ಆ್ಯಪ್ನಗರ

ಕರ್ನಾಟಕ ಅರಣ್ಯ ರಕ್ಷಕ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Karnataka Forest Guard Selection list : ಕರ್ನಾಟಕ ಫಾರೆಸ್ಟ್‌ ಡಿಪಾರ್ಟ್‌ಮೆಂಟ್ ಅರಣ್ಯ ರಕ್ಷಕ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದೆ. ಈ ಬಗ್ಗೆ ಕಂಪ್ಲೀಟ್ ಡೀಟೇಲ್ಸ್ ಈ ಕೆಳಗಿನಂತಿದೆ.

Vijaya Karnataka Web 30 Oct 2019, 11:58 am

ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ ಮಂಡಳಿಯು 240 ಅರಣ್ಯ ರಕ್ಷಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ತಾತ್ಕಾಲಿಕ ಅಯ್ಕೆ ಪಟ್ಟಿ ಪ್ರಕಟಿಸಿದೆ. ಜೊತೆಗೆ ಆಯ್ಕೆ ಪ್ರಕ್ರಿಯೆಯಿಂದ ಕೈಬಿಡಲಾದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ.
Vijaya Karnataka Web Karnataka Forest Guard Selection list 2019


240 ಅರಣ್ಯ ರಕ್ಷಕ ಹುದ್ದೆಗಳಿಗೆ ನೇರ ನೇಮಕಾತಿ 2018-19 ರ ಅಧಿಸೂಚನೆಗೆ ಸಂಬಂಧಿಸಿದ ತಾತ್ಕಾಲಿಕ ಆಯ್ಕೆ ಪಟ್ಟಿ ಇದಾಗಿದೆ. ಈ ಒಟ್ಟು ಹುದ್ದೆಗಳ ಪೈಕಿ 121 ಅಭ್ಯರ್ಥಿಗಳ ಅಂತಿಮ ಕಾಯುವಿಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಅಭ್ಯರ್ಥಿಗಳಿಗೆ ಮೂಲ ದಾಖಲೆಗಳ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆಯನ್ನು ನಡೆಸಲಾಗಿರುತ್ತದೆ.

2020 ಗೇಟ್ ಪರೀಕ್ಷೆಯಲ್ಲಿ 10 ರ‍್ಯಾಂಕ್‌ ಒಳಗೆ ಪಾಸ್ ಆಗಬೇಕೆ? ಈ ಅಂಶಗಳು ನೆನಪಿರಲಿ..

ಪ್ರಸ್ತುತ ಕಾಯುವಿಕೆ ಪಟ್ಟಿಯಿಂದ ಭರ್ತಿ ಮಾಡಲು ಬಾಕಿ ಇರುವ ಹುದ್ದೆಗಳ ವಿವರ ಈ ಕೆಳಗಿನಂತಿದೆ.

ಹುದ್ದೆ ಹೆಸರು: ಅರಣ್ಯ ರಕ್ಷಕ

ಒಟ್ಟು ಹುದ್ದೆಗಳ ಪೈಕಿ ತುಂಬಲು ಬಾಕಿ ಉಳಿದ ಸಂಖ್ಯೆ: 69

ಕಾಯುವಿಕೆ ಪಟ್ಟಿಯಿಂದ ಆಯ್ಕೆ ಮಾಡಿರುವ ಅಭ್ಯರ್ಥಿಗಳ ಪಟ್ಟಿ : 57

121 ಕಾಯುವಿಕೆ ಪಟ್ಟಿಯಲ್ಲಿನ ಅಭ್ಯರ್ಥಿಗಳಿಗೆ ಮೂಲ ದಾಖಲೆಗಳ ಪರಿಶೀಲನೆ, ಮೆಡಿಕಲ್ ಪರೀಕ್ಷೆಗಳನ್ನು ನಡೆಸಲಾಗಿದ್ದು, ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ.

ಮೂಲ ದಾಖಲೆಗಳ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆಗೆ ಗೈರು ಹಾಜರಾದ ಹಾಗೂ ವೈದ್ಯಕೀಯ ಪರೀಕ್ಷೆಯಲ್ಲಿ ಅನರ್ಹರಾದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ಇವರನ್ನು ಆಯ್ಕೆ ಪ್ರಕ್ರಿಯೆಯಿಂದ ಕೈಬಿಡಲಾಗಿದೆ.

UGC NET ಮೊದಲ ಪ್ರಯತ್ನದಲ್ಲೇ ಪಾಸ್ ಮಾಡಬಹುದೇ? ಕೊನೆಯ 2 ತಿಂಗಳ ತಯಾರಿ ಹೇಗಿರಬೇಕು?

ಪ್ರಸ್ತುತ ಪ್ರಕಟಣೆ ಜೊತೆಗೆ ನೀಡಲಾಗಿರುವ 1:1 ತಾತ್ಕಾಲಿಕ ಅರಣ್ಯ ರಕ್ಷಕ ಹುದ್ದೆಗಳ ಆಯ್ಕೆ ಪಟ್ಟಿಗೆ ಯಾವುದೇ ಆಕ್ಷೇಪಣೆಗಳು ಇದ್ದಲ್ಲಿ, ಒಂದು ವಾರದೊಳಗೆ ಸಲ್ಲಿಸಲು ತಿಳಿಸಲಾಗಿದೆ. ಈ ಪ್ರಕಟಣೆಯನ್ನು ದಿನಾಂಕ 25-10-2019 ರಂದು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ಕಛೇರಿ ಇ-ಮೇಲ್ ವಿಳಾಸ : pccfrecruitment@gmail.com ಗೆ ಸೂಕ್ತ ದಾಖಲೆಗಳೊಂದಿಗೆ ಆಕ್ಷೇಪಣೆ ಸಲ್ಲಿಸಬಹುದಾಗಿದೆ. ಆಕ್ಷೇಪಣೆ ಅವಧಿ ಪೂರ್ಣಗೊಂಡ ನಂತರ ಸಲ್ಲಿಸಲಾಗುವ ಯಾವುದೇ ದಾಖಲೆಗಳನ್ನು ಪರಿಗಣಿಸಲಾಗುವುದಿಲ್ಲ.

240 ಅರಣ್ಯ ರಕ್ಷಕ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಗಾಗಿ ಕ್ಲಿಕ್ ಮಾಡಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌