ಆ್ಯಪ್ನಗರ

ವೈದ್ಯಕೀಯ ಪ್ರವೇಶ: ಶೇ.10 ಮೀಸಲು ಅಭ್ಯರ್ಥಿಗಳ ಅರ್ಜಿ ಸಲ್ಲಿಕೆಗೆ ಇಂದು ಡೆಡ್‌ಲೈನ್‌

ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ ಪ್ರಸಕ್ತ ವರ್ಷದಿಂದ ಜಾರಿಗೆ ಬರುವಂತೆ ವೈದ್ಯಕೀಯ ಸೀಟುಗಳಿಗೆ ಶೇ.10ರಷ್ಟು ಮೀಸಲಾತಿ ನೀಡಲಾಗಿದೆ. ಜಾರಿಗೆ ವೈದ್ಯಕೀಯ ಸೀಟುಗಳನ್ನು ಹೆಚ್ಚಿಸಿ ಶೇ.10 ಮೀಸಲು ಜಾರಿ ಮಾಡಬೇಕು ಎಂದು ಎಲ್ಲ ರಾಜ್ಯಗಳಿಗೂ ಆದೇಶಿಸಲಾಗಿದೆ.

Agencies 11 Jun 2019, 2:47 pm
ಹೊಸದಿಲ್ಲಿ: ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು ಶೇ.10 ಮೀಸಲು ವಿಭಾಗದಡಿ ವೈದ್ಯಕೀಯ ಸೀಟುಗಳಿಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ಈ ಹಿಂದೆ ಇದ್ದ ಜೂನ್‌ 07, 2019 ಕೊನೆಯ ದಿನಾಂಕವನ್ನು ಜೂನ್‌ 11, 2019ಕ್ಕೆ ಮುಂದೂಡಲಾಗಿತ್ತು.
Vijaya Karnataka Web doctor


ಈ ಹಿಂದೆ ಜೂನ್‌ 07, 2019ಕ್ಕೆ ಕೊನೆಯ ದಿನವೆಂದು ನಿಗದಿ ಪಡಿಸಲಾಗಿತ್ತು. ಬಳಿಕ ಆ ಸಂಬಂಧ ಪ್ರಕಟಣೆ ಹೊರಡಿಸಿದ್ದ ಭಾರತೀಯ ವೈದ್ಯಕೀಯ ಆಯೋಗ ಕೊನೆಯ ದಿನಾಂಕವನ್ನು ಜೂನ್‌ 11, 2019ಕ್ಕೆ ಮುಂದೂಡಿತ್ತು.

ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ ಪ್ರಸಕ್ತ ವರ್ಷದಿಂದ ಜಾರಿಗೆ ಬರುವಂತೆ ವೈದ್ಯಕೀಯ ಸೀಟುಗಳಿಗೆ ಶೇ.10ರಷ್ಟು ಮೀಸಲಾತಿ ನೀಡಲಾಗಿದೆ. ಜಾರಿಗೆ ವೈದ್ಯಕೀಯ ಸೀಟುಗಳನ್ನು ಹೆಚ್ಚಿಸಿ ಶೇ.10 ಮೀಸಲು ಜಾರಿ ಮಾಡಬೇಕು ಎಂದು ಎಲ್ಲ ರಾಜ್ಯಗಳಿಗೂ ಆದೇಶಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವಂತೆ ಕೋರಲಾಗಿದೆ.

ನೀಟ್‌ ಪ್ರವೇಶ ಪ್ರಕ್ರಿಯೆಯಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಶೇ.10 ರಷ್ಟು ಮೀಸಲಾತಿ ನೀಡುವ ಬಗ್ಗೆ ಜನವರಿ 2019ರಲ್ಲಿ ತಿದ್ದುಪಡಿ ತರಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌