ಆ್ಯಪ್ನಗರ

ಮೀನುಗಾರಿಕಾ ಕಾಲೇಜಿನಲ್ಲಿ ಉಚಿತ ತರಬೇತಿ: ಆರ್ಜಿ ಆಹ್ವಾನ

ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಅಂಗ ಸಂಸ್ಥೆಯಾದ ಮಂಗಳೂರಿನ ಮೀನುಗಾರಿಕಾ ಕಾಲೇಜಿನಲ್ಲಿ ನವೆಂಬರ್ 3 ರಿಂದ 30 ರವರೆಗೆ ಮತ್ಸ್ಯ ಆರೋಗ್ಯ ತಪಾಸಣೆ ಮತ್ತು ಮತ್ಸ್ಯ-ಉದ್ಯಮಶೀಲತೆ ಅಭಿವೃದ್ಧಿ ಕಾರ್ಯಾಗಾರ...

Vijaya Karnataka Web 20 Oct 2020, 7:56 pm
ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಅಂಗ ಸಂಸ್ಥೆಯಾದ ಮಂಗಳೂರಿನ ಮೀನುಗಾರಿಕಾ ಕಾಲೇಜಿನಲ್ಲಿ ನವೆಂಬರ್ 3 ರಿಂದ 30 ರವರೆಗೆ ಮತ್ಸ್ಯ ಆರೋಗ್ಯ ತಪಾಸಣೆ ಮತ್ತು ಮತ್ಸ್ಯ-ಉದ್ಯಮಶೀಲತೆ ಅಭಿವೃದ್ಧಿ ಕಾರ್ಯಾಗಾರ (ಅಕ್ವಾಕ್ಲೀನಿಕ್ ಅಂಡ್ ಅಕ್ವಾಪ್ರೆನ್ಯೂರ್ಶಿಪ್ ಡೆವಲಪ್ಮೆಂಟ್ ಪ್ರೋಗ್ರಾಂ) ಆಯೋಜಿಸುತ್ತಿದೆ. ಈ ತರಬೇತಿಗೆ ಅರ್ಹ ಮತ್ತು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
Vijaya Karnataka Web ಮೀನುಗಾರಿಕಾ ಕಾಲೇಜಿನಲ್ಲಿ ಉಚಿತ ತರಬೇತಿ: ಆರ್ಜಿ ಆಹ್ವಾನ


ಹೈದರಾಬಾದ್‌ನಲ್ಲಿರುವ ಭಾರತ ಸರ್ಕಾರದ ರಾಷ್ಟ್ರೀಯ ಕೃಷಿಯೇತರ ವಿಸ್ತರಣೆ ನಿರ್ವಹಣಾ ಸಂಸ್ಥೆ ಮತ್ತು ರಾಷ್ಟ್ರೀಯ ಮೀನುಗಾರಿಕೆ ಅಭಿವೃದ್ಧಿ ಮಂಡಳಿಗಳ ಸಹಯೋಗದಿಂದ ಕಾರ್ಯಾಗಾರ ನಡೆಯಲಿದೆ.

ರಾಜ್ಯ/ ಕೇಂದ್ರದ ಕೃಷಿ/ ಮೀನುಗಾರಿಕೆ/ ಪಶುವೈದ್ಯಕೀಯ ವಿಶ್ವವಿದ್ಯಾಲಯಗಳು ಅಥವಾ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯ ಕೇಂದ್ರಿಯ ಮೀನುಗಾರಿಕೆ ಶಿಕ್ಷಣ ಸಂಸ್ಥೆಯಿಂದ ಮೀನುಗಾರಿಕೆಯಲ್ಲಿ ಪದವಿ/ ರಾಜ್ಯ ಕೃಷಿ ವಿಶ್ವವಿದ್ಯಾಲಯದಿಂದ ಮೀನುಗಾರಿಕೆಯಲ್ಲಿ ಡಿಪ್ಲೊಮ / ಜೀವಶಾಸ್ತ್ರದಲ್ಲಿ ಪದವಿ/ ಜಲಕೃಷಿ, ಕೈಗಾರಿಕಾ ಮೀನುಗಾರಿಕೆ, ಕಡಲ ಜೀವಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ

ಉತ್ತರ ಕೋಲ್‌ಫೀಲ್ಡ್‌ನಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕ

ತರಬೇತಿ ಅವಧಿಯಲ್ಲಿ ಉಚಿತ ಊಟ, ವಸತಿ ಹಾಗೂ ಪ್ರಯಾಣ ಭತ್ಯೆಯನ್ನು ಆಯಾ ನಿವಾಸದಿಂದ ರೂ.2000 ಕ್ಕೆ ಮೀರದಂತೆ ಪ್ರಯಾಣದ ಚೀಟಿ ಸಲ್ಲಿಕೆಯ ಮೂಲಕ ಒದಗಿಸಲಾಗುವುದು.

ಅರ್ಜಿಗಳನ್ನು ವೆಬ್‌ಸೈಟ್‌ಗೆ ಭೇಟಿ ನೀಡಿ ಡೌನ್‌ ಮಾಡಿಕೊಳ್ಳಬೇಕು. ನಂತರ ಭರ್ತಿ ಮಾಡಿದ ಅರ್ಜಿಯನ್ನು ಡೀನ್, ಮೀನುಗಾರಿಕಾ ಮಹಾವಿದ್ಯಾಲಯ, ಕಂಕನಾಡಿ ಅಂಚೆ, ಮಂಗಳೂರು-575002' ಇಲ್ಲಿಗೆ ಕಳುಹಿಸಬೇಕು.

ಚೆನ್ನೈ ಪೆಟ್ರೋಲಿಯಂ ಕಾರ್ಪೋರೇಶನ್‌ನಲ್ಲಿ ಉದ್ಯೋಗಾವಕಾಶ

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0824 2248936, 99169 24084 ಮೂಲಕ ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌