ಆ್ಯಪ್ನಗರ

ಡಿಸೆಂಬರ್ ಅಂತ್ಯದ ವರೆಗೂ ಶಾಲೆ ಆರಂಭ ಇಲ್ಲ: ಯಡಿಯೂರಪ್ಪ ನೇತೃತ್ವದ ಸಭೆಯಲ್ಲಿ ನಿರ್ಧಾರ

ಶಾಲೆ ಆರಂಭ ಮಾಡುವ ಕುರಿತಾಗಿ ವಿಧಾನಸೌಧದಲ್ಲಿ ಸಿಎಂ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ..

Vijaya Karnataka Web 23 Nov 2020, 1:12 pm
ವಿಧಾನಸೌಧ ಸಮಿತಿ ಕೊಠಡಿಯಲ್ಲಿ ಸಿಎಂ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಶಾಲೆ ಆರಂಭ ಮಾಡುವ ಕುರಿತಾಗಿ ಚರ್ಚೆ ನಡೆಸಲು ಇಂದು ಮಹತ್ವದ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಹಲವು ಇಲಾಖೆಗಳ ಪ್ರಮುಖರು ಹಾಗೂ ತಜ್ಞರ ಅಭಿಪ್ರಾಯ ಪಡೆದು, ಡಿಸೆಂಬರ್ ಅಂತ್ಯದ ವರೆಗೆ ಶಾಲೆ ಆರಂಭ ಮಾಡುವುದು ಬೇಡ ಎಂಬ ನಿರ್ಧಾರ ತೆಗೆದುಕೊಳ್ಳಲಾಗಿದೆ.
Vijaya Karnataka Web school reopening date
school reopening date


ಡಿಸೆಂಬರ್ ಕೊನೆಯ ವಾರದಲ್ಲಿ ಶಾಲೆ ಆರಂಭದ ಕುರಿತಾಗಿ ಚರ್ಚೆ ನಡೆಸಿ ನಂತರ ಶಾಲೆ ಆರಂಭದ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ. ಶಾಲೆ ಆರಂಭ ಕುರಿತಾಗಿ ಇಂದು (ಸೋಮವಾರ) ನಡೆದ ಸಭೆಯಲ್ಲಿ ಸಿಎಂ ಬಿ ಎಸ್ ಯಡಿಯೂರಪ್ಪ ವಿಧಾನಸೌಧದಲ್ಲಿ ತಮ್ಮ ನಿರ್ಧಾರ ಹೇಳಿದ್ದಾರೆ.

ವಿಧಾನಸೌಧ ಸಮಿತಿ ಕೊಠಡಿಯಲ್ಲಿ ಜರುಗಿದ ಸಿಎಂ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಶಾಲೆ ಆರಂಭ ಮಾಡುವ ಕುರಿತಾಗಿ ಚರ್ಚಿಸಲು, ಶಿಕ್ಷಣ ಸಚಿವ ಸುರೇಶ್ ಕುಮಾರ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ ವಿಜಯಭಾಸ್ಕರ್ ಸೇರಿದಂತೆ ಪ್ರಮುಖರು ಸಭೆಯಲ್ಲಿ ಭಾಗಿಯಾಗಿದ್ದರು.

ಡಿಸೆಂಬರ್ ನಲ್ಲಿ ಶಾಲೆ ತೆರೆಯುವುದು ಸೂಕ್ತವಲ್ಲ: ಕೋವಿಡ್ 19 ತಾಂತ್ರಿಕ ಸಲಹಾ ಸಮಿತಿ ಶಿಫಾರಸು

ಶಾಲೆ ಆರಂಭ ಮಾಡಬೇಕೋ ಬೇಡವೋ ಎಂಬುವುದರ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಯಿತು. ತಜ್ಞರ ಅಭಿಪ್ರಾಯ ಪಡೆದು ಡಿಸೆಂಬರ್ ಅಂತ್ಯದಲ್ಲಿ ರಾಜ್ಯ ಸರ್ಕಾರ ಶಾಲಾ ಆರಂಭದ ಕುರಿತಾತಿ ಮುಂದಿನ ನಿರ್ಧಾರವನ್ನು ಕೈಗೊಳ್ಳಲಿದೆ.

ಸಭೆಯಲ್ಲಿ 8 ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಭಾಗವಹಿಸಿದ್ದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಹಾಗೂ ಫ್ರೌಢ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಸಾರಿಗೆ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ಪ್ರಧಾನ ಕಾರ್ಯದರ್ಶಿ ಗಳು ಭಾಗಿಯಾಗಿದ್ದರು. ಶಿಕ್ಷಣ ಸಚಿವರ ವಿಶೇಷ ಕರ್ತವ್ಯಾಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌