ಆ್ಯಪ್ನಗರ

KPSC: ಫಿಟ್ಟರ್ ಹುದ್ದೆಗಳಿಗೆ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆಗೆ ಆಹ್ವಾನ

KPSC Result: ಕರ್ನಾಟಕ ಪಬ್ಲಿಕ್ ಸರ್ವಿಸ್ ಕಮಿಷನ್ ಕಿರಿಯ ತರಬೇತಿ ಅಧಿಕಾರಿ ಹುದ್ದೆಗಳ ಮೂಲ ದಾಖಲೆಗಳ ಪರಿಶೀಲನೆಗೆ ಸಂಬಂಧಿಸಿದಂತೆ ಪ್ರೆಸ್ ನೋಟ್ ಪ್ರಕಟಿಸಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಕೆಳಗಿನಂತಿದೆ.

Vijaya Karnataka Web 23 Oct 2019, 11:56 am

ಕರ್ನಾಟಕ ಲೋಕಸೇವಾ ಆಯೋಗವು ಫಿಟ್ಟರ್ ವೃತ್ತಿಯ ಕಿರಿಯ ತರಬೇತಿ ಅಧಿಕಾರಿ ಹುದ್ದೆಗಳ ಮೂಲ ದಾಖಲೆಗಳ ಪರಿಶೀಲನೆಗೆ ಅಭ್ಯರ್ಥಿಗಳನ್ನು ಆಹ್ವಾನಿಸಿರುವ ಬಗ್ಗೆ ಪ್ರಕಟಣೆ ಹೊರಡಿಸಿದೆ.
Vijaya Karnataka Web department of employment training karnataka  kpsc result 2019


ಕೆಪಿಎಸ್‌ಸಿಯು ಅಧಿಸೂಚನೆ ಸಂಖ್ಯೆ R()23567/2017-18/PSC, ದಿನಾಂಕ 19-02-2018 ಮತ್ತು ತಿದ್ದುಪಡಿ ಅಧಿಸೂಚನೆ ಸಂಖ್ಯೆ R(2)1762/2019-20/PSC ದಿನಾಂಕ 25-09-2019 ರ ಅಧಿಸೂಚನೆಯಲ್ಲಿ ಸೂಚಿಸಿದ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದಲ್ಲಿನ ಫಿಟ್ಟರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ಪ್ರಕ್ರಿಯೆ ಇದಾಗಿದೆ.

2021 ರಿಂದ ಜಾರಿ: ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದರೆ ಸರ್ಕಾರಿ ಕೆಲಸವಿಲ್ಲ

ಫಿಟ್ಟರ್ ವೃತ್ತಿಯ ಕಿರಿಯ ತರಬೇತಿ ಅಧಿಕಾರಿ 289+59(ಹೈದೆರಾಬಾದ್ ಕರ್ನಾಟಕ) ಹುದ್ದೆಗಳ ಮೂಲ ದಾಖಲೆಗಳ ಪರಿಶೀಲನಾ ಕಾರ್ಯವನ್ನು, ಆಯೋಗವು ದಿನಾಂಕ 04-11-2019 ರಿಂದ 08-11-2019 ವರೆಗೆ ನಡೆಸಲು ನಿಶ್ಚಯಿಸಿದೆ. ಅಭ್ಯರ್ಥಿಗಳಿಗೆ ಈ ಬಗ್ಗೆ ಸೂಚನಾ ಪತ್ರಗಳನ್ನು ಸ್ಪೀಡ್‌ ಪೋಸ್ಟ್‌ ಮೂಲಕ ಸಂಬಂಧಿಸಿದ ಅಭ್ಯರ್ಥಿಗಳ ವಿಳಾಸಕ್ಕೆ ಕಳುಹಿಸಲಾಗಿದೆ.

ಕರ್ನಾಟಕ ಹೈಕೋರ್ಟ್‌ನಿಂದ ಉದ್ಯೋಗಾವಕಾಶ ಅಧಿಸೂಚನೆ ಪ್ರಕಟ: ಅರ್ಜಿ ಆಹ್ವಾನ

ದಿನಾಂಕವಾರು ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆಗೆ ಪಟ್ಟಿಯನ್ನು ಕೆಪಿಎಸ್‌ಸಿಯ ಅಧಿಕೃತ ವೆಬ್‌ಸೈಟ್‌ kpsc.kar.nic.in ನಲ್ಲಿ ಪ್ರಕಟಿಸಲಾಗಿದ್ದು, ನಿಗದಿತ ದಿನಾಂಕದಂದು ಆಯೋಗದ ಕೇಂದ್ರ ಕಛೇರಿ ಬೆಂಗಳೂರಿಗೆ ಹಾಜರಾಗಲು ತಿಳಿಸಲಾಗಿದೆ.

ಕೆಪಿಎಸ್‌ಸಿ ಪ್ರಕಟಣೆಗಾಗಿ ಕ್ಲಿಕ್ ಮಾಡಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌