ಆ್ಯಪ್ನಗರ

BWSSB ಇಂದ ವಿವಿಧ ಹುದ್ದೆಗಳಿಗೆ ತಾತ್ಕಾಲಿಕ ಮತ್ತು ಹೆಚ್ಚುವರಿ ಆಯ್ಕೆಪಟ್ಟಿ ಪ್ರಕಟ

ಬೆಂಗಳೂರು ವಾಟರ್ ಸಪ್ಲೈ ಮತ್ತು ಸಾವರೇಜ್‌ ಬೋರ್ಡ್‌ 2018ನೇ ಸಾಲಿನ ವಿವಿಧ ಹುದ್ದೆಗಳಿಗೆ ತಾತ್ಕಲಿಕ ಮತ್ತು ಹೆಚ್ಚುವರಿ ಆಯ್ಕೆಪಟ್ಟಿ ಪ್ರಕಟಿಸಿದೆ.

Vijaya Karnataka Web 22 Feb 2020, 3:28 pm
ಬೆಂಗಳೂರು ಜಲಮಂಡಳಿಯು 2018 ರಲ್ಲಿ ಸಿವಿಲ್, ಕಂಪ್ಯೂಟರ್ ಸೈನ್ಸ್‌, ಎಲೆಕ್ಟ್ರಿಕಲ್, ಮೆಕ್ಯಾನಿಕಲ್ ವಿಭಾಗಗಳಲ್ಲಿ ಅಗತ್ಯ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ, ಜೂನಿಯರ್ ಅಸಿಸ್ಟಂಟ್, ಮೀಟರ್ ರೀಡರ್, ಲ್ಯಾಬ್ ಅಸಿಸ್ಟಂಟ್, ಆಪರೇಟರ್, ಟೈಪಿಸ್ಟ್‌ ಕಮ್ ಡಿಇಓ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿತ್ತು. ಈ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿ ಪ್ರಕ್ರಿಯೆ ನಡೆಸಿತ್ತು. ಪ್ರಸ್ತುತ ಕರ್ನಾಟಕ ಸ್ಥಳೀಯ ವೃಂದ ಮತ್ತು ಹೈದೆರಾಬಾದ್ ಕರ್ನಾಟಕ ವೃಂದದ ಹುದ್ದೆಗಳಿಗೆ ಮೀಸಲಾತಿ ಅನ್ವಯ ತಾತ್ಕಾಲಿಕ ಮುಖ್ಯ ಆಯ್ಕೆಪಟ್ಟಿ ಮತ್ತು ಹೆಚ್ಚುವರಿ ಆಯ್ಕೆಪಟ್ಟಿ ಪ್ರಕಟಿಸಲಾಗಿದೆ.
Vijaya Karnataka Web BWSSB ಇಂದ ವಿವಿಧ ಹುದ್ದೆಗಳಿಗೆ ತಾತ್ಕಾಲಿಕ ಮತ್ತು ಹೆಚ್ಚುವರಿ ಆಯ್ಕೆಪಟ್ಟಿ ಪ್ರಕಟ


ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಸ್ಪರ್ಧಾತ್ಮಕ ಪರೀಕ್ಷೆ ಬರೆದ ಅಭ್ಯರ್ಥಿಗಳು ಸೆಲೆಕ್ಷನ್‌ ಲಿಸ್ಟ್‌ ಅನ್ನು ಮಂಡಳಿಯ ಅಫೀಶಿಯಲ್ ವೆಬ್‌ಸೈಟ್‌ಗೆ ಭೇಟಿ ನೀಡಿ ಚೆಕ್‌ ಮಾಡಬಹುದು. ಪ್ರತಿ ಹುದ್ದೆಗಳಿಗೆ ಪ್ರತ್ಯೇಕ ಪಿಡಿಎಫ್‌ ಫೈಲ್‌ನಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದೆ. ರಿಜಿಸ್ಟರ್ ನಂಬರ್, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳು, ಅಭ್ಯರ್ಥಿಗಳ ಹೆಸರುಗಳನ್ನು ನೀಡಲಾಗಿದೆ.

ಅಭ್ಯರ್ಥಿಗಳು ಸೆಲೆಕ್ಷನ್‌ ಲಿಸ್ಟ್‌ ಚೆಕ್‌ ಮಾಡಲು ಬಿಡಬ್ಲ್ಯೂಎಸ್‌ಎಸ್‌ಬಿ ವೆಬ್‌ಗೆ ಭೇಟಿ ನೀಡಿ ಅಥವಾ ಈ ಕೆಳಗಿನ ಡೈರೆಕ್ಟ್‌ ಲಿಂಕ್‌ ಕ್ಲಿಕ್ ಮಾಡಿ.

Provisional Main Selection List and Additional List 2018 Recruitment

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌