆ)

ಅರ್ಜಿ ಸಲ್ಲಿಸಬೇಕಾದ ಸ್ಥಳ: ವಿಶೇಷಾಧಿಕಾರಿಗಳ ಕಛೇರಿ, ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯ, ಬೆಂಗಳೂರು.

ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ www.gfgc.kar.nic.in/macw

ಅರ್ಜಿ ಶುಲ್ಕ

ಸಾಮಾನ್ಯ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ : ರೂ.700

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ: ರೂ.575

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌