ಆ್ಯಪ್ನಗರ

ಕಾಂಗ್ರೆಸ್ ಪಲ್ಲಕ್ಕಿ, ಹೆಣ ಎರಡೂ ನಾನೇ ಹೊರುವೆ: ಡಿ.ಕೆ.ಶಿವಕುಮಾರ್‌

ಬೆಂಗಳೂರು ಕೇಂದ್ರ ಅಥವಾ ಉತ್ತರದಿಂದ ಮೋದಿಗೆ ಪ್ರತಿಸ್ಪರ್ಧಿಯಾಗಿ ಸ್ಪರ್ಧಿಸುತ್ತೀರಾ? ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಕೆಶಿ, ನಾವು ಪಕ್ಷದ ಶಿಸ್ತಿನ ಸಿಪಾಯಿಗಳು. ಪಕ್ಷ ಹೇಳಿದ ಕೆಲಸ ಮಾಡುತ್ತೇವೆ.

Vijaya Karnataka Web 25 Mar 2019, 10:42 am
ಸಂಡೂರು: ಕಾಂಗ್ರೆಸ್‌ ಪಕ್ಷದ ಪಲ್ಲಕ್ಕಿ ಹೊರುವವನೂ ನಾನೇ. ಹೆಣ ಹೊರುವವನೂ ನಾನೇ ಎಂದು ಜಿಲ್ಲಾ ಉಸ್ತುವಾರಿ ಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.
Vijaya Karnataka Web dks2


ಪಟ್ಟಣದ ಕೂಡ್ಲಿಗಿ ರಸ್ತೆಯಲ್ಲಿನ ಮೈದಾನದಲ್ಲಿ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಹಮ್ಮಿಕೊಂಡಿದ್ದ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಕಾರ್ಯಕರ್ತರ ಸಭೆಯ ನಂತರ ಸುದ್ದಿಗಾರರೊಂದಿಗೆ ಭಾನುವಾರ ಮಾತನಾಡಿದರು.

ಬೆಂಗಳೂರು ಕೇಂದ್ರ ಅಥವಾ ಉತ್ತರದಿಂದ ಮೋದಿಗೆ ಪ್ರತಿಸ್ಪರ್ಧಿಯಾಗಿ ಸ್ಪರ್ಧಿಸುತ್ತೀರಾ? ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಕೆಶಿ, ನಾವು ಪಕ್ಷದ ಶಿಸ್ತಿನ ಸಿಪಾಯಿಗಳು. ಪಕ್ಷ ಹೇಳಿದ ಕೆಲಸ ಮಾಡುತ್ತೇವೆ. ಪ್ರಜಾ ಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಎಲ್ಲಿ ಬೇಕಾದರೂ ಸ್ಪರ್ಧಿಸಲು ಅವಕಾಶವಿದೆ. ನಾನು ವ್ಯಕ್ತಿ ಪೂಜೆಗಿಂತ ಪಕ್ಷದ ಪೂಜೆ ಮಾಡುವವನು. ನಾನಾಗಲಿ ನನ್ನ ತಮ್ಮ ಡಿ.ಕೆ.ಸುರೇಶರಾಗಲಿ ನಮಗೆ ಟಿಕೆಟ್‌ ಬೇಕು ಎಂದು ಯಾವತ್ತೂ ಪಕ್ಷಕ್ಕೆ ಅರ್ಜಿ ಹಾಕಿಲ್ಲ. ಪಕ್ಷ ವೇ ಗುರುತಿಸಿ ಟಿಕೆಟ್‌, ಸ್ಥಾನ-ಮಾನ ನೀಡಿದೆ ಎಂದರು.

ಶಾಸಕ ನಾಗೇಂದ್ರ ಅವರ ಸಹೋದರ ಬಿಜೆಪಿಗೆ ಸೇರಿದ್ದು ಅವರ ವೈಯಕ್ತಿಕ ಇಚ್ಛೆ. ಶಾಸಕ ನಾಗೇಂದ್ರ ಪಕ್ಷ ದಲ್ಲಿದ್ದಾರೆ. ಮುಂದಿನ ಮಂಗಳವಾರ ಕಾಂಗ್ರೆಸ್‌ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ವೇಳೆ ಹಾಜರಾಗಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಸಚಿವರಾದ ಈ.ತುಕಾರಾಮ್‌, ಪಿ.ಟಿ.ಪರಮೇಶ್ವರ ನಾಯ್ಕ, ಕಾಂಗ್ರೆಸ್‌ ಅಭ್ಯರ್ಥಿ ವಿ.ಎಸ್‌.ಉಗ್ರಪ್ಪ ಸೇರಿದಂತೆ ಇತರರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌