ಆ್ಯಪ್ನಗರ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದಿರುವವರಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದಿರುವ, ಹಿಂದುಳಿದ ವರ್ಗಗಳಾದ ಪ್ರವರ್ಗ-1, 2A, 3A, 3B ಹಾಗೂ ಸಾಮಾನ್ಯ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಸಿ.

Vijaya Karnataka Web 15 Nov 2019, 6:32 pm
ಕರ್ನಾಟಕ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು, ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಅರ್ಜಿ ಆಹ್ವಾನಿಸಲಾಗಿದೆ.
Vijaya Karnataka Web bcwd incentives for higher education students 2019 20
incentives for higher education students 2019-20


2019-20ನೇ ಸಾಲಿಗೆ IIM, IIT, IISc, IITs, NITs, IISERs, AIIMS, NLU, ISM, IIP, ISI, JIPMER, SPA ಯಂತಹ ಪ್ರತಿಷ್ಠಿತ ರಾಷ್ಟ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಸಕ್ತ ಸಾಲಿನಲ್ಲಿ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳು ಇಲಾಖೆಯ ಪ್ರೋತ್ಸಾಹಧನ ಪಡೆಯಲು ಅರ್ಹರಾಗಿರುತ್ತಾರೆ.

ಈ ಪ್ರೋತ್ಸಾಹಧನವು ಕೇವಲ ಹಿಂದುಳಿದ ವರ್ಗಗಳಾದ ಪ್ರವರ್ಗ-1, 2A, 3A, 3B ಹಾಗೂ ಸಾಮಾನ್ಯ ವರ್ಗಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳು ಆನ್‌ಲೈನ್‌ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 14-11-2019

ಆನ್‌ಲೈನ್‌ ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ: 30-11-2019, ಸಂಜೆ 5 ಗಂಟೆಯೊಳಗೆ.

ಅರ್ಜಿ ಸಲ್ಲಿಸಲು ಭೇಟಿ ನೀಡಬೇಕಾದ ವೆಬ್‌ಸೈಟ್‌ ವಿಳಾಸ : www.backwardclasses.kar.nic.in

ಆದಾಯ ಮಿತಿ

- ವಿದ್ಯಾರ್ಥಿ ಮತ್ತು ಕುಟುಂಬದ ವಾರ್ಷಿಕ ಆದಾಯ ಮಿತಿ ರೂ.6.00 ಲಕ್ಷ ಮೀರಿರಬಾರದು. ಆರ್ಥಿಕವಾಗಿ ಹಿಂದುಳಿದ ಸಾಮಾನ್ಯ ವರ್ಗದ ಅಭ್ಯರ್ಥಿಗಳು ಸಹ ಪ್ರೋತ್ಸಾಹಧನಕ್ಕೆ ಅರ್ಹರು.

ಆಯ್ಕೆ ವಿಧಾನ

- ವಿದ್ಯಾರ್ಥಿಯು ತನ್ನ ಸ್ವಂತ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಯಲ್ಲಿ ಮೂಲ ದಾಖಲೆಗಳ ಪರಿಶೀಲನೆ ಮಾಡಿಸಿಕೊಳ್ಳಬೇಕು.

- ಮೇಲ್ಕಂಡಂತೆ ಒಟ್ಟು 13 ಪ್ರತಿಷ್ಠಿತ ರಾಷ್ಟ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಹಾಗೂ ಪೂರ್ಣಾವಧಿ ಪಿಹೆಚ್‌.ಡಿ ಗಾಗಿ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದು ವ್ಯಾಸಂಗ ಮಾಡುವ ವಿದ್ಯಾರ್ಥಿಗಳ ಆಯ್ಕೆಯನ್ನು ಅನುದಾನ ಲಭ್ಯತೆ, ಮೀಸಲಾತಿ ಹಾಗೂ ವಿದ್ಯಾರ್ಥಿಯ ಹಿಂದಿನ ವರ್ಷದ ಶೈಕ್ಷಣಿಕ ವಿದ್ಯಾರ್ಹತೆಯ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಆನ್‌ಲೈನ್‌ ಅರ್ಜಿ ಸಲ್ಲಿಸಲು ಕ್ಲಿಕ್ ಮಾಡಿ

ಪ್ರಕಟಣೆಗಾಗಿ ಕ್ಲಿಕ್ ಮಾಡಿ

ಸೂಚನೆಗಳಿಗೆ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ದಾಖಲೆಗಳು

- ಎಸ್‌ಎಸ್ಎಲ್‌ಸಿ ಅಂಕಪಟ್ಟಿ ಸ್ಕ್ಯಾನ್‌ ಕಾಪಿ.

- ಇತರೆ ಶೈಕ್ಷಣಿಕ ಅರ್ಹತೆಯ ಅಂಕಪಟ್ಟಿ ಸ್ಕ್ಯಾನ್‌ ಕಾಪಿ.

- ಆಧಾರ್ ಕಾರ್ಡ್‌ ಸ್ಕ್ಯಾನ್‌ ಕಾಪಿ.

- ಭಾವಚಿತ್ರ

- ಬ್ಯಾಂಕ್‌ ಖಾತೆ ಸಂಖ್ಯೆ ಮತ್ತು ಐಎಫ್‌ಎಸ್‌ಸಿ ಕೋಡ್ ಒಳಗೊಂಡ ವಿವರ.

- ಜಾತಿ ಮತ್ತು ಆದಾಯ ಪ್ರಮಾಣ ಪತ್ರ.

- ಪ್ರಸಕ್ತ ಕೋರ್ಸ್‌ ಪ್ರವೇಶಕ್ಕೆ ನಿಗದಿಪಡಿಸಿದ ಪ್ರವೇಶ ಪರೀಕ್ಷೆಯ ಅಂಕಪಟ್ಟಿ ಮತ್ತು ಕೋರ್ಸ್ ಪ್ರವೇಶ ದಾಖಲೆ.

- ಇತರೆ ಅಗತ್ಯ ಮಾಹಿತಿಗಳು

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಬಹುದಾದ ಸಹಾಯವಾಣಿ ಸಂಖ್ಯೆ : 8050770004

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌