ಆ್ಯಪ್ನಗರ

SSLC, PUC ಫಲಿತಾಂಶ ಬಿಡುಗಡೆ ಯಾವಾಗ?

ಜುಲೈ ಅಂತ್ಯಕ್ಕೆ ದ್ವಿತೀಯ ಪಿಯುಸಿ ಮತ್ತು ಆಗಸ್ಟ್‌ ಮೊದಲ ವಾರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ..

Vijaya Karnataka Web 30 Jun 2020, 9:42 am

ಜುಲೈ ಅಂತ್ಯಕ್ಕೆ ದ್ವಿತೀಯ ಪಿಯುಸಿ ಮತ್ತು ಆಗಸ್ಟ್‌ ಮೊದಲ ವಾರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌ ತಿಳಿಸಿದರು.
Vijaya Karnataka Web karnataka sslc puc result 2020 date
karnataka sslc puc result 2020 date


ಸೋಮವಾರ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಹಲವೆಡೆ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ ಬಳಿಕ ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಸೂತ್ರವಾಗಿ ನಡೆಯುತ್ತಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಮಕ್ಕಳ ಗೈರುಹಾಜರಿಯಲ್ಲಿ ಅಷ್ಟೊಂದು ವ್ಯತ್ಯಾಸ ಆಗಿಲ್ಲ. ಮಕ್ಕಳಿಗೆ ಪರೀಕ್ಷಾ ಕೇಂದ್ರಗಳು ಸುರಕ್ಷಿತ ಕೇಂದ್ರಗಳಾಗಿವೆ. ಮಕ್ಕಳು ಉತ್ಸಾಹದಿಂದ ಪರೀಕ್ಷೆ ಬರೆಯುತ್ತಿದ್ದಾರೆ,'' ಎಂದರು.

''ಎಲ್‌ಕೆಜಿ ಹಾಗೂ ಯುಕೆಜಿಗೆ ಆನ್‌ಲೈನ್‌ ಶಿಕ್ಷಣ ಜಾರಿ ಇಲ್ಲ. ಆದರೆ ಒಂದರಿಂದ ಆರು, ಏಳರಿಂದ ಹತ್ತನೇ ತರಗತಿವರೆಗೆ ತಂತ್ರಜ್ಞಾನ ಬಳಸಿ ಮಕ್ಕಳಿಗೆ ಯಾವ ರೀತಿ ಪಠ್ಯ ಬೋಧನೆ ಮಾಡಬೇಕು ಎಂಬುದನ್ನು ತಜ್ಞರ ಸಮಿತಿ ನೀಡುವ ವರದಿ ಆಧರಿಸಿ ಸರಕಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು,'' ಎಂದರು.

CBSE ಫಲಿತಾಂಶ ಪ್ರಕಟಣೆ ದಿನಾಂಕವು ನಿಗದಿ

ಕೇಂದ್ರ ಪ್ರೌಢಶಿಕ್ಷಣ ಮಂಡಳಿಯು ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಜುಲೈ 15 ರ ಒಳಗಾಗಿ ಬಿಡುಗಡೆ ಮಾಡಲಾಗುತ್ತದೆ ಎಂದು ಸುಪ್ರೀಂ ಸೂಚನೆಗೆ ಒಪ್ಪಿದೆ.
ಗ್ರಾಮೀಣ ವಿದ್ಯಾರ್ಥಿಗಳು ತಂತ್ರಜ್ಞಾನದಿಂದ ವಂಚಿತರಾಗದಂತೆ ನಿರ್ಧಾರ; ಸಚಿವ ಎಸ್‌ ಸುರೇಶ್‌ಕುಮಾರ್

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌