ಆ್ಯಪ್ನಗರ

ಕರ್ನಾಟಕ SSLC ಫಲಿತಾಂಶ ಆಗಸ್ಟ್‌ 10 ರಂದು ಪ್ರಕಟ: ಸಚಿವ ಸುರೇಶ್‌ಕುಮಾರ್

ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ತಮ್ಮ ಫಲಿತಾಂಶಕ್ಕಾಗಿ ಕಾತುರದಿಂದ ಕಾಯುತ್ತಿದ್ದಾರೆ.

Vijaya Karnataka Web 7 Aug 2020, 3:06 pm
ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ತಮ್ಮ ಫಲಿತಾಂಶಕ್ಕಾಗಿ ಕಾತುರದಿಂದ ಕಾಯುತ್ತಿದ್ದಾರೆ. ಇನ್ನೂ ಫಲಿತಾಂಶ ದಿನಾಂಕ ಯಾವಾಗ ಎಂಬ ಪ್ರಶ್ನೆಗೆ ಶಿಕ್ಷಣ ಸಚಿವ ಎಸ್‌ ಸುರೇಶ್‌ ಕುಮಾರ್‌ ರವರು ಪ್ರತಿಕ್ರಿಯಿಸಿದ್ದು, ಫಲಿತಾಂಶ ಬಿಡುಗಡೆಯ ಅಧಿಕೃತ ದಿನಾಂಕವನ್ನು ತಿಳಿಸಿದ್ದಾರೆ.
Vijaya Karnataka Web karnataka sslc result 2020 date and time
karnataka sslc result 2020 date and time


ಆಗಸ್ಟ್‌ 10 ರಂದು ಮಧ್ಯಾಹ್ನ 03-00 ಗಂಟೆಗೆ ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಅವರು ಇಂದು ಮಾಹಿತಿ ನೀಡಿದ್ದಾರೆ.

ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯು ಫಲಿತಾಂಶ ಪ್ರಕಟಿಸಿದ ನಂತರ, ವಿದ್ಯಾರ್ಥಿಗಳು ತಮ್ಮ ರಿಸಲ್ಟ್ ಅನ್ನು ಅಧಿಕೃತ ವೆಬ್‌ಸೈಟ್ karresults.nic.in ಗೆ ಭೇಟಿ ನೀಡಿ ಚೆಕ್‌ ಮಾಡಬಹುದು.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಚೆಕ್‌ ಮಾಡುವುದು ಹೇಗೆ?

- ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಅಧಿಕೃತ ವೆಬ್‌ಸೈಟ್‌ http://kseeb.kar.nic.in/ ಗೆ ಅಥವಾ karresults.nic.in ಗೆ ಭೇಟಿ ನೀಡಿ.

- ಓಪನ್‌ ಆದ ಪೇಜ್‌ನಲ್ಲಿ ವಿದ್ಯಾರ್ಥಿಗಳು ತಮ್ಮ ಎಸ್‌ಎಸ್‌ಎಲ್‌ಸಿ ರಿಜಿಸ್ಟ್ರೇಷನ್‌ ನಂಬರ್ ಮತ್ತು ಜನ್ಮ ದಿನಾಂಕ ಮಾಹಿತಿ ನೀಡಿರಿ.

- ನಂತರ 'Submit' ಎಂಬಲ್ಲಿ ಕ್ಲಿಕ್ ಮಾಡಿರಿ.

- ಫಲಿತಾಂಶ ಪೇಜ್‌ ಓಪನ್‌ ಆಗುತ್ತದೆ. ಡೌನ್‌ಲೋಡ್‌ ಮಾಡಿ ಮುಂದಿನ ರೆಫರೆನ್ಸ್‌ಗಾಗಿ ಪ್ರಿಂಟ್‌ ತೆಗೆದುಕೊಳ್ಳಿ.

ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಸಾಮಾನ್ಯವಾಗಿ ಪ್ರತಿ ವರ್ಷ ಏಪ್ರಿಲ್ ಅಂತ್ಯದೊಳಗೆ ಎಸ್‌ಎಸ್‌ಎಲ್‌ಸಿ ರಿಸಲ್ಟ್‌ ಪ್ರಕಟಿಸುತ್ತಿತ್ತು. ಆದರೆ ಈ ಬಾರಿ ಕೋವಿಡ್‌-19 ಕಾರಣದಿಂದ ಪರೀಕ್ಷಾ ಚಟುವಟಿಕೆಗಳು ಮುಂದೂಡಲಾಗಿ, ಪರೀಕ್ಷೆ ಫಲಿತಾಂಶ ಲೇಟ್‌ ಆಗಿ ಪ್ರಕಟಿಸಲಾಗುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌