ಆ್ಯಪ್ನಗರ

Parliament Flashback: ಇಬ್ಬರು ಸ್ಪೀಕರ್‌ ಕಂಡ ನಾಲ್ಕನೇ ಲೋಕಸಭೆ

1967ರಲ್ಲಿ ನಡೆದ ಚುನಾವಣೆಯು ಹಲವು ದೃಷ್ಟಿಗಳಿಂದ ಮಹತ್ವ ಪಡೆದುಕೊಂಡಿದೆ. ಈ ಚುನಾವಣೆಯ ಹೊತ್ತಿಗೆ ಲೋಕಸಭೆ ಸ್ಥಾನಗಳು 520ಕ್ಕೆ ಏರಿಕೆಯಾಗಿದವು. 27 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡವು.

Vijaya Karnataka 4 Mar 2019, 5:00 am
1967ರಲ್ಲಿ ನಡೆದ ಚುನಾವಣೆಯು ಹಲವು ದೃಷ್ಟಿಗಳಿಂದ ಮಹತ್ವ ಪಡೆದುಕೊಂಡಿದೆ. ಈ ಚುನಾವಣೆಯ ಹೊತ್ತಿಗೆ ಲೋಕಸಭೆ ಸ್ಥಾನಗಳು 520ಕ್ಕೆ ಏರಿಕೆಯಾಗಿದವು. 27 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡವು. ನೆಹರು ಯುಗ ಮುಗಿದು ಇಂದಿರಾ ಯುಗಕ್ಕೆ ಬುನಾದಿ ಹಾಕಿದ ಚುನಾವಣೆ ಇದು. ಇಂದಿರಾ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್‌, ಶೇ.40ರಷ್ಟು ಮತ ಪಡೆದ 283 ಸ್ಥಾನಗಳನ್ನು ಗೆದ್ದುಕೊಂಡು ಸಿಂಪಲ್‌ ಬಹುಮತದೊಂದಿಗೆ ಅಧಿಕಾರಕ್ಕೆ ಬಂತು. ಆದರೆ, ಈ ಹಿಂದಿನ ಮೂರು ಚುನಾವಣೆಗಳಿಗೆ ಹೋಲಿಸಿದರೆ, ಅದ್ಭುತ ಗೆಲವು ಏನಲ್ಲ. ಈ ಚುನಾವಣೆಯಲ್ಲೂ ರಾಜ್ಯಸಭೆಯ 13 ಸದಸ್ಯರು ಕೆಳಮನೆಗೆ ಆಯ್ಕೆಯಾದರು. ವಿಶೇಷ ಎಂದರೆ, ರಾಜಗೋಪಾಲಚಾರಿ ಅವರ ಸ್ವತಂತ್ರ ಪಾರ್ಟಿ ಕಾಂಗ್ರೆಸ್‌ ನಂತರ ಅತಿ ದೊಡ್ಡ ಪಕ್ಷ ವಾಯಿತು. ಅದು ಒಟ್ಟು 44 ಸ್ಥಾನ ಗೆದ್ದುಕೊಂಡಿತು. 35 ಸ್ಥಾನಗಳೊಂದಿಗೆ ಬಿಜೆಎಸ್‌ ಮೂರನೇ ಸ್ಥಾನದಲ್ಲಿ ಉಳಿಯಿತು. ಗುಜರಾತ್‌, ಮದ್ರಾಸ್‌, ಒಡಿಶಾ, ರಾಜಸ್ಥಾನ, ಪಶ್ಚಿಮ ಬಂಗಾಳ, ಕೇರಳ, ದಿಲ್ಲಿಯಲ್ಲಿ ಕಾಂಗ್ರೆಸ್‌ ಭಾರಿ ಸೋಲು ಎದುರಾಯಿತು. ಅಂದಿನ ರಾಜಕಾರಣದಲ್ಲಿ ಕಾಂಗ್ರೆಸ್‌ನದ್ದು ದೊಡ್ಡಣ್ಣ ಆ್ಯಟಿಟ್ಯೂಡ್‌. ಆದರೆ, ನೆಹರು ಮತ್ತು ಶಾಸ್ತ್ರಿ ಸಾವಿನ ನಂತರ ಕಾಂಗ್ರೆಸ್‌ನೊಳಗಿದ್ದ ಏಕತೆ ಮಾಯವಾಗಿ, ಒಳಜಗಳ ಶುರುವಾದವು. ಆದರೂ ಅದೆಲ್ಲವನ್ನೂ ಸಂಭಾಳಿಸುವಲ್ಲಿ ಇಂದಿರಾ ಯಶಸ್ವಿಯಾದರು. ಇದೇ ಅವಧಿಯಲ್ಲಿ ದೇಶದ ಆರ್ಥಿಕ ಸ್ಥಿತಿ ಕೂಡ ಗಣನೀಯವಾಗಿ ಇಳಿಜಾರಿನಲ್ಲಿತ್ತು. ಪಂಚವಾರ್ಷಿಕ ಯೋಜನೆ ಮೂಲಕ ಶೇ.5.6ರಷ್ಟು ಜಿಡಿಪಿ ಸಾಧಿಸುವ ಗುರಿ ಇತ್ತು. ವಾಸ್ತವದಲ್ಲಿ ಗುರಿಸಾಧನೆಯಾಗಿದ್ದು ಕೇವಲ ಶೇ.2.4 ಅಷ್ಟೆ. ಆಡಳಿತಾತ್ಮಕ ಮತ್ತು ರಾಜಕೀಯ ವೈಫಲ್ಯಗಳ ಒಟ್ಟು ಪರಿಣಾಮ ಮುಂದಿನ ಐದು ವರ್ಷಗಳಲ್ಲಿ ಕಾಣಬೇಕಾಯಿತು. ನಾಲ್ಕನೇ ಲೋಕಸಭೆಯ ಮತ್ತೊಂದು ವಿಶೇಷ ಎಂದರೆ, ಇಬ್ಬರು ಸ್ಪೀಕರ್‌ಗಳನ್ನು ಕಂಡಿತು. 1967ರಿಂದ 1969ರವರೆಗೆ ನೀಲಂ ಸಂಜೀವ್‌ ರೆಡ್ಡಿ ಹಾಗೂ 1969ರಿಂದ 71ವರೆಗೆ ಜಿ.ಎಸ್‌.ಧಿಲ್ಲೋನ್‌ ಅವರು ಸ್ಪೀಕರ್‌ ಆಗಿ ಕಾರ್ಯನಿರ್ವಹಿಸಿದರು. ಕಾಂಗ್ರೆಸ್‌ ತೊರೆದಿದ್ದರಿಂದ ಸಂಜೀವ್‌ ರೆಡ್ಡಿ ಅವರು ಸ್ಪೀಕರ್‌ ಹುದ್ದೆಯನ್ನು ಬಿಟ್ಟುಕೊಡಬೇಕಾಯಿತು.
Vijaya Karnataka Web India_Gandhi

- ತಿಪ್ಪಾರ

ಶೇ.80: 1951ರಿಂದ 1992ವರೆಗಿನ ಚುನಾವಣೆಗಳಲ್ಲಿ ರಾಷ್ಟ್ರೀಯ ಪಕ್ಷ ಗಳು ಗೆದ್ದ ಒಟ್ಟು ಸೀಟುಗಳ ಪ್ರಮಾಣ. ನಂತರ ಚುನಾವಣೆಗಳಲ್ಲಿ ಪ್ರಾದೇಶಿಕ ಪಕ್ಷ ಗಳ ಮೇಲುಗೈ.

176 : 2014ರ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷ ಗಳು ಗೆದ್ದು ಸೀಟುಗಳ ಸಂಖ್ಯೆ.

465 : ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಒಟ್ಟು ರಾಜಕೀಯ ಪಕ್ಷ ಗಳು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌