ಆ್ಯಪ್ನಗರ

ಜ.31 ರೊಳಗಾಗಿ ಹೊಸ ಬಸ್‌ ಪಾಸ್‌ ಪಡೆಯಲು ವಿದ್ಯಾರ್ಥಿಗಳಿಗೆ ಸೂಚನೆ

ಪ್ರಸ್ತುತ ಎಲ್ಲಾ ಶಾಲಾ-ಕಾಲೇಜುಗಳ ವಿವಿಧ ತರಗತಿಗಳು ಪ್ರಾರಂಭವಾಗಿದ್ದು, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಸೇವಾ ಸಿಂಧು ಮೂಲಕ..

Vijaya Karnataka Web 21 Jan 2021, 7:04 pm
ಪ್ರಸ್ತುತ ಎಲ್ಲಾ ಶಾಲಾ-ಕಾಲೇಜುಗಳ ವಿವಿಧ ತರಗತಿಗಳು ಪ್ರಾರಂಭವಾಗಿದ್ದು, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಸೇವಾ ಸಿಂಧು ಮೂಲಕ ಆನ್‌ಲೈನ್‌ ಅಪ್ಲಿಕೇಶನ್‌ ಸಲ್ಲಿಸಿ 2021ರ ಜನವರಿ 31 ರೊಳಗಾಗಿ ಹೊಸ ಬಸ್‌ ಪಾಸ್‌ ಪಡೆಯಬೇಕು ಎಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೂರ್ಮಾರಾವ್ ಎಂ ರವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
Vijaya Karnataka Web ಜ.31 ರೊಳಗಾಗಿ ಹೊಸ ಬಸ್‌ ಪಾಸ್‌ ಪಡೆಯಲು ವಿದ್ಯಾರ್ಥಿಗಳಿಗೆ ಸೂಚನೆ
instruct to get new bus pass


ವಿದ್ಯಾರ್ಥಿಗಳು ಹಳೆಯ ಪಾಸ್ ತೋರಿಸಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ನಲ್ಲಿ ಪ್ರಯಾಣಿಸುವ ಅವಧಿಯು 2021ರ ಜನವರಿ 31 ರಂದು ಮುಕ್ತಾಯಗೊಳ್ಳಲಿದೆ. ಆದ್ದರಿಂದ ಎಲ್ಲಾ ವಿದ್ಯಾರ್ಥಿಗಳು ಮೇಲ್ಕಂಡ ಅವಧಿಯೊಳಗಾಗಿ ಸೇವಾ ಸಿಂಧುವಿನ ಮೂಲಕ ಅರ್ಜಿ ಸಲ್ಲಿಸಿ ಕೂಡಲೇ ನೂತನ ಬಸ್‌ ಪಾಸ್‌ಗಳನ್ನು ಪಡೆದುಕೊಳ್ಳಬೇಕು ಎಂದು ಸೂಚಿಸಿದ್ದಾರೆ.

ಅದೇ ರೀತಿ ವಿದ್ಯಾರ್ಥಿಗಳು ಕಳೆದ ವರ್ಷದ (2019-20ನೇ ಸಾಲಿನ) ಹಳೆಯ ಬಸ್‌ ಪಾಸ್‌, ಪ್ರಸ್ತುತ ವರ್ಷದಲ್ಲಿ ಶಾಲಾ/ಕಾಲೇಜುಗಳಿಗೆ ಶುಲ್ಕ ಪಾವತಿಸಿದ ರಶೀದಿ ತೋರಿಸಿ ಸಂಬಂಧಪಟ್ಟ ಮಾರ್ಗ ಅಥವಾ ಹೊಸ ವಿಳಾಸದಲ್ಲಿರುವ ಶಾಲಾ/ಕಾಲೇಜುಗಳಿಗೆ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಪ್ರಯಾಣಿಸಲು ವಿದ್ಯಾರ್ಥಿಗಳಿಗೆ 2021ರ ಜನವರಿ 31 ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಜೆಇಇ ಅಡ್ವಾನ್ಸ್‌ಡ್‌ 2021: ಪಠ್ಯಕ್ರಮ, ಅಣಕು ಪರೀಕ್ಷೆ ಲಿಂಕ್‌ ಬಿಡುಗಡೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌