ಆ್ಯಪ್ನಗರ

ಬಿ ಫಾರಂ ಇಲ್ಲದೆ ನಾಮಪತ್ರ ಸಲ್ಲಿಸಿದ ಬಿಜೆಪಿ ಟಿಕೆಟ್ ಆಕಾಂಕ್ಷಿ

ತುಮಕೂರು ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿಯಾಗಿ ದೇವೇಗೌಡರ ಸ್ಪರ್ಧೆ ಖಚಿತವಾಗುತ್ತಿದ್ದಂತೆ ಇತ್ತ ಬಿಜೆಪಿಯಲ್ಲಿ ಟಿಕೆಟ್ ಹಂಚಿಕೆ ಲೆಕ್ಕಾಚಾರ ಬದಲಾಗಿತ್ತು.

Vijaya Karnataka Web 21 Mar 2019, 3:26 pm
ತುಮಕೂರು: ತುಮಕೂರು ಲೋಕಸಭೆ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಬಿಜೆಪಿ ಟಿಕೆಟ್ ಆಕಾಂಕ್ಷಿ, ಸಂಭಾವ್ಯ ಅಭ್ಯರ್ಥಿ ಜಿ.ಎಸ್.ಬಸವರಾಜು ಗುರುವಾರ ದಿಢೀರ್ ನಾಮಪತ್ರ ಸಲ್ಲಿಕೆ ಮಾಡುವ ಮೂಲಕ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದಾರೆ.
Vijaya Karnataka Web bjp


ತುಮಕೂರು ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿಯಾಗಿ ದೇವೇಗೌಡರ ಸ್ಪರ್ಧೆ ಖಚಿತವಾಗುತ್ತಿದ್ದಂತೆ ಇತ್ತ ಬಿಜೆಪಿಯಲ್ಲಿ ಟಿಕೆಟ್ ಹಂಚಿಕೆ ಲೆಕ್ಕಾಚಾರ ಬದಲಾಗಿತ್ತು. ಈ ಮೊದಲು ವೀರಶೈವ ಲಿಂಗಾಯತ ಸಮುದಾಯದ ಜಿ.ಎಸ್.ಬಸವರಾಜುಗೆ ಟಿಕೆಟ್ ಎನ್ನಲಾಗಿತ್ತು. ಆದರೆ ದೇವೇಗೌಡರ ಸ್ಪರ್ಧೆ ಖಚಿತವಾಗುತ್ತಿದ್ದಂತೆ ಬಿಜೆಪಿಯಿಂದಲೂ ಒಕ್ಕಲಿಗ ಅಭ್ಯರ್ಥಿ ಅಥವಾ ಮಹಿಳಾ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಲೆಕ್ಕಾಚಾರ ನಡೆದಿದೆ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಬಸವರಾಜು, ಬಿಜೆಪಿ ಹೈ ಕಮಾಂಡ್‌ಗೆ ಸಡ್ಡು ಹೊಡೆದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಬಿ ಫಾರಂ ಇಲ್ಲದೇ ತಮ್ಮ ಉಮೇದುವಾರಿಕೆ ಸಲ್ಲಿಸುವ ಮೂಲಕ ಪಕ್ಷದ ಹೈ ಕಮಾಂಡ್ ಮೇಲೆ ಒತ್ತಡ ಹೇರುವ ತಂತ್ರಕ್ಕೆ ಮೊರೆ ಹೋಗಿದ್ದಾರೆ.

ಕೈ- ದಳ ಮಾತುಕತೆ

ತುಮಕೂರು ನಗರದ ಕಾಂಗ್ರೆಸ್ ಮಾಜಿ ಶಾಸಕ ಡಾ. ಎಸ್.ರಫೀಕ್ ಅಹ್ಮದ್ ನಿವಾಸಕ್ಕೆ ಗುರುವಾರ ಜೆಡಿಎಸ್ ಮುಖಂಡರು ಭೇಟಿ ನೀಡಿ ಚರ್ಚಿಸಿದ್ದಾರೆ. ಸಚಿವ ಎಸ್.ಆರ್.ಶ್ರೀನಿವಾಸ್ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು, ದೇವೇಗೌಡರ ಸ್ಪರ್ಧೆ ಕುರಿತು ಚರ್ಚೆ ನಡೆಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌