ಆ್ಯಪ್ನಗರ

SSLC ಪರೀಕ್ಷೆ ಪ್ರಶ್ನೆಪತ್ರಿಕೆಗಳಿಗೆ ಮಾದರಿ ಉತ್ತರ ಪತ್ರಿಕೆಗಳು ಪ್ರಕಟ; ಇಲ್ಲಿ ಚೆಕ್‌ ಮಾಡಿ

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಜೂನ್‌-ಜುಲೈ 2020 ರ ವಾರ್ಷಿಕ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳಿಗೆ ಸಂಬಂಧಿಸಿದಂತೆ, ಮಾದರಿ ಉತ್ತರ ಪತ್ರಿಕೆಗಳನ್ನು ಬಿಡುಗಡೆ ಮಾಡಿದೆ. ಪರೀಕ್ಷೆ ಬರೆದ ....

Vijaya Karnataka Web 3 Jul 2020, 4:48 pm

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಜೂನ್‌-ಜುಲೈ 2020 ರ ವಾರ್ಷಿಕ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳಿಗೆ ಸಂಬಂಧಿಸಿದಂತೆ, ಮಾದರಿ ಉತ್ತರ ಪತ್ರಿಕೆಗಳನ್ನು ಬಿಡುಗಡೆ ಮಾಡಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ಮಾದರಿ ಉತ್ತರ ಪತ್ರಿಕೆಗಳನ್ನು ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಚೆಕ್‌ ಮಾಡಬಹುದು.
Vijaya Karnataka Web sslc exam model answer download here
karnataka sslc exam 2020 model answer


ವಿದ್ಯಾರ್ಥಿಗಳು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಅಧಿಕೃತ ವೆಬ್‌ ವಿಳಾಸ http://kseeb.kar.nic.in/sslc_keyanswer_junejuly-2020.asp ಕ್ಕೆ ಭೇಟಿ ನೀಡಿ, ಈಗಾಗಲೇ ಪರೀಕ್ಷೆ ನಡೆಸಲಾದ ವಿಷಯಗಳಿಗೆ ಸಂಬಂಧಿಸಿದ ಲಿಂಕ್‌ ಮೇಲೆ ಕ್ಲಿಕ್ ಮಾಡಿ ಮಾದರಿ ಉತ್ತರಗಳ ಪಿಡಿಎಫ್‌ ಫೈಲ್‌ ಅನ್ನು ಡೌನ್‌ಲೋಡ್‌ ಮಾಡಿಕೊಳ್ಳಿ. ನಂತರ ಪ್ರಿಂಟ್ ತೆಗೆದುಕೊಂಡು ಉತ್ತರಗಳನ್ನು ರೆಫರ್‌ ಮಾಡಬಹುದು.

ಕೆಎಸ್‌ಇಇಬಿ'ಯು ದ್ವಿತೀಯ ಭಾಷೆ, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ, ಜೆಟಿಎಸ್, ಪರ್ಯಾಯ ವಿಷಯಗಳಿಗೆ ಮಾದರಿ ಉತ್ತರ ಪತ್ರಿಕೆಗಳನ್ನು ಈಗಾಗಲೇ ಬಿಡುಗಡೆ ಮಾಡಿದೆ.
ಪೊಲೀಸ್‌ ಸಬ್‌-ಇನ್ಸ್‌ಪೆಕ್ಟರ್‌ ಹುದ್ದೆಗೆ ಅಂತಿಮ ಆಯ್ಕೆಪಟ್ಟಿ ಪ್ರಕಟ

ಉತ್ತರಗಳಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿರುವ ಮಾದರಿ ಉತ್ತರಗಳಿಗೆ ಆಕ್ಷೇಪಣೆ ಇದ್ದಲ್ಲಿ ವಿದ್ಯಾರ್ಥಿಗಳು ಸಲ್ಲಿಸಬಹುದು. ಆಕ್ಷೇಪಣೆ ಸಲ್ಲಿಸಲು ವೆಬ್‌ಸೈಟ್‌ https://kseeb.karnataka.gov.in/KSEEBOBJECTIONENTRY/ ಗೆ ಭೇಟಿ ನೀಡಿ. ನಂತರ ರಿಜಿಸ್ಟರ್‌ ನಂಬರ್ ಎಂಟರ್‌ ಮಾಡಿ, ವೆಬ್‌ನಲ್ಲಿ ಕೇಳಲಾದ ಮಾಹಿತಿಗಳನ್ನು ನೀಡಿ ಆಕ್ಷೇಪಣೆ ಸಲ್ಲಿಸಬಹುದು.
ಸೆ.15 ರಿಂದ ಇಂಜಿನಿಯರಿಂಗ್ ಕಾಲೇಜುಗಳು ಆರಂಭ: AICTE

ಫಲಿತಾಂಶ ಯಾವಾಗ?

ಆಗಸ್ಟ್‌ ಮೊದಲ ವಾರದಲ್ಲಿ SSLC ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ ಎಂದು ಈಗಾಗಲೇ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌ ತಿಳಿಸಿದ್ದಾರೆ. ಜುಲೈ ಅಂತ್ಯಕ್ಕೆ ದ್ವಿತೀಯ ಪಿಯುಸಿ ರಿಸಲ್ಟ್‌ ಅನ್ನು ಪ್ರಕಟಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌