ಆ್ಯಪ್ನಗರ

1ರಿಂದ 6ನೇ ತರಗತಿ ಪರೀಕ್ಷೆಗಳು ರದ್ದು: ಎಗ್ಸಾಂ ಬರೆಯದಿದ್ರೂ ಪಾಸ್‌!

ಕೊರೊನಾ ವೈರಸ್‌ ಸೋಂಕು ಹರಡದಂತೆ ಮುನ್ನೆಚ್ಚರಿಕಾ ಕ್ರಮವಹಿಸಲು ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆಯು 1ರಿಂದ 6ನೇ ತರಗತಿ ವಿದ್ಯಾರ್ಥಿಗಳ ಪರೀಕ್ಷೆಯನ್ನು ರದ್ದುಗೊಳಿಸಿದೆ. ಕಿರುಪರೀಕ್ಷೆ ಮತ್ತು ಮಧ್ಯವಾರ್ಷಿಕ ಪರೀಕ್ಷೆಗಳಲ್ಲಿ ಪಡೆದಿರುವ ಅಂಕಗಳನ್ನು ಆಧರಿಸಿಯೇ ಫಲಿತಾಂಶ ಬರಲಿದೆ.

Vijaya Karnataka Web 12 Mar 2020, 7:25 pm
ಬೆಂಗಳೂರು: ಕೊರೊನಾ ವೈರಸ್‌ ಸೋಂಕು ಹರಡದಂತೆ ಮುನ್ನೆಚ್ಚರಿಕಾ ಕ್ರಮವಹಿಸಲು ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆಯು 1ರಿಂದ 6ನೇ ತರಗತಿ ವಿದ್ಯಾರ್ಥಿಗಳ ಪರೀಕ್ಷೆಯನ್ನು ರದ್ದುಗೊಳಿಸಿದೆ.
Vijaya Karnataka Web school


ಈ ಕುರಿತು ಗುರುವಾರ ಸುತ್ತೋಲೆ ಹೊರಡಿಸಿದ್ದು, ಬೆಂಗಳೂರು (ಉತ್ತರ), ಬೆಂಗಳೂರು (ದಕ್ಷಿಣ) ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ವ್ಯಾಪ್ತಿಯಲ್ಲಿನ ಎಲ್ಲ ಶಾಲೆಗಳಿಗೆ ಮಾತ್ರ ಈ ಆದೇಶ ಅನ್ವಯವಾಗುತ್ತದೆ. 1ರಿಂದ 6ನೇ ತರಗತಿ ವಿದ್ಯಾರ್ಥಿಗಳು ಪ್ರಸ್ತುತ ಶೈಕ್ಷಣಿಕ ಸಾಲಿನಲ್ಲಿ (2019-20) ನಡೆಸಲಾಗಿರುವ ಕಿರುಪರೀಕ್ಷೆ ಮತ್ತು ಮಧ್ಯವಾರ್ಷಿಕ ಪರೀಕ್ಷೆಗಳಲ್ಲಿ ಪಡೆದಿರುವ ಅಂಕಗಳನ್ನು ಆಧರಿಸಿಯೇ ವಿದ್ಯಾರ್ಥಿಗಳ ಶ್ರೇಣೀಕೃತ ಫಲಿತಾಂಶ ಪ್ರಕಟಿಸಬೇಕು ಎಂದು ತಿಳಿಸಿದೆ.

7-10ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾದರೆ ಸಾಕು:

7-10ನೇ ತರಗತಿ ವಿದ್ಯಾರ್ಥಿಗಳು ಕಡ್ಡಾಯವಾಗಿ ಪರೀಕ್ಷೆಗಳನ್ನು ಬರೆಯಲೇಬೇಕಿದೆ. ಆದರೆ ಈ ವಿದ್ಯಾರ್ಥಿಗಳಿಗೆ ಮಾ.13ರಿಂದ ಪರೀಕ್ಷಾ ಪೂರ್ವಸಿದ್ಧತಾ ರಜೆ ನೀಡಬೇಕು. ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾದರೆ ಸಾಕು. 7-9ನೇ ತರಗತಿ ವಿದ್ಯಾರ್ಥಿಗಳಿಗೆ ಮಾರ್ಚ್ 23ರೊಳಗೆ ಎಲ್ಲ ಪರೀಕ್ಷೆಗಳನ್ನು ಪೂರ್ಣಗೊಳಿಸಬೇಕು ಎಂದು ಶಿಕ್ಷಣ ಇಲಾಖೆ ಸುತ್ತೋಲೆಯಲ್ಲಿ ತಿಳಿಸಿದೆ. 10ನೇ ತರಗತಿ ಪರೀಕ್ಷೆಗಳು ಈ ಮೊದಲೇ ನಿಗದಿಪಡಿಸಿದ ವೇಳಾಪಟ್ಟಿಗೆ ಅನುಗುಣವಾಗಿಯೇ ನಡೆಯಲಿವೆ.

ಬೆಂಗಳೂರು ನಗರ ಮತ್ತು ಗ್ರಾಂಮಾತರ ಜಿಲ್ಲೆಯ ಪ್ರಾಥಮಿಕ ಶಾಲೆಗಳಿಗೆ ಇಂದಿನಿಂದಲೇ ಬೇಸಿಗೆ ರಜೆ!

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌