ಆ್ಯಪ್ನಗರ

ಕರ್ನಾಟಕ SSLC ಪರೀಕ್ಷೆಯಲ್ಲಿ ಬದಲಾವಣೆಯಿಲ್ಲ; ವೇಳಾಪಟ್ಟಿಯಂತೆ ಎಕ್ಸಾಮ್

ಟೈಮ್‌ ಟೇಬಲ್ ಪ್ರಕಾರ, ಮಾರ್ಚ್‌ 27 ರಿಂದ ಪ್ರಥಮ ಭಾಷೆ ಕನ್ನಡ ಪರೀಕ್ಷೆ ಆರಂಭವಾಗಲಿದೆ. ಏಪ್ರಿಲ್ 9 ರಂದು ಸಮಾಜ ವಿಜ್ಞಾನ ಪರೀಕ್ಷೆಯೊಂದಿಗೆ ಪರೀಕ್ಷೆ ಕೊನೆಗೊಳ್ಳಲಿದೆ.

Vijaya Karnataka Web 12 Mar 2020, 6:09 pm

ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಬಿಡುಗಡೆ ಮಾಡಿರುವ ವೇಳಾಪಟ್ಟಿಯಂತೆ ನಡೆಸಲಾಗುತ್ತದೆ ಎಂದು ಮಂಡಳಿಯ ನಿರ್ದೇಶಕರು ತಿಳಿಸಿದ್ದಾರೆ.
Vijaya Karnataka Web karnataka sslc exam
karnataka sslc exam


ಸಾಮಾಜಿಕ ಜಾಲತಾಣಗಳಲ್ಲಿ 10ನೇ ತರಗತಿ ಮುಖ್ಯ ಪರೀಕ್ಷೆ ದಿನಾಂಕವನ್ನು ಮುಂದೂಡಲಾಗಿದೆ ಎಂದು ಹರಿದಾಡುತ್ತಿರುವ ಫೇಕ್‌ ನ್ಯೂಸ್‌ಗೆ ಸಂಬಂಧಿಸಿದಂತೆ, ಪ್ರತಿಕ್ರಿಯಿಸಿರುವ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕರಾದ ವಿ.ಸುಮಂಗಲ ರವರು, "ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಈ ಹಿಂದೆಯೇ ಬಿಡುಗಡೆ ಮಾಡಿರುವ ವೇಳಾಪಟ್ಟಿ ಪ್ರಕಾರ ನಡೆಯಲಿದೆ. ಸುಳ್ಳು ಸುದ್ದಿಗಳು ಪರೀಕ್ಷೆ ಮುಂದೂಡಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ಬಗ್ಗೆ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಯಾವುದೇ ರೀತಿ ಗೊಂದಲಗೊಳ್ಳುವುದು ಬೇಡ" ಎಂದು ಹೇಳಿದ್ದಾರೆ.

ಕೊರೊನಾ ವೈರಸ್ ಭಯ ಎಲ್ಲೆಡೆ ಇರುವುದರಿಂದ ಪರೀಕ್ಷೆಯನ್ನು ಮುಂದೂಡಿರುವ ಬಗ್ಗೆ ಸೋಶಿಯಲ್ ಮಿಡಿಯಾ ವೇದಿಕೆಗಳಲ್ಲಿ ಹರಿದಾಡುತ್ತಿದೆ. ಹೀಗಾಗಿ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಮತ್ತು ಶಿಕ್ಷಕರಿಗೆ ಪರೀಕ್ಷೆ ಬಗ್ಗೆ ಗೊಂದಲ ಉಂಟಾಗಿದೆ. ಆದ್ದರಿಂದ ಮಂಡಳಿಗೆ ಸಹ ಫೋನ್ ಕರೆಗಳು ವಿಚಾರಣೆಗಾಗಿ ಬರುತ್ತಿವೆ.

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಈಗಾಗಲೇ ಅಧಿಕೃತವಾಗಿ ಬಿಡುಗಡೆ ಮಾಡಿರುವ ಟೈಮ್‌ ಟೇಬಲ್ ಪ್ರಕಾರ, ಮಾರ್ಚ್‌ 27 ರಿಂದ ಪ್ರಥಮ ಭಾಷೆ ಕನ್ನಡ ಪರೀಕ್ಷೆ ಆರಂಭವಾಗಲಿದೆ. ಏಪ್ರಿಲ್ 9 ರಂದು ಸಮಾಜ ವಿಜ್ಞಾನ ಪರೀಕ್ಷೆಯೊಂದಿಗೆ ಪರೀಕ್ಷೆ ಕೊನೆಗೊಳ್ಳಲಿದೆ.

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹೆಚ್ಚು ಅಂಕಗಳಿಸಲು ಈ 5 ಟಿಪ್ಸ್ ಫಾಲೋ ಮಾಡಿ..

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌