ಆ್ಯಪ್ನಗರ

ಬೆಂಗಳೂರಿನ ಮೂರು ಕ್ಷೇತ್ರಗಳಲ್ಲೂ ಬಿಜೆಪಿಗೆ ಜಯ ಖಚಿತ: ಎಸ್.ಎಂ. ಕೃಷ್ಣ

ಬೆಂಗಳೂರು ದಕ್ಷಿಣ ಲೋಕಸಭಾ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರ ಪರ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಎಸ್.ಎಂ. ಕೃಷ್ಣ ತೇಜಸ್ವಿ ಸೂರ್ಯ ಹಿರಿಯರನ್ನು ಒಗ್ಗೂಡಿಸಿಕೊಂಡು ಚುನಾವಣೆ ನಡೆಸುತ್ತಿದ್ದಾರೆ, ಕ್ಷೇತ್ರದಲ್ಲಿ ಈಗಾಗಲೇ ಗೆಲುವಿನ ವಾತಾವರಣ ಸೃಷ್ಟಿಯಾಗಿದೆ ಎಂದು ಕೃಷ್ಣ ನುಡಿದರು.

Vijaya Karnataka Web 12 Apr 2019, 10:31 pm
ಬೆಂಗಳೂರು: ಬೆಂಗಳೂರಿನ ಮೂರು ಕ್ಷೇತ್ರಗಳಲ್ಲಿನ ಪ್ರಚಾರಗಳಲ್ಲಿ ಪಾಲ್ಗೊಂಡಿದ್ದೇನೆ, ಯಾವುದೇ ಅನುಮಾನ ಇಲ್ಲ ಈ ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿ ಗಳ ದೊಡ್ಡ ಪ್ರಮಾಣದ ಅಂತರದಿಂದ ಜಯಗಳಿಸುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ, ಹಿರಿಯ ಬಿಜೆಪಿ ಮುಖಂಡರಾದ ಎಸ್. ಎಂ. ಕೃಷ್ಣ ಹೇಳಿದ್ದಾರೆ.
Vijaya Karnataka Web SM Krishna


ಬೆಂಗಳೂರು ದಕ್ಷಿಣ ಲೋಕಸಭಾ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರ ಪರ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಎಸ್.ಎಂ. ಕೃಷ್ಣ ತೇಜಸ್ವಿ ಸೂರ್ಯ ಹಿರಿಯರನ್ನು ಒಗ್ಗೂಡಿಸಿಕೊಂಡು ಚುನಾವಣೆ ನಡೆಸುತ್ತಿದ್ದಾರೆ, ಕ್ಷೇತ್ರದಲ್ಲಿ ಈಗಾಗಲೇ ಗೆಲುವಿನ ವಾತಾವರಣ ಸೃಷ್ಟಿಯಾಗಿದೆ ಎಂದು ಕೃಷ್ಣ ನುಡಿದರು.

ಮತದಾರರನ್ನು ಉದ್ದೇಶಿಸಿ ಮಾತನಾಡುತ್ತ, ನಾಗರಿಕರು ಮತವನ್ನು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವವನ್ನು ಉಳಿಸಬೇಕು ಎಂದು ಕಿವಿ ಮಾತು ಹೇಳಿದರು. ಹೆಚ್ಚು ಹೆಚ್ಚು ಮತದಾರರು ಮತಗಟ್ಟೆಗೆ ಹೋದರೆ ಬಿಜೆಪಿ ಹೆಚ್ಚು ಅನುಕೂಲವಾಗಲಿದೆ ಎಂದರು. ಎರಡು ಹಂತದ ಚುನಾವಣೆಗಳಲ್ಲಿ ಮತದಾರರು ಹೆಚ್ಚಾಗಿ ಮತ ಚಲಾಯಿಸಬೇಕು, ವಿಶೇಷವಾಗಿ ಬೆಂಗಳೂರಿಗರಲ್ಲಿ ಮತ ಚಲಾವಣೆ ಮಾಡುವಂತೆ ಮನವಿ ಮಾಡಿ ಆ ಮೂಲಕ ಪ್ರಜಾಪ್ರಭುತ್ವವನ್ನು ಉಳಿಸುವಂತೆ ಕರೆ ನೀಡಿದರು.

ವಿಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ತೇಜಸ್ವಿ ಸೂರ್ಯ, ಎಚ್. ರವೀಂದ್ರ ಸೇರಿದಂತೆ ಬಿಜೆಪಿ ನಾಯಕರ ಜೊತೆಗೂಡಿ ನಡೆಸಿದ ವಿಜಯಸಂಕಲ್ಪ ಯಾತ್ರೆಯನ್ನು ಎಸ್.ಎಂ ಕೃಷ್ಣರವರು ಮೈಸೂರು ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿ ಸೇರಿಕೊಂಡರು. ಅಲ್ಲಿಂದ ಬ್ಯಾಟರಾಯನಪುರ, ಆವಲಹಳ್ಳಿ, ಟಿ.ಆರ್. ಮಿಲ್ ಮಾರ್ಗವಾಗಿ ಗಾಳಿ ಆಂಜನೇಯ ದೇವಸ್ಥಾನದ ವರೆಗೂ ಪ್ರಚಾರ ರ್ಯಾಲಿಯಲ್ಲಿ ಭಾಗಿಯಾಗಿ ತೇಜಸ್ವಿ ಸೂರ್ಯ ಪರ ಮತ ಯಾಚಿಸಿದರು.

ಇದಕ್ಕೂ ಮೊದಲು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಆರಂಭವಾದ ವಿಜಯ ಸಂಕಲ್ಪ ಯಾತ್ರೆಯು‌ ಗೋವಿಂದರಾಜನಗರ, ಪ್ರಶಾಂತ ನಗರ, ಮೂಡಲಪಾಳ್ಯ, ನಾಗರಬಾವಿ ಮುಖ್ಯ ರಸ್ತೆ ಮಾರ್ಗವಾಗಿ ಅನುಭವನಗರ, ಮಾರುತಿ ನಗರದವರೆಗೂ ಸಂಚರಿಸಿತು.

ಯಾತ್ರೆಯಲ್ಲಿ ತೇಜಸ್ವಿ ಸೂರ್ಯ , ಶಾಸಕರಾದ ಆರ್. ಅಶೋಕ್, ವಿ.ಸೋಮಣ್ಣ, ಆರ್. ದೇವೆಗೌಡ, ಉಮೇಶ್ ಶೆಟ್ಟಿ, ಅರುಣ್ ಸೋಮಣ್ಣ, ಮಾಜಿ ಮೇಯರ್ ಶಾಂತಕುಮಾರಿ, ಬುಲೆಟ್ ಪ್ರಕಾಶ್ , ಬಿಬಿಎಂಪಿ ಬಿಜೆಪಿ ಸದಸ್ಯರು ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು, ಕಾರ್ಯಕರ್ತರು ಸಾಥ್ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ