ಆ್ಯಪ್ನಗರ

ಪದವಿ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್ ನೀಡಿದ ಉನ್ನತ ಶಿಕ್ಷಣ ಸಚಿವ

ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಇಲಾಖೆಯು ಪದವಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದೆ. ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಇಂದು ಸುದ್ದಿಗಾರರೊಂದಿಗೆ ಮಾತನಾಡಿ, "ಪದವಿ ವಿದ್ಯಾರ್ಥಿಗಳು ಈ ಬಾರಿಯ ಸೆಮಿಸ್ಟರ್ ಪರೀಕ್ಷೆ ಬರೆಯಲು ಇಚ್ಛಿಸದಿದ್ದಲ್ಲ.....

Vijaya Karnataka Web 5 Jun 2020, 9:46 am
ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಇಲಾಖೆಯು ಪದವಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದೆ. ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಇಂದು ಸುದ್ದಿಗಾರರೊಂದಿಗೆ ಮಾತನಾಡಿ, "ಪದವಿ ವಿದ್ಯಾರ್ಥಿಗಳು ಈ ಬಾರಿಯ ಸೆಮಿಸ್ಟರ್ ಪರೀಕ್ಷೆ ಬರೆಯಲು ಇಚ್ಛಿಸದಿದ್ದಲ್ಲಿ ಮುಂದಿನ ವರ್ಷಕ್ಕೆ ಕ್ಯಾರಿ ಓವರ್ ಮಾಡಿಕೊಳ್ಳಲು ಅವಕಾಶ ನೀಡುತ್ತೇವೆ. ಇದನ್ನು ಅಟೆಂಪ್ಟ್‌ ಎಂದು ಪರಿಗಣಿಸಲಾಗುವುದಿಲ್ಲ ಎಂದಿದ್ದಾರೆ".
Vijaya Karnataka Web karnataka degree exam status amid corona
karnataka education news


"ಕೊರೊನಾ ಸಂಕಷ್ಟದಲ್ಲಿ ಆನ್‌ಲೈನ್‌ ತರಗತಿಗಳು ಬೇಡ ಎಂದು ವಿದ್ಯಾರ್ಥಿಗಳು ಆಗ್ರಹಿಸುತ್ತಿರುವ ಹಿನ್ನೆಲೆ ನೇರ ತರಗತಿಗಳನ್ನು ನಡೆಸುವ ಬಗ್ಗೆ ಅಧಿಕಾರಿಗಳು ಮತ್ತು ವಿವಿಗಳು ಮುಖ್ಯಸ್ಥರೊಂದಿಗೆ ಚರ್ಚಿಸಿ ತೀರ್ಮಾನಿಸುತ್ತೇವೆ," ಎಂದು ಡಿಸಿಎಂ ತಿಳಿಸಿದ್ದಾರೆ.

ಅಂದಹಾಗೆ ಲಾಕ್‌ಡೌನ್‌ ಆದಾಗಿನಿಂದಲೂ ಪದವಿ, ಸ್ನಾತಕ ಪದವಿ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ತರಗತಿಗಳನ್ನು ನಡೆಸಲಾಗುತ್ತಿದೆ. ವಾಟ್ಸಾಪ್‌ ಗ್ರೂಪ್‌ಗಳನ್ನು ಕ್ರಿಯೇಟ್‌ ಮಾಡಿ ಪಿಡಿಎಫ್‌ ಫೈಲ್‌ಗಳಲ್ಲಿ ನೋಟ್ಸ್‌ಗಳನ್ನು, ಪಾಠ ಪ್ರವಚನಗಳನ್ನು ವಿದ್ಯಾರ್ಥಿಗಳಿಗೆ ತಲುಪಿಸುವಲ್ಲಿ ಉಪನ್ಯಾಸಕರು ಸಕ್ರಿಯರಾಗಿದ್ದಾರೆ.

ಒಂದು ವಾರದಲ್ಲಿ ಕನಿಷ್ಠ 3 ರಿಂದ 4 ಆನ್‌ಲೈನ್‌ ಕ್ಲಾಸ್‌ಗಳನ್ನು ವಿದ್ಯಾರ್ಥಿಗಳಿಗೆ ನಡೆಸಲಾಗುತ್ತಿದೆ.

ಸರಕಾರದ ಸೂಚನೆಗೆ ಮೊದಲೇ ಎಚ್ಚೆತ್ತ ಶಿಕ್ಷಣ ಸಂಸ್ಥೆಗಳು; ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ

ಶಾಲಾ-ಕಾಲೇಜು ಆರಂಭ ದಿನಾಂಕ ಇನ್ನೂ ಪ್ರಶ್ನೆಯೇ?

ಲಾಕ್‌ಡೌನ್‌ ಸಡಿಲಿಕೆ ನಂತರ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಯಾವ ಜಿಲ್ಲೆಯಲ್ಲಿಯೂ ಸಹ ಕೊರೊನಾ ಭಯ ಕಡಿಮೆ ಆಗಿಲ್ಲ. ಈ ನಡುವೆ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ರಾಜ್ಯದಲ್ಲಿ ಶಾಲೆಗಳನ್ನು ಹಂತ ಹಂತವಾಗಿ ತೆರೆಯಲು ಸೂಚನೆ ನೀಡಲಾಗಿತ್ತು. ಜೂನ್‌ 08 ರಿಂದ ದಾಖಲಾತಿ ಆರಂಭಿಸಲು ಶಾಲೆಗಳಿಗೆ ರಾಜ್ಯ ಸರ್ಕಾರ ಸೂಚನೆ ನೀಡಲಾಗಿತ್ತು. ಈ ಎಲ್ಲಾ ಅಪ್‌ಡೇಟ್‌ಗಳನ್ನು ತಿಳಿದ ಪೋಷಕರು ಹಾಗೂ ಶಾಲಾ ಶಿಕ್ಷಕರು ಸಹ ಶಾಲೆಗಳ ಆರಂಭಕ್ಕೆ ಅಪಸ್ವರ ಎತ್ತಿದ್ದಾರೆ. ಮಕ್ಕಳ ಆರೋಗ್ಯ ದೃಷ್ಟಿಯಿಂದ ಶಾಲೆ ಈಗಲೇ ತೆರೆಯುವುದು ಬೇಡ. ಕೊರೊನಾಗೆ ಚಿಕಿತ್ಸೆ ಕಂಡುಹಿಡಿದ ನಂತರ ಅಥವಾ ಪೂರ್ಣವಾಗಿ ಕೊರೊನಾ ವೈರಸ್ ಹರಡುವಿಕೆ ಚೇತರಿಕೆ ಕಂಡಮೇಲೆ ಶಾಲೆಗಳನ್ನು ಆರಂಭಿಸಿ ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಆದ್ದರಿಂದ ಶಾಲೆ ಮತ್ತು ಕಾಲೇಜುಗಳ ಆರಂಭ ದಿನಾಂಕ ಇನ್ನೂ ಪ್ರಶ್ನೆ ಆಗಿಯೇ ಉಳಿದಿದೆ.

ಮೈಸೂರಿನಲ್ಲಿ ಶಾಲೆಗಳ ಆರಂಭಕ್ಕೆ ಸಿದ್ಧತೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌