ಆ್ಯಪ್ನಗರ

ರಾಮನಗರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಡಿಪ್ಲೊಮ ಕೋರ್ಸುಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ರಾಮನಗರದ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಖಾಲಿ ಉಳಿದಿರುವ ಸಿವಿಲ್, ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್‌ ಕಮ್ಯುನಿಕೇಶನ್ ಇಂಜಿನಿಯರಿಂಗ್ ಡಿಪ್ಲೊಮ

Vijaya Karnataka Web 12 Oct 2020, 1:05 pm
ರಾಮನಗರದ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಖಾಲಿ ಉಳಿದಿರುವ ಸಿವಿಲ್, ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್‌ ಕಮ್ಯುನಿಕೇಶನ್ ಇಂಜಿನಿಯರಿಂಗ್ ಡಿಪ್ಲೊಮ ಕೋರ್ಸುಗಳಿಗೆ ಪ್ರವೇಶ ಪಡೆಯಲು ಇಚ್ಛಿಸುವ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
Vijaya Karnataka Web diploma courses admission 2020
diploma courses admission 2020


ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ, ಡಿಪ್ಲೊಮ ಕೋರ್ಸ್‌ಗಳಿಗೆ ಆಸಕ್ತಿ ಉಳ್ಳ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಪ್ರಥಮ ಸೆಮಿಸ್ಟರ್ ಡಿಪ್ಲೊಮ ಪ್ರವೇಶ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳು ಅಕ್ಟೋಬರ್ 15ರೊಳಗೆ, ಪಾಲಿಟೆಕ್ನಿಕ್ ಸಂಸ್ಥೆಯಲ್ಲಿಯೇ ಅರ್ಜಿ ಪಡೆದು ಡಿಪ್ಲೊಮಾ ಅರ್ಜಿ ನೋಂದಣಿ ಶುಲ್ಕವನ್ನು (ಸಾಮಾನ್ಯ/2ಎ/3ಬಿ/3ಎ/3ಬಿ ರೂ. 100 ಹಾಗೂ ಪ.ಜಾ/ಪ.ಪಂ/ಪ್ರವರ್ಗ-1 ರೂ. 50) ನಗದು ರೂಪದಲ್ಲಿ ಪಾವತಿಸಿ ಎಲ್ಲಾ ಮೂಲ ದಾಖಲೆಗಳ ಜೆರಾಕ್ಸ್ ಪ್ರತಿಗಳೊಂದಿಗೆ ಅರ್ಜಿ ಸಲ್ಲಿಸುವುದು.

ತಾಂತ್ರಿಕ ಶಿಕ್ಷಣ ಇಲಾಖೆಯಡಿಯಲ್ಲಿ ರಾಜ್ಯಾದ್ಯಂತ ಸರ್ಕಾರಿ ಪಾಲಿಟೆಕ್ನಿಕ್‌ಗಳಲ್ಲಿ 2020-21ನೇ ಸಾಲಿನ ಪ್ರಥಮ ಸೆಮಿಸ್ಟರ್‌ಗೆ ಆನ್‌ಲೈನ್ ಇಂಟೆರ್ಯಾಕ್ಟಿವ್ ಕೌನ್ಸಿಲಿಂಗ್ ಮೂಲಕ ಡಿಪ್ಲೊಮ ಪ್ರವೇಶದ ನಂತರ, ಪಾಲಿಟೆಕ್ನಿಕ್‌ಗಳಲ್ಲಿ ಖಾಲಿ ಉಳಿದಿರುವ ಡಿಪ್ಲೊಮ ಕೋರ್ಸುಗಳ ಸೀಟುಗಳಿಗೆ ಪಾಲಿಟೆಕ್ನಿಕ್‌ನ ಪ್ರಾಂಶುಪಾಲರ ಹಂತದಲ್ಲಿಯೇ ಆಫ್‌ಲೈನ್ ಮೂಲಕ ಭರ್ತಿ ಮಾಡಲು ಅನುಮತಿ ನೀಡಿರುತ್ತಾರೆ.

ನೀಟ್ ಯುಜಿ 2020 ಫಲಿತಾಂಶ ಇಂದು ರಿಲೀಸ್ ಸಾಧ್ಯತೆ: ಚೆಕ್‌ ಮಾಡುವುದು ಹೇಗೆ?

ಹೆಚ್ಚಿನ ಮಾಹಿತಿಗೆ ಸರ್ಕಾರಿ ಪಾಲಿಟೆಕ್ನಿಕ್, ರಾಮನಗರ ಇಲ್ಲಿ ಸಂಪರ್ಕಿಸುವಂತೆ ರಾಮನಗರದ ಸರ್ಕಾರಿ ಪಾಲಿಟೆಕ್ನಿಕ್‌ನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸದ್ದಾರೆ.

ಶಾಲಾ ಶಿಕ್ಷಕರು, ವಿದ್ಯಾರ್ಥಿಗಳಿಗೆ ಇಂದಿನಿಂದ 3 ವಾರ ರಜೆ

ಹರಿಹರ ಪಾಲಿಟೆಕ್ನಿಕ್‌ ಕಾಲೇಜಿನಲ್ಲೂ ಪ್ರವೇಶಾತಿಗೆ ಅರ್ಜಿ ಆಹ್ವಾನ

2020-21 ನೇ ಸಾಲಿನಲ್ಲಿ ಪ್ರಥಮ ವರ್ಷದ ಡಿಪ್ಲೊಮ ಪ್ರವೇಶಕ್ಕೆ ಸಂಬಂಧಿಸಿದಂತೆ, ಸರ್ಕಾರಿ ಪಾಲಿಟೆಕ್ನಿಕ್, ಹರಿಹರ ಇಲ್ಲಿ ಆನ್‌ಲೈನ್‌ ಪ್ರಕ್ರಿಯೆ ಪೂರ್ಣಗೊಂಡಿದ್ದು, ಆಫ್‌ಲೈನ್‌ ಕೌನ್ಸಿಲಿಂಗ್ ಸೀಟು ಹಂಚಿಕೆ ಮುಗಿದ ನಂತರ ಭರ್ತಿಯಾಗದೇ ಖಾಲಿ ಉಳಿದ ಪ್ರಥಮ ಡಿಪ್ಲೊಮ ಸೀಟಿಗಳಿಗೆ ಅ.09 ರಿಂದ 15 ರವರೆಗೆ ಪ್ರಾಚಾರ್ಯರ ಹಂತದಲ್ಲಿ ಮೊದಲು ಬಂದವರಿಗೆ ಮೊದಲ ಆದ್ಯತೆ ಮೇರೆಗೆ ಸೀಟುಗಳನ್ನು ಭರ್ತಿ ಮಾಡಲಾಗುವುದು.

ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಕಾಲೇಜಿನಲ್ಲಿಯೇ ಪಡೆಯಬಹುದು. ಅರ್ಜಿ ಸಲ್ಲಿಸಲು ಅ.15 ಕೊನೆಯ ದಿನವಾಗಿರುತ್ತದೆ ಎಂದು ಹರಿಹರದ ಸರ್ಕಾರಿ ಪಾಲಿಟೆಕ್ನಿಕ್ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲಿಖಿತ ಪರೀಕ್ಷೆ ಆಧರಿಸಿಯೇ 23 ರಾಜ್ಯಗಳಲ್ಲಿ ಸರ್ಕಾರಿ ಹುದ್ದೆ ನೇಮಕಾತಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌