ಆ್ಯಪ್ನಗರ

ಮಂಡ್ಯದಲ್ಲಿ ಜೆಡಿಎಸ್‌-ಕಾಂಗ್ರೆಸ್‌ ನಾಯಕರ ಮನೆಗೆ ಎಚ್‌ಡಿಕೆ ಭೇಟಿ; ಮಾದೇಗೌಡರ ಬೆಂಬಲ ಕೋರಿದ ಸಿಎಂ

ಮೈತ್ರಿ ಅಭ್ಯರ್ಥಿ ಪರವಾಗಿ ಚುನಾವಣೆಯಲ್ಲಿ ಪ್ರಚಾರಕ್ಕೆ ಬರುವಂತೆ ಕೋರಿದರು. ಇದಕ್ಕೆ ಮಾದೇಗೌಡರು ಸಹಮತ ವ್ಯಕ್ತಪಡಿಸಿದರು. ಮೈತ್ರಿ ಅಭ್ಯರ್ಥಿ ಗೆಲುವಿಗೆ ಶ್ರಮಿಸುವಂತೆ ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದರು.

Vijaya Karnataka Web 27 Mar 2019, 8:54 pm
ಮಂಡ್ಯ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಾಜಿ ಸಂಸದ ಜಿ.ಮಾದೇಗೌಡ ಸೇರಿದಂತೆ ಜಿಲ್ಲೆಯ ಕಾಂಗ್ರೆಸ್ ಮತ್ತು ಜೆಡಿಎಸ್‌ನ ಹಲವು ನಾಯಕರನ್ನು ಭೇಟಿಯಾಗಿ ಬೆಂಬಲ ಕೋರಿದರು.
Vijaya Karnataka Web ಎಚ್‌ಡಿ ಕುಮಾರಸ್ವಾಮಿ
ಎಚ್‌ಡಿ ಕುಮಾರಸ್ವಾಮಿ


ಮೊದಲಿಗೆ ಹಿರಿಯ ಮುತ್ಸದ್ದಿ, ಮಾಜಿ ಸಂಸದ ಜಿ.ಮಾದೇಗೌಡ ನಿವಾಸಕ್ಕೆ ಭೇಟಿ ನೀಡಿದ ಸಿಎಂ ಕುಮಾರಸ್ವಾಮಿ, ಗೌಡರೊಂದಿಗೆ ಕೆಲವೊತ್ತು ಸಮಾಲೋಚನೆ ನಡೆಸಿದರು. ಮೈತ್ರಿ ಅಭ್ಯರ್ಥಿ ಪರವಾಗಿ ಚುನಾವಣೆಯಲ್ಲಿ ಪ್ರಚಾರಕ್ಕೆ ಬರುವಂತೆ ಕೋರಿದರು. ಇದಕ್ಕೆ ಮಾದೇಗೌಡರು ಸಹಮತ ವ್ಯಕ್ತಪಡಿಸಿದರು. ಮೈತ್ರಿ ಅಭ್ಯರ್ಥಿ ಗೆಲುವಿಗೆ ಶ್ರಮಿಸುವಂತೆ ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿ.ಮಾದೇಗೌಡರು ನಮ್ಮ ತಂದೆಯ ಸಮಕಾಲೀನರು. ಅಂದಿನಿಂದಲೂ ರಾಜಕಾರಣ ಮಾಡಿಕೊಂಡು ಬಂದಿದ್ದಾರೆ. ನನಗೂ ಹಲವಾರು ಸಲಹೆ ಕೊಟ್ಟಿದ್ದಾರೆ. ನನಗಿಂತಲೂ ಮೊದಲು ಮೈತ್ರಿ ಅಭ್ಯರ್ಥಿ ನಿಖಿಲ್ ಕೂಡ ಬಂದು ಗೌಡರನ್ನು ಭೇಟಿಯಾಗಿ ಆರ್ಶೀವಾದ ಪಡೆದು ಹೋಗಿದ್ದಾರೆ ಎಂದು ಹೇಳಿದರು.

ಬಳಿಕ ಕುಮಾರಸ್ವಾಮಿ ಮಾಜಿ ಸಚಿವ ಎಂ.ಎಸ್.ಆತ್ಮಾನಂದ, ಮಾಜಿ ಶಾಸಕ ಜಿ.ಬಿ.ಶಿವಕುಮಾರ್, ಜಿಲ್ಲಾ ಯುವ ಕಾಂಗ್ರೆಸ್ ಮಾಜಿ ಅ‘್ಯಕ್ಷ ಎಂ.ಎಸ್.ಚಿದಂಬರ್, ಕಾಂಗ್ರೆಸ್ ಮುಖಂಡ ಹಾಲಹಳ್ಳಿ ರಾಮಲಿಂಗಯ್ಯ, ವಕೀಲ ಎಂ.ಗುರುಪ್ರಸಾದ್ ಸೇರಿದಂತೆ ಹಲವರ ಮನೆಗಳಿಗೆ ಭೇಟಿ ನೀಡಿ ಬೆಂಬಲ ಯಾಚಿಸಿದರು.

ಈ ಸಂದರ್ಭದಲ್ಲಿ ಸಂಸದ ಎಲ್.ಆರ್.ಶಿವರಾಮೇಗೌಡ, ವಿ‘ಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ಜೆಡಿಎಸ್ ಜಿಲ್ಲಾದ್ಯಕ್ಷ ಡಿ. ರಮೇಶ್, ಕಾಂಗ್ರೆಸ್ ಮುಖಂಡ ಅಮರಾವತಿ ಚಂದ್ರಶೇಖರ್ ಸೇರಿದಂತೆ ಹಲವು ಮುಖಂಡರು ಸಿಎಂ ಕುಮಾರಸ್ವಾಮಿಗೆ ಸಾಥ್ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ