ಆ್ಯಪ್ನಗರ

ಮತ್ತೆ ಮೋದಿ ಗೆದ್ದರೆ, ರಾಜಕೀಯ ನಿವೃತ್ತಿ: ಎಚ್ ಡಿ ರೇವಣ್ಣ

ಲೋಕೋಸಭೆ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ 22 ಕ್ಷೇತ್ರಗಳನ್ನು ಗೆದ್ದೆ ಗೆಲ್ಲುತ್ತೆ. 22 ನನಗೆ ಲಕ್ಕಿ ನಂಬರ್ ಎಂದವರು ಹೇಳಿದರು.

Vijaya Karnataka Web 11 Apr 2019, 12:04 pm
ಮಡಿಕೇರಿ: ಮತ್ತೊಂದು ಅವಧಿಗೆ ನರೇಂದ್ರ ಮೋದಿ ಪ್ರಧಾನಿಯಾದರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಘೋಷಿಸಿದ್ದಾರೆ.
Vijaya Karnataka Web revanna


ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಲೋಕೋಸಭೆ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ 22 ಕ್ಷೇತ್ರಗಳನ್ನು ಗೆದ್ದೆ ಗೆಲ್ಲುತ್ತೆ. 22 ನನಗೆ ಲಕ್ಕಿ ನಂಬರ್ ಎಂದವರು ಹೇಳಿದರು.

ನನ್ನ ಜೀವನದಲ್ಲೇ ಎಚ್.ಡಿ.ಕುಮಾರಸ್ವಾಮಿ ಜತೆ ಹೊಡೆದಾಡಿಲ್ಲ. ಚುನಾವಣೆಯಲ್ಲಿ ಗೆದ್ದ ಬಳಿಕ ಯಾರು ಸಚಿವರಾಗುತ್ತಾರೆ ಎನ್ನುವುದು ಮುಖ್ಯವಲ್ಲ. ಪಕ್ಷದ 7 ಅಭ್ಯರ್ಥಿಗಳ ಪೈಕಿ ಒಬ್ಬರು ಸಚಿವರಾಗುತ್ತಾರೆ ಎಂದು ಹೇಳಿದರು.

ಕಿಸಾನ್ ಸಮ್ಮಾನ್ ಯೋಜನೆ ಯಲ್ಲಿ ಹದಿನೈದು ಲಕ್ಷ ಹೆಸರು ಕಳುಹಿಸಿದ್ದೇವೆ. ಕಳುಹಿಸಲಿಲ್ಲ ಎಂದು ಸಾಬೀತು ಪಡಿಸಿದರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದರು.

ನಮ್ಮದು ಕುಟುಂಬ ರಾಜಕೀಯ ಎಂದು ಹೇಳುತ್ತಾರೆ. ಆದರೆ, ಜಗದೀಶ್ ಶೆಟ್ಟರ್ ತನ್ನ ಸಹೋದರನನ್ನು ಚುನಾವಣೆಗೆ ನಿಲ್ಲಿಸಲಿಲ್ಲವೇ? ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಚುನಾವಣೆಗೆ ನಿಲ್ಲಿಸಿದ್ದು ಮಗನನ್ನೆ ಅಲ್ಲವೇ ಎಂದು ಪ್ರಶ್ನಿಸಿದರು.

ಕಳ್ಳರಿದ್ದಾರಲ್ಲ ಅದಕ್ಕೆ ನಿಂಬೆಹಣ್ಣು ಇಟ್ಟುಕೊಂಡಿರುತ್ತೇನೆ. ಯಡಿಯೂರಪ್ಪ, ಅಶೋಕ್ ಅವರಿಗೆ ಒಂದೊಂದು ಕೊಡುತ್ತೇನೆ ಎಂದು ಎಚ್.ಡಿ.ರೇವಣ್ಣ ವ್ಯಂಗ್ಯವಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ