ಆ್ಯಪ್ನಗರ

ಇಂದಿನಿಂದ ದ್ವಿತೀಯ ಪಿಯು ಸ್ಕ್ಯಾನ್ಡ್‌ ಪ್ರತಿ ಪಡೆಯಲು ಅವಕಾಶ..ಡೌನ್‌ಲೋಡ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

2nd PUC Answer Sheet Photocopy 2023: ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಉತ್ತರ ಪತ್ರಿಕೆಯ ಸ್ಕ್ಯಾನ್ಡ್‌ ಪ್ರತಿ ಪಡೆಯಲು ಅವಕಾಶ ನೀಡಲಾಗಿದ್ದು, ಇಂದಿನಿಂದ ಉತ್ತರ ಪತ್ರಿಕೆ ಸ್ಕ್ಯಾನ್ಡ್ ಪ್ರತಿ ಪಡೆಯಬಹುದಾಗಿದೆ.

Authored byಮುರಳಿಧರ. ಯಡಚಿ | Vijaya Karnataka Web 26 Apr 2023, 12:57 pm

ಹೈಲೈಟ್ಸ್‌:

  • ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ.
  • ಇಂದಿನಿಂದ ದ್ವಿತೀಯ ಪಿಯು ಸ್ಕ್ಯಾನ್ಡ್‌ ಪ್ರತಿ ಪಡೆಯಲು ಅವಕಾಶ.
  • ಸ್ಕ್ಯಾನ್ಡ್‌ ಪ್ರತಿ ಡೌನ್‌ಲೋಡ್ ಮಾಡುವುದು ಹೇಗೆ?.
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web how to download 2nd puc Answer Sheet Scanned Copy
ದ್ವಿತೀಯ ಪಿಯು ಸ್ಕ್ಯಾನ್ಡ್‌ ಪ್ರತಿ ..PC-VK
ಮಾರ್ಚ್‌ 2023ರ ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಉತ್ತರ ಪತ್ರಿಕೆಯ ಸ್ಕ್ಯಾನ್ಡ್‌ ಪ್ರತಿ ಪಡೆಯಲು ಅವಕಾಶ ನೀಡಲಾಗಿತ್ತು. ಉತ್ತರ ಪತ್ರಿಕೆಯ ಸ್ಕ್ಯಾನ್ಡ್‌ ಪ್ರತಿ ಪಡೆಯಲು ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದಿರೋ ಆ ವಿದ್ಯಾರ್ಥಿಗಳಿಗೆ ಇಂದಿನಿಂದ ಅಂದ್ರೆ ಏಪ್ರಿಲ್ 26 ರಿಂದ ಸ್ಕ್ಯಾನ್ಡ್ ಪ್ರತಿ ಪಡೆಯಬಹುದಾಗಿದೆ.
ಮಾರ್ಚ್‌ 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ದಿನಾಂಕ 21-04-2023 ರಂದು ಪ್ರಕಟಿಸಲಾಗಿದ್ದು, ವಿದ್ಯಾರ್ಥಿಗಳು ಉತ್ತರ ಪತ್ರಿಕೆಗಳ ಸ್ಕ್ಯಾನ್ಡ್‌ಪ್ರತಿ ಪಡೆಯಲು ದಿನಾಂಕ 27-04-2023ರವರೆಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ನಿಗದಿತ ದಿನಾಂಕದೊಳಗೆ ಆನ್‌ಲೈನ್‌ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ದಿನಾಂಕ 26-04-2023 ರಿಂದ ಹಂತ ಹಂತವಾಗಿ ಸ್ಕ್ಯಾನ್ಡ್‌ ಪ್ರತಿಗಳನ್ನು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯನಿರ್ಣಯ ಮಂಡಲಿ ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಲಾಗುತ್ತದೆ. ಉತ್ತರ ಪತ್ರಿಕೆಗಳ ಸ್ಕ್ಯಾನ್ಡ್‌ ಪ್ರತಿಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳಲು ದಿನಾಂಕ 02-05-2023ರ ವರೆಗೆ ಅವಕಾಶವಿರುತ್ತದೆ.

2nd PUC 2023 : ಪಿಯುಸಿ ಫೇಲ್ ಆದ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸುವುದು ಹೇಗೆ? ಶುಲ್ಕ ಎಷ್ಟು? ಇಲ್ಲಿದೆ ಮಾಹಿತಿ
ಈ ಬಗ್ಗೆ ಸ್ಕ್ಯಾನ್ಡ್‌ ಪ್ರತಿ ಅಪ್‌ಲೋಡ್‌ ಮಾಡಿರುವ ಕುರಿತು ವಿದ್ಯಾರ್ಥಿಗಳಿಗೆ SMS ಮೂಲಕ ಸಂದೇಶ ರವಾನಿಸಲಾಗುವುದು. ಸಂದೇಶ ಸ್ವೀಕರಿಸಿದ ವಿದ್ಯಾರ್ಥಿಗಳು ಸಂಬಂಧಿಸಿದ ಉತ್ತರ ಪತ್ರಿಕೆಗಳ ಸ್ಕ್ಯಾನ್ಡ್‌ ಪ್ರತಿಯನ್ನು https://kseab.karnataka.gov.in/ ನಲ್ಲಿ ಡೌನ್‌ಲೋಡ್‌ ಮಾಡಿಕೊಳ್ಳಬಹುದಾಗಿದೆ.

ಮಾರ್ಚ್‌ 2023ರ ದ್ವಿತೀಯ ಪಿಯುಸಿ ಪರೀಕ್ಷೆ ಉತ್ತರ ಪತ್ರಿಕೆ ಸ್ಕ್ಯಾನ್ಡ್‌ ಪ್ರತಿ ಪಡೆಯುವ ವಿಧಾನ
  • ಇಲಾಖೆಯ ವೆಬ್‌ಸೈಟ್‌ https://kseab.karnataka.gov.in/ ಭೇಟಿ ನೀಡಿ.
  • ಓಪನ್‌ ಆದ ಮುಖಪುಟದಲ್ಲಿ Answer Sheet Scanned Copy ಎಂದು ಇರುತ್ತದೆ ಆ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ.
  • ನಂತರ ದ್ವಿತೀಯ ಪಿಯುಸಿ ಪರೀಕ್ಷೆಯ ನೋಂದಣಿ ಸಂಖ್ಯೆ ನಮೂದಿಸಿ.
  • ನೀವು ಯಾವ ವಿಷಯದ ಸ್ಕ್ಯಾನ್ಡ್‌ ಪ್ರತಿ ಪಡೆಯಬೇಕು ಆ ವಿಷಯದ ಮೇಲೆ ಕ್ಲಿಕ್‌ ಮಾಡಿ.
  • ಆಗ ನಿಮಗೆ ನಿಮ್ಮ ಉತ್ತರ ಪತ್ರಿಕೆಯ ಸ್ಕ್ಯಾನ್ಡ್‌ ಪ್ರತಿ ದೊರೆಯುತ್ತದೆ.
  • ನಂತರ ಅದನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದು.

ದ್ವಿತೀಯ ಪಿಯು ಮರುಮೌಲ್ಯಮಾಪನ, ಮರುಎಣಿಕೆ, ಸ್ಕ್ಯಾನ್ಡ್‌ ಪ್ರತಿ ಪಡೆಯಲು ಅರ್ಜಿ ಆಹ್ವಾನ..ಅರ್ಜಿ ವಿಧಾನ,ಶುಲ್ಕದ ಮಾಹಿತಿ ಇಲ್ಲಿದೆ
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು
  • ಸ್ಕ್ಯಾನ್ಡ್ ಪ್ರತಿ ಅರ್ಜಿ ಸಲ್ಲಿಸಲು ದಿನಾಂಕ - 21-04-2023 ರಿಂದ 27-04-2023 ರವರೆಗೆ.
  • ಸ್ಕ್ಯಾನ್ಡ್ ಪ್ರತಿ ಡೌನ್‌ಲೋಡ್ ಮಾಡಿಕೊಳ್ಳಲು ಪ್ರಾರಂಭ ಹಾಗೂ ಕೊನೆಯ ದಿನಾಂಕ - 26-04-2023 ರಿಂದ 02-04-2023 ರವರೆಗೆ.
  • ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಹಾಗೂ ಮರುಎಣಿಕೆಗೆ ಅರ್ಜಿ ಸಲ್ಲಿಸಲು ದಿನಾಂಕ - 03-05-2023 ರಿಂದ 08-05-2023 ರವರೆಗೆ.

'ಕಲಿಯುವಾಗಲೇ ಗಳಿಸಿರಿ' ಯೋಜನೆ..ಓದುವಾಗಲೇ ವಿದ್ಯಾರ್ಥಿಗಳಿಗೆ ಕಾಂಪಸ್‌ನಲ್ಲಿ ಪಾರ್ಟ್ ಟೈಂ ಜಾಬ್undefined
ಲೇಖಕರ ಬಗ್ಗೆ
ಮುರಳಿಧರ. ಯಡಚಿ
" ಲೇಖಕರ ವಿವರ: ಮುರಳೀಧರ ಯಡಚಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 5 ವರ್ಷ 6 ತಿಂಗಳ ಅನುಭವ ಹೊಂದಿದ್ದಾರೆ. ಅವರು ಕ್ರೀಡೆ, ರಾಜಕೀಯ, ದಿನನಿತ್ಯದ ಅಪ್‌ಡೇಟ್‌ ಸುದ್ದಿ ಮತ್ತು ಶಿಕ್ಷಣ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದಾರೆ. ಪ್ರಸ್ತುತ, ಕಳೆದ 11 ತಿಂಗಳಿಂದ ಶಿಕ್ಷಣ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾರೆ. ಮುರಳೀಧರ ಯಡಚಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಅವರು ತಮ್ಮ ವೃತ್ತಿಜೀವನದಲ್ಲಿ ಹಲವಾರು ಪ್ರಮುಖ ಸುದ್ದಿಗಳನ್ನು ಬ್ರೇಕ್‌ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇದು ಮಾಧ್ಯಮಗಳಲ್ಲಿ ವ್ಯಾಪಕವಾಗಿ ವರದಿಯಾಗಿದೆ. ಮುರಳೀಧರ ಯಡಚಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಮುರಳೀಧರ ಯಡಚಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಕ್ರಿಕೆಟ್ ಆಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ಅವರ ಉತ್ತಮ ಗುಣಮಟ್ಟದ ಕೆಲಸಕ್ಕೆ ಈ ಹವ್ಯಾಸಗಳು ಸಹಾಯಕವಾಗಿವೆ. ಒಟ್ಟಾರೆ ಹೇಳುವುದಾದರೆ, ಮುರಳೀಧರ ಯಡಚಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ. "... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌