ಆ್ಯಪ್ನಗರ

ರೆಡ್ಡಿ ಸಹೋದರರ ಮೇಲೆ ಇತ್ಯರ್ಥವಾಗದ ಪ್ರಕರಣಗಳಿಲ್ಲ: ಅಮಿತ್‌ ಶಾ

ಜನಾರ್ದನ ರೆಡ್ಡಿ ಸಹೋದರರ ಮೇಲೆ ನ್ಯಾಯಾಲಯದಲ್ಲಿ ಯಾವುದೇ ಬಾಕಿ ಪ್ರಕರಣಗಳಿಲ್ಲ. ಹೀಗಾಗಿಯೇ ಅವರಿಗೆ ಟಿಕೆಟ್‌ ನಿರಾಕರಿಸಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಸಮರ್ಥಿಸಿಕೊಂಡಿದ್ದಾರೆ.

TIMESOFINDIA.COM 5 May 2018, 6:12 pm
ಬೆಂಗಳೂರು: ಜನಾರ್ದನ ರೆಡ್ಡಿ ಸಹೋದರರ ಮೇಲೆ ನ್ಯಾಯಾಲಯದಲ್ಲಿ ಯಾವುದೇ ಬಾಕಿ ಪ್ರಕರಣಗಳಿಲ್ಲ. ಹೀಗಾಗಿಯೇ ಅವರಿಗೆ ಟಿಕೆಟ್‌ ನಿರಾಕರಿಸಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಸಮರ್ಥಿಸಿಕೊಂಡಿದ್ದಾರೆ.
Vijaya Karnataka Web amith sha


ಒಬ್ಬ ವ್ಯಕ್ತಿಯ ಮೇಲೆ ಆರೋಪ ಬಂದಾಕ್ಷಣ ಅವನನ್ನು ದೋಷಿ ಎನ್ನಲಾಗದು. ಜನಾರ್ದನ ರೆಡ್ಡಿ ಸಹೋದರರ ಮೇಲಿದ್ದ ಎಲ್ಲ ಪ್ರಕರಣಗಳು ಇತ್ಯರ್ಥವಾಗಿರುವ ಬಗ್ಗೆ ಪಕ್ಷ ಖಚಿತ ಮಾಹಿತಿ ಪಡೆದಿದೆ. ಪರಿಶೀಲನೆ ನಡೆಸಿದ ಬಳಿಕವೇ ಟಿಕೆಟ್‌ ನೀಡಲಾಗಿದೆ. ಆರೋಪಿಯ ಸಂಬಂಧಿಕರು ಎಂಬ ಕಾರಣಕ್ಕೆ ಟಿಕೆಟ್ ನಿರಾಕರಿಸುವುದು ಹೇಗೆ ಎಂದು ಅಮಿತ್‌ ಶಾ ಪ್ರಶ್ನಿಸಿದ್ದಾರೆ.

ಟೈಮ್ಸ್‌ ನೌ ಹಾಗೂ ವಿಜಯ ಕರ್ನಾಟಕ ನಡೆಸುತ್ತಿರುವ ಕರ್ನಾಟಕ ನೌ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಅಭ್ಯರ್ಥಿಗಳ ಮೇಲೆ ಯಾವುದೇ ಕಾನೂನು ಪ್ರಕರಣಗಳು ಇತ್ಯರ್ಥವಾಗದೆ ಉಳಿದಿಲ್ಲ. ಕಾಂಗ್ರೆಸ್‌ನ ಪ್ರಿಯಾಂಕ ಗಾಂಧಿ ಪತಿ ರಾಬರ್ಟ್‌ ವಾದ್ರ ಮೇಲೆ ಇನ್ನೂ ಅನೇಕ ಪ್ರಕರಣಗಳು ಇತ್ಯರ್ಥವಾಗದೇ ಉಳಿದಿದೆ ಎಂದ ಅವರು ಪಕ್ಷ ನಿಷ್ಠೆ ಹಾಗೂ ಪಕ್ಷ ಸಂಘಟನೆಯಲ್ಲಿ ಪ್ರತಿಯೊಬ್ಬರ ಪಾತ್ರವನ್ನು ಪರಿಗಣಿಸಿ ಟಿಕೆಟ್‌ ನೀಡಲಾಗಿದೆಯೇ ಹೊರತು, ಜಾತಿಯ ಆಧಾರದಿಂದಲ್ಲ ಎಂದು ಅಮಿತ್‌ ಶಾ ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಕೊಲೆಗಳಿಗೆ ಕುಮ್ಮಕ್ಕು ನೀಡುತ್ತಿರುವ ಸೋಷಿಯಲ್‌ ಡೆಮೊಕ್ರೆಟಿಕ್‌ ಪಾರ್ಟಿ ಆಫ್‌ ಇಂಡಿಯಾ ಹಾಗೂ ಪೊಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ ಸಂಘಟನೆಗಳನ್ನುನಿಷೇಧಿಸಲು ಅಗತ್ಯ ಕ್ರಮ ಕೈಗೊಳ್ಳುತ್ತೇವೆ. ಕಾಂಗ್ರೆಸ್‌ ಇಂತಹ ಅಲ್ಪಸಂಖ್ಯಾತ ಸಂಘಟನೆಗಳನ್ನು ಪೋಷಿಸುತ್ತಿದೆ ಎಂದು ಶಾ ದೂರಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ