ಆ್ಯಪ್ನಗರ

ತಿಣುಕಾಡಿ ಗೆದ್ದಿರುವ ಎಚ್‌.ಕೆ.ಪಾಟೀಲರದ್ದು ಗೆಲುವೇ ಅಲ್ಲ: ಶೆಟ್ಟರ್ ವ್ಯಂಗ್ಯ

ಚುನಾವಣೆಯಲ್ಲಿ ತಿಣುಕಾಡಿ ಗೆದ್ದಿರುವ ಕಾಂಗ್ರೆಸ್ ಅಭ್ಯರ್ಥಿ ಎಚ್‌.ಕೆ.ಪಾಟೀಲ್ ಅವರದ್ದು ಗೆಲುವೇ ಅಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದ್ದಾರೆ.

Vijaya Karnataka Web 22 May 2018, 3:24 pm
ಹುಬ್ಬಳ್ಳಿ: ಚುನಾವಣೆಯಲ್ಲಿ ತಿಣುಕಾಡಿ ಗೆದ್ದಿರುವ ಕಾಂಗ್ರೆಸ್ ಅಭ್ಯರ್ಥಿ ಎಚ್‌.ಕೆ.ಪಾಟೀಲ್ ಅವರದ್ದು ಗೆಲುವೇ ಅಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದ್ದಾರೆ.
Vijaya Karnataka Web shettar


ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗದಗ ಜಿಲ್ಲೆಯ 17 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 12ರಲ್ಲಿ ಗೆಲುವು ಸಾಧಿಸಿದೆ. ಉತ್ತರ ಕರ್ನಾಟಕದ ಅನೇಕ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಅತೀ ಕಡಿಮೆ ಅಂತರದಲ್ಲಿ ಸೋತಿದ್ದಾರೆ ಎಂದು ಹೇಳಿದರು.

ರಾಜ್ಯದ ಜನರು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷವನ್ನು ತಿರಸ್ಕರಿಸಿದ್ದು, ನೆಲಕ್ಕೆ ಬಿದ್ದರೂ ಮೀಸೆ ಮಣ್ಣಾಗಿಲ್ಲಾ ಎನ್ನುವ ಹಾಗೆ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರು ವರ್ತಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಚುನಾವಣೆಯಲ್ಲಿ ಹೀನಾಯ ಸೋಲುಂಡು ಮಂಡಿಯೂರಿರುವ ಕಾಂಗ್ರೆಸ್, ಹಂತ ಹಂತವಾಗಿ ಅಸ್ತಿತ್ವ ಕಳೆದುಕೊಳ್ಳುವ ಬದಲು ಜೆಡಿಎಸ್ ಪಕ್ಷದ ಜತೆ ವಿಲೀನ ಆಗಬೇಕು. ಆಗಷ್ಟೇ, ರಾಜ್ಯದಲ್ಲಿ ಕಾಂಗ್ರೆಸ್ ಉಳಿಯಲು ಸಾಧ್ಯ ಎಂದು ವ್ಯಂಗ್ಯವಾಡಿದರು.

ಉಲ್ಟಾ ಹೊಡೆದ ಕುಮಾರಸ್ವಾಮಿ:
ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ ಮಾಡುತ್ತೇನೆ ಎಂದು ಭರವಸೆ ನೀಡಿದ್ದ ನಿಯೋಚಿತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಈಗ ಉಲ್ಟಾ ಹೊಡೆದಿದ್ದಾರೆ. ಈ ಸರಕಾರ ಬಹಳ ದಿನ ಉಳಿಯಲು ಸಾಧ್ಯವಿಲ್ಲ ಎಂದು ಜಗದೀಶ್ ಶೆಟ್ಟರ್ ಶಪಿಸಿದರು.

ವಿಜಯಪುರ ಜಿಲ್ಲೆಯಲ್ಲಿ ಸಿಕ್ಕ ವಿವಿಪ್ಯಾಟ್‌ ಬಗ್ಗೆ ಕೂಲಂಕುಷವಾಗಿ ವಿಚಾರಣೆಯಾಗಬೇಕಿದ್ದು, ಈ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌