ಕರ್ನಾಟಕ ರಾಜ್ಯದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಸಲ್ಲಿಸಲು ಕೊನೆ ನಾಲ್ಕು ದಿನಗಳು ಬಾಕಿ ಇವೆ. ಅರ್ಹ ಮತ್ತು ಆಸಕ್ತ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮೇ 15, 2021 ರೊಳಗಾಗಿ ಅರ್ಜಿ ಸಲ್ಲಿಸಿ. ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ / ಅರೆಅಲೆಮಾರಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಹಿಂದೆ ಏಪ್ರಿಲ್ 30 ರವರೆಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಆದರೆ ಕೋವಿಡ್ ಪರಿಣಾಮ ರಾಜ್ಯಾದ್ಯಂತ ಲಾಕ್ಡೌನ್ ಘೋಷಣೆ ಹಿನ್ನೆಲೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅರ್ಜಿ ಸಲ್ಲಿಸುವ ಕೊನೆ ದಿನಾಂಕವನ್ನು ವಿಸ್ತರಿಸಲಾಗಿದೆ.
ಮೆಟ್ರಿಕ್ ನಂತರ ವಿದ್ಯಾರ್ಥಿವೇತನ ಅಪ್ಲಿಕೇಶನ್ ಸಲ್ಲಿಸಲು ಅಗತ್ಯ ದಾಖಲೆಗಳು / ಮಾಹಿತಿಗಳು
- ವಿದ್ಯಾರ್ಥಿಗಳ ಆಧಾರ್ ಸಂಖ್ಯೆ
- ವಿದ್ಯಾರ್ಥಿಗಳ ಎಸ್.ಎ.ಟಿ.ಎಸ್ ಗುರುತಿನ ಸಂಖ್ಯೆ / ಕಾಲೇಜು ನೋಂದಣಿ ಸಂಖ್ಯೆ
- ವಿದ್ಯಾರ್ಥಿ ಮತ್ತು ಪೋಷಕರ ಆಧಾರ್ ಸಂಖ್ಯೆ
- ವಿದ್ಯಾರ್ಥಿ ಮೊಬೈಲ್ ಸಂಖ್ಯೆ
- ವಿದ್ಯಾರ್ಥಿಯ ಹೆಸರಿನಲ್ಲಿರುವ ಆರ್.ಡಿ ಇಂದ ಶುರುವಾಗುವ ಜಾತಿ / ಆದಾಯ / ಆರ್ಥಿಕವಾಗಿ ದುರ್ಬಲ ವಿಭಾಗದ (ಬ್ರಾಹ್ಮಣ ವರ್ಗದ ವಿದ್ಯಾರ್ಥಿಗಳಿಗೆ ಮಾತ್ರ) ಪ್ರಮಾಣ ಪತ್ರಗಳ ಸಂಖ್ಯೆ.
- ಇ-ದೃಢೀಕರಿಸಿದ ದಾಖಲೆಗಳ ಸಂಖ್ಯೆಗಳು
- ದಿವ್ಯಾಂಗ ವಿದ್ಯಾರ್ಥಿಯಾಗಿದ್ದಲ್ಲಿ ಭಾರತ ಸರ್ಕಾರದಿಂದ ನೀಡಿರುವ ಅಂಗವೈಕಲ್ಯ ಕಾರ್ಡ್ ಸಂಖ್ಯೆ
ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡಿಕೊಳ್ಳಲು ಸೂಚಿಸಲಾಗಿದೆ.
ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಪದವಿ, ಇಂಜಿನಿಯರಿಂಗ್, ಐಟಿಐ, ಪಿಯುಸಿ, ಡಿ.ಇಡಿ, ಡಿ.ಫಾರ್ಮಾ, ಪ್ಯಾರಾಮೆಡಿಕಲ್, ನರ್ಸಿಂಗ್ , ಡಿ.ಇಡಿ, ಡಿಪ್ಲೊಮ ಅಧ್ಯಯನ ಮಾಡುತ್ತಿರುವವರು ಅಪ್ಲಿಕೇಶನ್ ಸಲ್ಲಿಸಬಹುದು.
CBSE 10th Result 2021: ಶಾಲೆಗಳು ವಿದ್ಯಾರ್ಥಿಗಳ ಅಂಕ ಅಪ್ಡೇಟ್ ಮಾಡಲು ಪೋರ್ಟಲ್ ಸಕ್ರಿಯ
- ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 15-05-2021
- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ಸೈಟ್ ವಿಳಾಸ : www.ssp.postmatric.karnataka.gov.in
- ಸರ್ಕಾರಿ ಆದೇಶ ಮತ್ತು ಇತರೆ ಹೆಚ್ಚಿನ ಮಾಹಿತಿಗಳಿಗಾಗಿ ವೆಬ್ಸೈಟ್ ವಿಳಾಸ : www.bcwd.karnataka.gov.in
- ಇಲಾಖಾ ಸಹಾಯವಾಣಿ / ದೂರವಾಣಿ ಸಂಖ್ಯೆ : 8050770005 / 8050770004