ದ್ವಿತೀಯ ಪಿಯುಸಿ ಫಲಿತಾಂಶವನ್ನು ಇಂದು (ಜುಲೈ 14, 2020) ರಂದು ಬೆಳಿಗ್ಗೆ 11.30 ಕ್ಕೆ ಪ್ರಕಟಿಸಲಾಗುವುದು. ಅಧಿಕಾರಿಗಳೊಂದಿಗೆ ಸಭೆ ನಡೆಸಿ ಈ ಕುರಿತಂತೆ ನಿರ್ದೇಶನ ನೀಡಲಾಗಿದೆ ಎಂದು ಸಚಿವ ಸುರೇಶ್ಕುಮಾರ್ ತಮ್ಮ ಫೇಸ್ಬುಕ್ ಪ್ರೊಫೈಲ್ನಲ್ಲಿ ಮಾಹಿತಿ ಪೋಸ್ಟ್ ಮಾಡುವ ಮೂಲಕ ತಿಳಿಸಿದ್ದಾರೆ.
ಇಂದು ಅಧಿಕೃತ ಫಲಿತಾಂಶ ಪ್ರಕಟಣೆಯ ಬಳಿಕ ಉತ್ತೀರ್ಣಗೊಂಡ ಎಲ್ಲಾ ವಿದ್ಯಾರ್ಥಿಗಳಿಗೆ ಮೊಬೈಲ್ ಮೂಲಕ ಸಂದೇಶ ರವಾನೆ ಆಗುತ್ತದೆ. ಫಲಿತಾಂಶ ನೋಡಲು ಕಾಲೇಜುಗಳಿಗೆ ಹೋಗುವ ಅವಶ್ಯಕತೆ ಇಲ್ಲ ಎಂದು ತಿಳಿಸಿದ್ದಾರೆ.
ರಿಸಲ್ಟ್ ಚೆಕ್ ಮಾಡಲು ಕಾಲೇಜುಗಳಿಗೆ ಹೋಗುವ ಅವಶ್ಯಕತೆ ಇಲ್ಲ
ವಿದ್ಯಾರ್ಥಿಗಳು ತಮ್ಮ ರಿಸಲ್ಟ್ ಅನ್ನು ಇಂದು ಮಧ್ಯಾಹ್ನ 12 ಗಂಟೆಯ ಬಳಿಕ ಸರ್ಕಾರದ ಅಧಿಕೃತ ಜಾಲತಾಣ www.karresult.nic.in ನಲ್ಲಿ ಚೆಕ್ ಮಾಡಿಕೊಳ್ಳಬಹುದು.
ಮಾರ್ಚ್ 04 ರಿಂದ 21, 2020 ರವರೆಗೆ ವಿವಿಧ ವಿಷಯಗಳ ಪರೀಕ್ಷೆಗಳು ನಡೆದಿದ್ದು, ನಂತರ ಕೋವಿಡ್ -19 ಸಂದರ್ಭದಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಲ್ಲಾ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ದಿನಾಂಕ 18-06-2020 ರಂದು ಆಂಗ್ಲ ಭಾಷೆಯ ಪರೀಕ್ಷೆಗಳನ್ನು ನಡೆಸಲಾಗಿತ್ತು. ಸುಮಾರು 6.75 ಲಕ್ಷ ವಿದ್ಯಾರ್ಥಿಗಳ ಫಲಿತಾಂಶ ಇಂದು ಹೊರಬೀಳಲಿದೆ.
ಸಿಬಿಎಸ್ಇ 12ನೇ ತರಗತಿ ಫಲಿತಾಂಶ ಪ್ರಕಟ: ಚೆಕ್ ಮಾಡಲು ಡೈರೆಕ್ಟ್ ಲಿಂಕ್ ಇಲ್ಲಿದೆ..
ಇಂದು ಅಧಿಕೃತ ಫಲಿತಾಂಶ ಪ್ರಕಟಣೆಯ ಬಳಿಕ ಉತ್ತೀರ್ಣಗೊಂಡ ಎಲ್ಲಾ ವಿದ್ಯಾರ್ಥಿಗಳಿಗೆ ಮೊಬೈಲ್ ಮೂಲಕ ಸಹ ಸಂದೇಶ ರವಾನೆಯಾಗುವುದು.
ಪ್ರಥಮ ಪಿಯುಸಿ ಪೂರಕ ಪರೀಕ್ಷೆ ರದ್ದು
ದಿನಾಂಕ 16-07-2020 ರಿಂದ 27-07-2020 ರವರೆಗೆ ನಿಗಧಿಯಾಗಿದ್ದ ಪ್ರಥಮ ಪಿಯುಸಿ ಪೂರಕ ಪರೀಕ್ಷೆಗಳನ್ನು ಕೊರೊನಾ ಹಿನ್ನೆಲೆಯಲ್ಲಿ ರದ್ದುಪಡಿಸಲು ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಈ ಸಭೆಯಲ್ಲಿ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಮತ್ತು ಪದವಿ ಪೂರ್ವ ಇಲಾಖೆಯ ನಿರ್ದೇಶಕಿ ಶ್ರೀಮತಿ ಕನಗವಲ್ಲಿ ಉಪಸ್ಥಿತರಿದ್ದರು.
ಸುಮಾರು 60 ಸಾವಿರ ವಿದ್ಯಾರ್ಥಿಗಳು ಈ ಪರೀಕ್ಷೆಗಳನ್ನು ಬರೆಯಬೇಕಿದ್ದು, ಕಾಲೇಜು ಹಂತದಲ್ಲಿ ಪರೀಕ್ಷೆಗಳನ್ನು ನಿರ್ವಹಿಸಿ ಇದೇ 30 ರಂದು ಫಲಿತಾಂಶವನ್ನು ಪ್ರಕಟಿಸಲು ಈ ಹಿಂದೆ ನಿರ್ಧರಿಸಲಾಗಿತ್ತು.
ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣತೆಯನ್ನು ಪಡೆಯಲು ಅವಶ್ಯಕತೆಯಿರುವ ಕನಿಷ್ಠ ಅಂಕಗಳನ್ನು ಕಾಲೇಜು ಹಂತದಲ್ಲಿಯೇ ನೀಡಲಾಗುವುದು. ಹಾಜರಾತಿ ಕೊರತೆ ಇಲ್ಲದ, ಅನಿವಾರ್ಯ ಸಂದರ್ಭದಲ್ಲಿ ಪರೀಕ್ಷೆಗೆ ಗೈರುಹಾಜರಾದ ವಿದ್ಯಾರ್ಥಿಗಳಿಗೆ ಮುಂದಿನ ತರಗತಿಗಳು ಪ್ರಾರಂಭವಾದ ಬಳಿಕ ದ್ವಿತೀಯ ಪಿಯುಸಿಯ ಪ್ರಥಮ ಕಿರುಪರೀಕ್ಷೆಗೂ ಪೂರ್ವದಲ್ಲಿ ಪ್ರಥಮ ಪಿಯುಸಿಯಲ್ಲಿ ಅನುತ್ತೀರ್ಣವಾದ ವಿಷಯಗಳಿಗೆ ಮತ್ತೊಮ್ಮೆ ಕಾಲೇಜು ಹಂತದಲ್ಲಿ ಕಿರುಪರೀಕ್ಷೆಯನ್ನು ನಡೆಸಿ ಅವರ ಕಲಿಕೆಯ ಮಟ್ಟವನ್ನು ಮೌಲ್ಯಮಾಪನ ಮಾಡಲಾಗುವುದು.
ಹಾಜರಾತಿಯ ಕೊರತೆಯಿಂದ ವಾರ್ಷಿಕ ಪರೀಕ್ಷೆಗೆ ಹಾಜರಾಗಲು ಅನುಮತಿ ಪಡೆಯದ ವಿದ್ಯಾರ್ಥಿಗಳು ಮಾತ್ರ ಅನುತ್ತೀರ್ಣಗೊಳ್ಳುವರು ಎಂದು ಸ್ಪಷ್ಟಪಡಿಸಲಾಗಿದೆ.