ಆ್ಯಪ್ನಗರ

ಆನ್‌ಲೈನ್ CETಗೆ ಸರಕಾರದ ಸಿದ್ಧತೆ; 3 ಗಂಟೆ ಪರೀಕ್ಷೆಗೆ ಆಕ್ಷೇಪಣೆ ಆಹ್ವಾನ

ಕರ್ನಾಟಕ ರಾಜ್ಯ ಸರ್ಕಾರ ಮುಂದಿನ ವರ್ಷದಿಂದ ಎಂಜಿನಿಯರಿಂಗ್ ಹಾಗೂ ಇನ್ನಿತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಆನ್‌ಲೈನ್‌ ಮೂಲಕ ನಡೆಸಲು ತಯಾರಿ ನಡೆಸುತ್ತಿದೆ.

Vijaya Karnataka Web 16 Jan 2020, 3:50 pm
ರಾಜ್ಯ ಸರ್ಕಾರ ಇತ್ತೀಚೆಗೆ ಚಿಂತನೆ ನಡೆಸಿ, ಬಜೆಟ್‌ನಲ್ಲಿ ಘೋಷಿಸಿದಂತೆ ಎಂಜಿನಿಯರಿಂಗ್ ಹಾಗೂ ಇನ್ನಿತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (CET) ಆನ್‌ಲೈನ್‌ನಲ್ಲಿ ನಡೆಸಲು ಪೂರ್ವ ಸಿದ್ಧತೆ ಆರಂಭಿಸಿದೆ. ಜತೆಗೆ, 'ನೀಟ್' ಮಾದರಿಯಲ್ಲಿ ಮೂರು ಗಂಟೆ ಅವಧಿಯಲ್ಲಿ ಪರೀಕ್ಷೆ ಮುಗಿಸಲು ಒಂದೇ ಪ್ರಶ್ನೆ ಪತ್ರಿಕೆ ರೂಪಿಸಲು ಮುಂದಾಗಿದೆ.
Vijaya Karnataka Web ಆನ್‌ಲೈನ್ CETಗೆ ಸರಕಾರದ ಸಿದ್ಧತೆ; 3 ಗಂಟೆ ಪರೀಕ್ಷೆಗೆ ಆಕ್ಷೇಪಣೆ ಆಹ್ವಾನ


ಆದರೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಈ ವರ್ಷ ಏಪ್ರಿಲ್ 22 ಮತ್ತು 23 ರಂದು ಸಿಇಟಿ ನಡೆಸಲು ವೇಳಾಪಟ್ಟಿ ನಿಗದಿಪಡಿಸಿದೆ. ಹೀಗಾಗಿ, ಈ ವರ್ಷ ಆಫ್‌ಲೈನ್‌ನಲ್ಲಿ ಪರೀಕ್ಷೆ ನಡೆಯಲಿದೆ. ಆನ್‌ಲೈನ್‌ ನಲ್ಲಿ ಪರೀಕ್ಷೆ ನಡೆಸುವ ಕುರಿತು ಕೆಇಎ ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಸ್ವೀಕರಿಸಲಿದೆ.

ಪ್ರತಿ ವರ್ಷ 1.90 ಲಕ್ಷ ವಿದ್ಯಾರ್ಥಿಗಳು ಸಿಇಟಿ ಬರೆಯುತ್ತಾರೆ. ಪ್ರಸ್ತುತ ಜೀವಶಾಸ್ತ್ರ, ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರ ವಿಷಯಗಳಿಗೆ ಎರಡು ದಿನ ಪರೀಕ್ಷೆ ನಡೆಸಲಾಗುತ್ತದೆ. ಆದರೆ, ಆನ್‌ಲೈನ್‌ನಲ್ಲಿ ಪರೀಕ್ಷೆ ನಡೆಸಲು ಪ್ರಸ್ತುತ 25 ಸಾವಿರ ಕಂಪ್ಯೂಟರ್‌ಗಳಷ್ಟೇ ಲಭ್ಯವಿರುವುದರಿಂದ ಸುಮಾರು 2 ಲಕ್ಷ ವಿದ್ಯಾರ್ಥಿಗಳಿಗೆ ಆನ್‌ಲೈನ್‌ನಲ್ಲಿ ಪರೀಕ್ಷೆ ನಡೆಸಲು 10 ದಿನ ಬೇಕಾಗುತ್ತದೆ. ಹೀಗಾಗಿ 4 ವಿಷಯಗಳ ಪ್ರಶ್ನೆಗಳನ್ನು ಸಮಾನವಾಗಿ ಆಯ್ಕೆಮಾಡಿಕೊಂಡು ಒಂದೇ ಪ್ರಶ್ನೆಪತ್ರಿಕೆ ರೂಪಿಸಿ, ಮೂರು ಗಂಟೆಗಳಲ್ಲಿ ಪರೀಕ್ಷೆ ಮುಗಿಸಲು ಸರಕಾರ ಚಿಂತನೆ ನಡೆಸಿದೆ.

ಪ್ರಶ್ನೆ ಪತ್ರಿಕೆ ಕ್ರಮ ಬದಲು
"ಆನ್‌ಲೈನ್‌ನಲ್ಲಿ CET ನಡೆಸಬೇಕಾದರೆ 2 ಲಕ್ಷ ಕಂಪ್ಯೂಟರ್‌ಗಳನ್ನು ಅಳವಡಿಸಬೇಕು. ಇದೇನೂ ಸಮಸ್ಯೆಯಲ್ಲ. ಆದರೆ, ಈಗಿರುವ ಸಿಇಟಿ ಮಾದರಿಯಲ್ಲಿ ನಾಲ್ಕು ವಿಷಯಗಳ ಪ್ರಶ್ನೆ ಪತ್ರಿಕೆಗಳಿಗೆ ಮೂರು ಗಂಟೆ ಅವಧಿಯಲ್ಲಿ ಆನ್‌ಲೈನ್‌ ಪರೀಕ್ಷೆ ನಡೆಸಲು ಸಾಧ್ಯವಿಲ್ಲ. ಅಲ್ಲದೆ, 10 ದಿನ ಆನ್‌ಲೈನ್‌ನಲ್ಲಿ ಪರೀಕ್ಷೆ ನಡೆಸುವುದು ಕಷ್ಟ. ಈ ಹಿನ್ನೆಲೆಯಲ್ಲಿ ಜೀವಶಾಸ್ತ್ರ, ಗಣಿತ, ಭೌತಶಾಸ್ತ್ರ ಹಾಗೂ ರಸಾಯನಶಾಸ್ತ್ರ ವಿಷಯಗಳಿಗೆ ಸಂಬಂಧಿಸಿದ ಪ್ರಶ್ನೆಗಳನ್ನು ಸಮಾನವಾಗಿ ಆಯ್ಕೆ ಮಾಡಿಕೊಂಡು ಒಂದೇ ಪ್ರಶ್ನೆ ಪತ್ರಿಕೆ ರೂಪಿಸಲು ಚಿಂತನೆ ನಡೆಸಲಾಗಿದೆ" ಎಂದು ಉನ್ನತ ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೈಸೂರು CFTRI ನಲ್ಲಿ ಸೈಂಟಿಸ್ಟ್‌ ಹುದ್ದೆಗಳ ನೇಮಕ.. ಅರ್ಜಿ ಆಹ್ವಾನ

"ಈ ಬಗ್ಗೆ ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸಲು ಕೂಡ ನಿರ್ಧರಿಸಲಾಗಿದೆ. ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ತಜ್ಞರಿಂದ ಸ್ವೀಕರಿಸುವ ಆಕ್ಷೇಪಣೆಗಳನ್ನಾಧರಿಸಿ ಸರಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ" ಎಂದು ಅವರು ವಿವರಿಸಿದ್ದಾರೆ.

ಮಣಿಪಾಲ ವಿವಿಯಲ್ಲಿ ರಿಸರ್ಚ್‌ ಫೆಲೋ ಹುದ್ದೆಗಳ ನೇಮಕ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಿಇಟಿ ಪರೀಕ್ಷೆಯಲ್ಲಿ ಪಾರದರ್ಶಕತೆ ಹಾಗೂ ಸುರಕ್ಷತೆಯನ್ನು ಹೆಚ್ಚಿಸಿ ಹೊರ ರಾಜ್ಯದ ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ಅರ್ಹ ವಿದ್ಯಾರ್ಥಿಗಳ ಭಾಗವಹಿಸುವಿಕೆ ಹೆಚ್ಚಿಸಲು ಪ್ರಾಧಿಕಾರದ ಸಂಪನ್ಮೂಲ ಬಳಸಿ ಆನ್‌ಲೈನ್‌ ಮೂಲಕ ಸಿಇಟಿ ನಡೆಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸರಕಾರ 2019-20ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿರುವುದನ್ನು ಇಲ್ಲಿ ಉಲ್ಲೇಖಿಸಬಹುದು.

ಉಡುಪಿ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕಾತಿಗೆ ಅಧಿಸೂಚನೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌