ಆ್ಯಪ್ನಗರ

ಒಂದೇ ದಿನ 2,264 ಕ್ಕೂ ಅಧಿಕ ನಾಮಪತ್ರ ಸಲ್ಲಿಕೆ

ಸೋಮವಾರ ಒಂದೇ ದಿನ 2,264 ನಾಮಪತ್ರಗಳು ಸಲ್ಲಿಕೆಯಾಗಿದೆ ಸಿಎಂ ಸಿದ್ದರಾಮಯ್ಯ, ಸಚಿವ ಸಂಪುಟದ ಸದಸ್ಯರು, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್‌...

Vijaya Karnataka 24 Apr 2018, 8:07 am
ಬೆಂಗಳೂರು: ಸೋಮವಾರ ಒಂದೇ ದಿನ 2,264 ನಾಮಪತ್ರಗಳು ಸಲ್ಲಿಕೆಯಾಗಿದೆ. ಸಿಎಂ ಸಿದ್ದರಾಮಯ್ಯ, ಸಚಿವ ಸಂಪುಟದ ಸದಸ್ಯರು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಸೇರಿದಂತೆ ಘಟಾನುಘಟಿ ಹುರಿಯಾಳುಗಳು ಈಗಾಗಲೇ ನಾಮಪತ್ರ ಸಲ್ಲಿಸಿದ್ದಾರೆ.
Vijaya Karnataka Web bjp


ನಾಮಪತ್ರ ಸಲ್ಲಿಕೆಗೆ ಒಂದು ದಿನ ಬಾಕಿ ಇರುವುದರಿಂದ ಸೋಮವಾರ ಈ ಪ್ರಕ್ರಿಯೆ ಭರಾಟೆಯಿಂದ ನಡೆಯಿತು. ಈಗಾಗಲೇ ನಾಮಪತ್ರ ಹಾಕಿದ ಕೆಲವು ಪ್ರಮುಖರು ಮತ್ತೊಂದು ಅಫಿಡವಿಟ್‌ ಸಲ್ಲಿಸಿದರು.

ಪರಂ, ಶೆಟ್ಟರ್‌ ನಾಮಪತ್ರ

ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ (ಕೊರಟಗೆರೆ), ಪ್ರತಿಪಕ್ಷದ ನಾಯಕ ಜಗದೀಶ ಶೆಟ್ಟರ್‌ (ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌), ಗ್ರಾಮೀಣಾಭಿವೃದ್ಧಿ ಸಚಿವ ಎಚ್‌.ಕೆ. ಪಾಟೀಲ್‌ (ಗದಗ), ಮಾಜಿ ಸಚಿವರಾದ ಸಿ.ಎಂ. ಉದಾಸಿ (ಹಾನಗಲ್‌), ಬಸವರಾಜ ಬೊಮ್ಮಾಯಿ (ಶಿಗ್ಗಾಂವ್‌) ಸೇರಿದಂತೆ ಪ್ರಮುಖರು ಸೋಮವಾರ ನಾಮಪತ್ರ ಸಲ್ಲಿಸಿದರು.ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಲಿರುವ ಸಿಎಂ ಸಿದ್ದರಾಮಯ್ಯ ಮಂಗಳವಾರ ನಾಮಪತ್ರ ಸಲ್ಲಿಸಲಿದ್ದಾರೆ. ಬಿಜೆಪಿಯ ಅಭ್ಯರ್ಥಿ ಘೋಷಣೆ ಬಾಕಿಯಿದೆ. ಸಂಸದ ಶ್ರೀರಾಮುಲು ಕಣಕ್ಕಿಳಿಯುವುದು ಬಹುತೇಕ ಖಚಿತವೆನ್ನಲಾಗುತ್ತಿದ್ದು ಅವರು ನಾಮಪತ್ರ ಸಲ್ಲಿಸುವ ಸಾಧ್ಯತೆಯಿದೆ.

ಏಪ್ರಿಲ್‌ 25 ರಂದು ನಾಮಪತ್ರ ಪರಿಶೀಲನೆ

ನಾಮಪತ್ರ ಪರಿಶೀಲನೆ ಕಾರ್ಯ ಏಪ್ರಿಲ್‌ 25 ರಂದು ನಡೆಯಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್‌ 27 ಕಡೆಯ ದಿನವಾಗಿದೆ. ಆ ಬಳಿಕ ಕಣದಲ್ಲುಳಿದ ಅಭ್ಯರ್ಥಿಗಳ ಸಂಖ್ಯೆ ಸ್ಪಷ್ಟವಾಗಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ