ಆ್ಯಪ್ನಗರ

BCWD ಉಚಿತ ಕೆಎಎಸ್/ಐಎಎಸ್ ತರಬೇತಿ ಪೂರ್ವ ಪರೀಕ್ಷೆ ಪ್ರವೇಶ ಪತ್ರ ಇಲ್ಲಿ ಡೌನ್‌ಲೋಡ್ ಮಾಡಿ

BCWD IAS/KAS Coaching 2019: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಚಿತವಾಗಿ ನೀಡುವ ಐಎಎಸ್/ಕೆಎಎಸ್‌ ಮತ್ತು ಬ್ಯಾಂಕಿಂಗ್ ತರಬೇತಿಗೆ ನಡೆಸುವ ಪೂರ್ವ ಪರೀಕ್ಷೆಯ ಪ್ರವೇಶ ಪತ್ರವನ್ನು ಕೆಇಎ ಬಿಡುಗಡೆ ಮಾಡಿದೆ.

Vijaya Karnataka Web 2 Sep 2019, 5:44 pm
ಕರ್ನಾಟಕ ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ(BCWD) ಐಎಎಸ್/ಕೆಎಎಸ್‌ ಮತ್ತು ಬ್ಯಾಂಕಿಂಗ್ ಪರೀಕ್ಷೆಗಳಿಗಾಗಿ ಪ್ರತಿವರ್ಷ ಆಸಕ್ತ ಅಭ್ಯರ್ಥಿಗಳಿಗೆ ಉಚಿತವಾಗಿ ತರಬೇತಿ ನೀಡುತ್ತಿದೆ. ಈ ತರಬೇತಿಗಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನಡೆಸುವ ಪ್ರವೇಶ ಪರೀಕ್ಷೆಯು ಸೆಪ್ಟೆಂಬರ್ 08, 2019 ರಂದು ನಡೆಯಲಿದ್ದು, ಪರೀಕ್ಷೆಗೆ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ.
Vijaya Karnataka Web bcwd free coaching exam date 2019


ಸ್ಟೇಫಂಡ್ ನೀಡಿ ಉಚಿತ ತರಬೇತಿ ನೀಡುವ ಈ ಈ ಸೌಲಭ್ಯವನ್ನು ಸದುಪಯೋಗ ಪಡೆದುಕೊಳ್ಳಲು ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳು ಪರೀಕ್ಷೆಗೆ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಲು ತಿಳಿಸಲಾಗಿದೆ. ಅಭ್ಯರ್ಥಿಗಳು ಪ್ರವೇಶ ಪತ್ರದಲ್ಲಿ ತಿಳಿಸಿದ ದಿನಾಂಕದಂದು ನಿಗದಿತ ಸ್ಥಳಕ್ಕೆ ಪರೀಕ್ಷೆಗೆ ಹಾಜರಾಗಲು ತಿಳಿಸಲಾಗಿದೆ.

ಪ್ರವೇಶ ಪತ್ರ ಡೌನ್‌ಲೋಡ್ ಮಾಡಲು ಮುಂದಿನ ಲಿಂಕ್ ಕ್ಲಿಕ್ ಮಾಡಿ - http://164.100.133.72/swd2019adm/(S(bsaam5z5kxoxfygzneamb1wz))/frmAT.aspx

ಮೇಲಿನ ಲಿಂಕ್ ಕ್ಲಿಕ್ ಮಾಡಿದ ನಂತರ ತೆರೆದುಕೊಂಡ ಹೊಸ ಪೇಜ್‌ನಲ್ಲಿ ಅಭ್ಯರ್ಥಿಗಳು ತಮ್ಮ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ಟೈಪಿಸಿ 'submit' ಬಟನ್‌ ಮೇಲೆ ಕ್ಲಿಕ್ ಮಾಡಬೇಕು. ಪ್ರವೇಶ ಪತ್ರ ಒಪನ್‌ ಆಗುತ್ತದೆ. ನಂತರ ಡೌನ್‌ಲೋಡ್ ಮಾಡಿ ಪ್ರಿಂಟ್‌ಔಟ್‌ ತೆಗೆದುಕೊಳ್ಳಬಹುದು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌