ಆ್ಯಪ್ನಗರ

ನಿಖಿಲ್ ಗೆಲುವಿಗಾಗಿ ಜೆಡಿಎಸ್ ಮುಖಂಡರ ವಿಶೇಷ ಪೂಜೆ

ನಗರ ದೇವತೆ ಚಾಮುಂಡೇಶ್ವರಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಮುಖಂಡರು, ದೇಗುಲದ ಎದುರು 101 ತೆಂಗಿನ ಕಾಯಿ ಒಡೆದರು.

Vijaya Karnataka Web 21 May 2019, 11:46 am
ರಾಮನಗರ: ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ವಿರುದ್ಧ ಚುನಾವಣಾ ಅಖಾಡಕ್ಕಿಳಿದಿದ್ದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಗೆಲುವಿಗಾಗಿ ಜೆಡಿಎಸ್ ಮುಖಂಡರು ವಿಶೇಷ ಪೂಜೆ ಸಲ್ಲಿಸಿದರು.

ನಗರ ದೇವತೆ ಚಾಮುಂಡೇಶ್ವರಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಮುಖಂಡರು, ದೇಗುಲದ ಎದುರು 101 ತೆಂಗಿನ ಕಾಯಿ ಒಡೆದರು.

ಸುಮಲತಾ ವಿರುದ್ಧ ನಿಖಿಲ್ ಭರ್ಜರಿ ಗೆಲುವು ದಾಖಲಿಸಬೇಕೆಂದು ಕೋರಿರುವ ಜೆಡಿಎಸ್ ನಾಯಕರು, ಶಕ್ತಿ ದೇವತೆ ಮೊರೆ ಹೋಗಿದ್ದಾರೆ.

17ನೇ ಸಾರ್ವತ್ರಿಕ ಚುನಾವಣೆಯಲ್ಲಿ ಮಂಡ್ಯ ಲೋಕಸಭೆ ಕ್ಷೇತ್ರ ದೇಶದ ಗಮನ ಸೆಳೆದಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ