ಆ್ಯಪ್ನಗರ

ಮೆಟ್ರಿಕ್ ಪೂರ್ವ ಹಾಸ್ಟೆಲ್ ಬೇಡಿಕೆ ಸಮೀಕ್ಷೆಗೆ ಸೂಚನೆ

ಸಮಾಜ ಕಲ್ಯಾಣ ಇಲಾಖೆ ನಡೆಸುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಇರುವ ಬೇಡಿಕೆ ಬಗ್ಗೆ ಸಮೀಕ್ಷೆ ನಡೆಸುವಂತೆ ಸಿಎಂ ಬಿ.ಎಸ್‌.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

Vijaya Karnataka Web 16 Jun 2020, 10:51 am
ಸಮಾಜ ಕಲ್ಯಾಣ ಇಲಾಖೆ ನಡೆಸುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಇರುವ ಬೇಡಿಕೆ ಬಗ್ಗೆ ಸಮೀಕ್ಷೆ ನಡೆಸುವಂತೆ ಸಿಎಂ ಬಿ.ಎಸ್‌.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
Vijaya Karnataka Web karnataka education news
karnataka education news


ಸಮಾಜ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲಿಸಿದ ಅವರು, "ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶಾಲೆಗಳಿವೆ. ಆದರೂ ಬೇಡಿಕೆ ಸಾಕಷ್ಟಿದೆ. ಕ್ರೈಸ್ ವಸತಿ ಶಾಲೆಗಳಲ್ಲಿ 660 ಶಿಕ್ಷಕರು ಮತ್ತು 183 ಪದವಿ ಪೂರ್ವ ಕಾಲೇಜು ಉಪನ್ಯಾಸಕರ ನೇಮಕ ಪ್ರಕ್ರಿಯೆ ಪೂರ್ಣಗೊಂಡಿದೆ.

993 ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ನೇಮಕ ಪರಿಶೀಲನೆ ಹಂತದಲ್ಲಿದೆ. ಶಿಕ್ಷಣ ಇಲಾಖೆ ನೆರವಿನೊಂದಿಗೆ ಪ್ರಕ್ರಿಯೆ ಪೂರ್ಣಗೊಳುಸುವಂತೆ ಸೂಚನೆ,"ನೀಡಿದ್ದಾರೆ.

ಪರೀಕ್ಷಾ ಕೇಂದ್ರಗಳ ಎಡವಟ್ಟಿನ ನಡುವೆ ಪಿಯು ಪರೀಕ್ಷೆಗೆ ಸರ್ಕಾರ ಸಜ್ಜು

ಕೋವಿಡ್-19 ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಯನ್ನು ಜೂ.18 ರ ಗುರುವಾರ ನಡೆಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಅಗತ್ಯ ಸಿದ್ಧತೆ ಕೈಗೊಂಡಿದೆ.

ಈ ಬಾರಿ ರಾಜ್ಯಾದ್ಯಂತ ಒಟ್ಟು 5,95,000 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಒಟ್ಟು 1016 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಜಿಲ್ಲಾ ಕೇಂದ್ರಗಳಲ್ಲಿ ಒಟ್ಟು 430, ತಾಲ್ಲೂಕು ಕೇಂದ್ರಗಳಲ್ಲಿ ಒಟ್ಟು 328 ಹಾಗೂ ಹೋಬಳಿ ಕೇಂದ್ರಗಳಲ್ಲಿ ಒಟ್ಟು 258 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ.

ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ವಸತಿ ನಿಲಯಗಳಲ್ಲಿ ನೆಲೆಸಿ ವ್ಯಾಸಂಗ ಮಾಡಿದ ಹಾಗೂ ಸ್ವಂತ ಊರುಗಳಿಗೆ ತೆರಳಿರುವ ವಲಸೆ ಕಾರ್ಮಿಕರ ಮಕ್ಕಳು ತಮ್ಮ ಸ್ವಂತ ಜಿಲ್ಲಾ ವ್ಯಾಪ್ತಿಯಲ್ಲಿ ಪರೀಕ್ಷೆ ಬರೆಯಲು ಅನುಕೂಲ ಮಾಡಿಕೊಡಲಾಗಿದೆ. ಈ ಕಾರಣದಿಂದಾಗಿ ಒಟ್ಟು 18,524 ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳನ್ನು ಬದಲಾಯಿಸಿಕೊಂಡಿದ್ದಾರೆ.

ಆನ್‌ಲೈನ್ ತರಗತಿ ನಿಷೇಧಕ್ಕೆ ಅಧಿಕೃತ ಆದೇಶ ಪ್ರಕಟ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌