ಆ್ಯಪ್ನಗರ

PGCET 2020: ಕೆಇಎ ಪಿಜಿ ಕೋರ್ಸ್‌ ಪ್ರವೇಶಾತಿ ಪರೀಕ್ಷೆ ಅರ್ಜಿಗೆ ದಿನಾಂಕ ವಿಸ್ತರಣೆ

2020ನೇ ಸಾಲಿನ ಎಂಬಿಎ, ಎಂಸಿಎ, ಎಂಇ, ಎಂಟೆಕ್, ಎಂ.ಆರ್ಕ್‌ ಕೋರ್ಸ್‌ಗಳ ಪ್ರವೇಶಾತಿಗೆ ಆನ್‌ಲೈನ್‌ ಅರ್ಜಿ...

Vijaya Karnataka Web 6 Jul 2020, 11:19 am

2020ನೇ ಸಾಲಿನ ಎಂಬಿಎ, ಎಂಸಿಎ, ಎಂಇ, ಎಂಟೆಕ್, ಎಂ.ಆರ್ಕ್‌ ಕೋರ್ಸ್‌ಗಳ ಪ್ರವೇಶಾತಿಗೆ ಆನ್‌ಲೈನ್‌ ಅರ್ಜಿ ಸಲ್ಲಿಸುವ ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿಸ್ತರಣೆ ಮಾಡಿದೆ.
Vijaya Karnataka Web kea pgcet 2020 application last date
kea pgcet 2020 application last date


ಇಲ್ಲಿಯವರೆಗೆ ಅರ್ಜಿ ಸಲ್ಲಿಸದ ಅಭ್ಯರ್ಥಿಗಳು ದಿನಾಂಕ 07-07-2020 ರ ಸಂಜೆ 06-30 ರವರೆಗೆ ಆನ್‌ಲೈನ್‌ ಮೂಲಕ ಸಲ್ಲಿಸಲು ಅವಕಾಶ ನೀಡಲಾಗಿದೆ. ಹಾಗೂ ದಿನಾಂಕ 08-07-2020 ರೊಳಗಾಗಿ ಶುಲ್ಕವನ್ನು ಪಾವತಿಸಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿರುವ ಆದರೆ ಇಲ್ಲಿಯವರೆಗೆ ಶುಲ್ಕ ಪಾವತಿಸದೇ ಇರುವ ಅಭ್ಯರ್ಥಿಗಳು ಸಹ ಶುಲ್ಕವನ್ನು ಪಾವತಿಸಬಹುದು.

ರಾಜ್ಯದಲ್ಲಿನ ಕೊರೊನಾ ಹಾವಳಿ ಪರಿಸ್ಥಿತಿಯಿಂದಾಗಿ, ಅಭ್ಯರ್ಥಿಗಳಿಗೆ ಪರೀಕ್ಷೆಗೆ ಹಾಜರಾಗಲು ಅನುಕೂಲ ಆಗಲಿ ಎನ್ನುವ ದೃಷ್ಟಿಯಲ್ಲಿ, ಮೇಲೆ ತಿಳಿಸಿದ ಕೋರ್ಸ್‌ಗಳ ಪ್ರವೇಶಾತಿ ಪರೀಕ್ಷೆಯನ್ನು ಈಗಾಗಲೇ ಪ್ರಕಟಿಸಿರುವ ಕೇಂದ್ರಗಳ ಜೊತೆಯಲ್ಲಿ ಹೆಚ್ಚುವರಿಯಾಗಿ ಆಯ್ದ ಕೇಂದ್ರಗಳಲ್ಲಿ ನಡೆಸಲು ಕ್ರಮವಹಿಸಲಾಗುತ್ತಿದೆ.
ಇಂಜಿನಿಯರ್‌ ವಿದ್ಯಾರ್ಹತೆಯುಳ್ಳವರಿಗೆ ಉದ್ಯೋಗಾವಕಾಶ; ಅಧಿಸೂಚನೆ ಪ್ರಕಟ

ಕೆಇಎ ವೆಬ್‌ನಲ್ಲಿ ಹೊಸದಾಗಿ ಸೇರ್ಪಡೆ ಮಾಡಿದ ಸ್ಥಳಗಳನ್ನು ಪರಿಶೀಲಿಸಿದ ನಂತರ ಅಗತ್ಯವಿದ್ದಲ್ಲಿ ಅಭ್ಯರ್ಥಿಗಳು ಈ ಮೊದಲೇ ನೀಡಿದ್ದ ಪರೀಕ್ಷಾ ಕೇಂದ್ರವನ್ನು ಈ ಮೇಲಿನ ವೇಳಾಪಟ್ಟಿಯಂತೆ ಬದಲಾಯಿಸಿಕೊಳ್ಳಲು ಮತ್ತು ಈಗಾಗಲೇ ಸಲ್ಲಿಸಿರುವ ಅರ್ಜಿಯಲ್ಲಿನ ವಿವರಗಳನ್ನು ಅರ್ಹತೆಯ ಆಧಾರದಲ್ಲಿ ತಿದ್ದುಪಡಿ ಮಾಡಿಕೊಳ್ಳಲೂ ಸಹ ಅವಕಾಶ ಕಲ್ಪಿಸಿದೆ.
ಕರ್ನಾಟಕ ರಾಜ್ಯ ಪಿಎಸ್‌ಐ, ಕಾನ್ಸ್‌ಟೇಬಲ್‌ ಹುದ್ದೆಗಳ ಆಕಾಂಕ್ಷಿಗಳಿಗೆ ಇಲ್ಲಿದೆ ಗುಡ್‌ ನ್ಯೂಸ್‌

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌