ಜೈಪುರ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಬಿಜೆಪಿ ಅಧಿಕಾರ ಉಳಿಸಿಕೊಳ್ಳಲಿದೆ ಎನ್ನುವ ವಿಶ್ವಾಸವನ್ನು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ವ್ಯಕ್ತಪಡಿಸಿದ್ದಾರೆ. 2014ರ ಚುನಾವಣೆಗಿಂತಲೂ ಈ ಬಾರಿ ಹೆಚ್ಚಿನ ಸೀಟುಗಳನ್ನು ಪಕ್ಷ ಗೆಲ್ಲಲಿದೆ ಎಂದು ಅವರು ಹೇಳಿದರು. ''ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 282 ಸೀಟುಗಳನ್ನು ಗೆದ್ದಿತ್ತು. ಈ ಬಾರಿ ಆ ಗೆಲುವಿನ ಸ್ಕೋರ್ ಹೆಚ್ಚಾಗಲಿದೆ. ದೇಶದಲ್ಲಿ ಭಯೋತ್ಪಾದನೆ ಹತ್ತಿಕ್ಕುವ ಮೂಲಕ ಮೋದಿ ಸರಕಾರ ದಿಟ್ಟ ನಾಯಕತ್ವ ನೀಡಿದೆ,'' ಎಂದು ಬಿಜೆಪಿ ಬೈಕ್ ರಾರಯಲಿ ಬಳಿಕ ಜಾವಡೇಕರ್ ಹೇಳಿದರು.
‘ಬಿಜೆಪಿ ಹಿಂದಿ ಸಲಕ್ಕಿಂತ ಹೆಚ್ಚು ಸ್ಥಾನ ಗೆಲ್ಲಲಿದೆ’
ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 282 ಸೀಟುಗಳನ್ನು ಗೆದ್ದಿತ್ತು. ಈ ಬಾರಿ ಆ ಗೆಲುವಿನ ಸ್ಕೋರ್ ಹೆಚ್ಚಾಗಲಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದರು.
Vijaya Karnataka 3 Mar 2019, 5:00 am