ಆ್ಯಪ್ನಗರ

ರಾಜೀನಾಮೆ ಇಂಗಿತ ವ್ಯಕ್ತಪಡಿಸಿದ ಸಿಎಂ ಕುಮಾರಸ್ವಾಮಿ

ನಿಖಿಲ್‌ ಕುಮಾರಸ್ವಾಮಿ ಮಂಡ್ಯದಲ್ಲಿ ಸುಮಲತಾ ಅಂಬರೀಷ್ ವಿರುದ್ಧ 1.3 ಲಕ್ಷಕ್ಕಿಂತಲೂ ಹೆಚ್ಚು ಮತಗಳ ಅಂತರದಿಂದ ಸೋತಿರುವುದು ಜೆಡಿಎಸ್‌ಗಿಂತಲೂ ವೈಯಕ್ತಿಕವಾಗಿ ಕುಮಾರಸ್ವಾಮಿ ವರ್ಚಸ್ಸಿಗೆ ಪೆಟ್ಟು ಬಿದ್ದಂತಾಗಿದೆ.

Vijaya Karnataka Web 24 May 2019, 4:58 pm
ಬೆಂಗಳೂರು: ಲೋಕಸಭಾ ಚುನಾವಣೆಯ ಕುಸ್ತಿಯಲ್ಲಿ ಕಾಂಗ್ರೆಸ್‌ ಜೆಡಿಎಸ್‌ ದೋಸ್ತಿಗಳು ಮಖಾಡೆ ಮಲಗಿದ ನಂತರ ಈಗ ಉಭಯ ಪಕ್ಷಗಳು ಎಚ್ಚೆತ್ತುಕೊಂಡಿವೆ.
Vijaya Karnataka Web ಎಚ್‌ಡಿ ಕುಮಾರಸ್ವಾಮಿ
ಎಚ್‌ಡಿ ಕುಮಾರಸ್ವಾಮಿ


ಫಲಿತಾಂಶ ಬಂದ ಮಾರನೆಯ ದಿನ ಶುಕ್ರವಾರ ಉಭಯ ಪಕ್ಷಗಳ ನಾಯಕರು ನಿರಂತರ ಸಭೆ ನಡೆಸಿದ್ದಾರೆ.

ಜೆಡಿಎಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಫಲಿತಾಂಶದ ವಿಶ್ಲೇಷಣೆ ಮಾಡಲಾಗಿದೆ. ಇದಕ್ಕೂ ಮುನ್ನ ನಡೆದ ಅನೌಪಚಾರಿಕ ಸಭೆಯಲ್ಲಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಪಕ್ಷದ ಹೀನಾಯ ಸಾಧನೆಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವ ಇಂಗಿತ ಕೂಡ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ತಂದೆ, ಮಾಜಿ ಪ್ರಧಾನಿ, ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ. ದೇವೇಗೌಡ ಅವರ ಮುಂದೆಯೂ ಪ್ರಸ್ತಾವ ಮುಂದಿಟ್ಟಿದ್ದಾರೆ ಎಂದು ಕೆಲವು ಖಾಸಗಿ ವಾಹಿನಿಗಳು ವರದಿ ಮಾಡಿವೆ.

ಈಗಲೇ ಆತುರ ಬೇಡ, ಕಾಂಗ್ರೆಸ್‌ ಪಕ್ಷದ ವರಿಷ್ಠ ರಾಹುಲ್‌ ಗಾಂಧಿ ಹಾಗೂ ರಾಜ್ಯ ನಾಯಕರ ಜತೆ ಸಮಾಲೋಚನೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳೋಣ ಎಂದು ದೇವೇಗೌಡು ಪುತ್ರನಿಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ರಾಹುಲ್‌ ಗಾಂಧಿಗೆ ದೂರವಾಣಿ ಕರೆ ಮಾತನಾಡಿರುವ ಎಚ್‌ಡಿ ಕುಮಾರಸ್ವಾಮಿ ರಾಜೀನಾಮೆ ನೀಡುವ ಪ್ರಸ್ತಾವ ಮುಂದಿಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಆದರೆ ಈಗಲೇ ಈ ರೀತಿಯ ಆತುರದ ನಿರ್ಧಾರ ಬೇಡ. ಇದರಿಂದ ನಿಮ್ಮ ತಂದೆ ಎಚ್‌ಡಿ ದೇವೇಗೌಡರಿಗೂ ಬೇಸರವಾಗುತ್ತದೆ. ಈ ಬಗ್ಗೆ ಚರ್ಚೆ ಮಾಡಿ ನಂತರ ಸೂಕ್ತ ತೀರ್ಮಾನ ಕೈಗೊಳ್ಳೋಣ ಎಂದು ರಾಹುಲ್‌ ಗಾಂಧಿ ಸಲಹೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಆದರೆ ಪಕ್ಷದ ಸಾಧನೆಗಿಂತ ಮಂಡ್ಯದಲ್ಲಿ ಪುತ್ರನನ್ನೇ ಗೆಲ್ಲಿಸಿಕೊಂಡು ಬರಲು ಸಾಧ್ಯವಾಗದಿರುವುದು ಕುಮಾರಸ್ವಾಮಿ ಪ್ರತಿಷ್ಠೆಗೆ ತೀವ್ರ ಧಕ್ಕೆ ಉಂಟು ಮಾಡಿದೆ.

ನಿಖಿಲ್‌ ಕುಮಾರಸ್ವಾಮಿ ಮಂಡ್ಯದಲ್ಲಿ ಸುಮಲತಾ ಅಂಬರೀಷ್ ವಿರುದ್ಧ 1.3 ಲಕ್ಷಕ್ಕಿಂತಲೂ ಹೆಚ್ಚು ಮತಗಳ ಅಂತರದಿಂದ ಸೋತಿರುವುದು ಜೆಡಿಎಸ್‌ಗಿಂತಲೂ ವೈಯಕ್ತಿಕವಾಗಿ ಕುಮಾರಸ್ವಾಮಿ ವರ್ಚಸ್ಸಿಗೆ ಪೆಟ್ಟು ಬಿದ್ದಂತಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ